Monday, June 1, 2026
23.7 C
Belagavi

ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ:ಬಸವರಾಜ ಬೊಮ್ಮಾಯಿ

advertisement

spot_img

ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ:ಬಸವರಾಜ ಬೊಮ್ಮಾಯಿ

ನಾವೆಲ್ಲ ಮನುಷ್ಯರಾಗಿ ಹುಟ್ಟಿ ಮಾನವರಾಗಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ: ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ. ನಾವ್ಯಾರು ಅರ್ಜಿ ಹಾಕಿ ಹುಟ್ಟಿಲ್ಲ. ಆದರೆ, ಬದುಕು ನಮ್ಮ ಕೈಯಲ್ಲಿ ಇದೆ. ಯಾವುದು ನಮ್ಮ ಕೈಯಲ್ಲಿ ಇಲ್ಲ ಅದರ ಬಗ್ಗೆ ಚಿಂತನೆ ಮಾಡುತ್ತೇವೆ. ಯಾವುದು ನಮ್ಮ ಕೈಯಲ್ಲಿ ಇದೆ ಅದರ ಬಗ್ಗೆ ಚಿಂತನೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಿಹೊಸೂರ ಗ್ರಾಮದ ಶ್ರೀ ಉಡಚಮ್ಮ ದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ದೇವಿ ಹೊಸೂರು ಗ್ರಾಮದಲ್ಲಿ ಉಡಚ್ಚಮ್ಮ ದೇವಿಯ ಕೃಪಾಶೀರ್ವಾದ ಇದೆ. ಉತ್ತಮ ಮಳೆ ಬೆಳೆ ಬರಲಿ, ಬಂದಂತಹ ಬೆಳೆಗೆ ಉತ್ತಮ ಬೆಲೆ ಸಿಗಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ದೇವಿ ಹೊಸೂರು ಗ್ರಾಮ ಬಹಳ ಮಹತ್ವದ ಗ್ರಾಮ ಈ ಗ್ರಾಮ ಏನು ನಿರ್ಣಯ ಮಾಡುತ್ತದೆ ಅದು ಇಡಿ ತಾಲೂಕು -ನಿರ್ಣಯ ಮಾಡುತ್ತದೆ. ಅಂಥಹ ಇತಿಹಾಸ ಇರುವ ಗಾಮ. ಆದ್ದರಿಂದ ಇಂತಹ ಗ್ರಾಮದಲ್ಲಿ ದೇವಿಯ ಜಾತ್ರೆ ನಡೆಯುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ. ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ. ನಾವ್ಯಾರು ಅರ್ಜಿ ಹಾಕಿ ಹುಟ್ಟಿಲ್ಲ. ಆದರೆ, ಬದುಕು ನಮ್ಮ ಕೈಯಲ್ಲಿ ಇದೆ. ಯಾವುದು ನಮ್ಮ ಕೈಯಲ್ಲಿ ಇಲ್ಲ ಅದರ ಬಗ್ಗೆ ಚಿಂತನೆ ಮಾಡುತ್ತೇವೆ. ಯಾವುದು ನಮ್ಮ ಕೈಯಲ್ಲಿ ಇದೆ ಅದರ ಬಗ್ಗೆ ಚಿಂತನೆ ಮಾಡುವುದಿಲ್ಲ. ಹರಕೆಗಳನ್ನು ಮುಟ್ಟಿಸುವ ಸಲುವಾಗಿ ದೇವರ ಮೊರೆ ಹೋಗುವುದು ಅತ್ಯಂತ ಅವಶ್ಯಕತೆ ಇದೆ ಎಂದು ಹೇಳಿದರು.ನಾವೆಲ್ಲ ಮನುಷ್ಯರಾಗಿ ಹುಟ್ಟಿ ಮಾನವರಾಗಬೇಕು. ಕಾಮ, ಕ್ರೋಧ, ಮದ, ಮತ್ಸರದ ಸಂಕೋಲೆಯಲ್ಲಿ ಸಿಲುಕಿದವನು ಮನುಷ್ಯ. ಅದೆಲ್ಲದರಿಂದ ಹೊರ ಬಂದು ನ್ಯಾಯ, ನೀತಿ, ಧರ್ಮ, ಪೀತಿ ವಿಶ್ವಾಸದ ಸಂಕೋಲೆಯಲ್ಲಿ ಸಿಲುಕಿದವನು ಮಾನವ. ಆ ಕೆಲಸ ಮಾಡಬೇಕೆಂದರೆ ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯರನ್ನು ಗೌರವಿಂದ ಕಾಣುವ ಕೆಲಸ ಮಾಡಬೇಕು. ಸಂಬಂಧಗಳಿಗೆ ಗೌರವ ಕೊಡುವುದು. ಹಿರಿಯರಿಗೆ ಗೌರವ ಕೊಡುವುದು. ಸೌಹಾರ್ದತೆಯಿಂದ ಇರುವುದು ಅತ್ಯಂತ ಅವಶ್ಯಕತೆ ಇದೆ. ಈ ಕೆಲಸವನ್ನು ಎಲ್ಲರೂ ಮಾಡೋಣ. ಎಲ್ಲರ ಮೇಲೂ ದೇವಿಯ ಆಶೀರ್ವಾದ ಇರಲಿ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು ಹುಕ್ಕೇರಿ ಮಠ, ಹಾವೇರಿ ಶ್ರೀಗಳು ಸಾನಿಧ್ಯ ವಹಿಸಿದ್ದರು. ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ, ಮುಖಂಡರಾದ ಶ್ರೀ ಉಮೇಶ ಕರಿಗಾರ, ಶ್ರೀ ಶಶಿಧರ ಹೊಸಳ್ಳಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img