Wednesday, August 12, 2026
20.7 C
Belagavi

ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಬಸವರಾಜ ಬೊಮ್ಮಾಯಿ

advertisement

spot_img

ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಬಸವರಾಜ ಬೊಮ್ಮಾಯಿ

ಬ್ಯಾಲೆಟ್ ಪೇಪರ್ ನಲ್ಲೂ ಮೋಸ ಮಾಡಿ, ಸೋತಿರುವುದು ಕಾಂಗ್ರೆಸ್ ಗೆ ಮುಖಭಂಗವಾಗಿದೆ: ಬಸವರಾಜ ಬೊಮ್ಮಾಯಿ

ಕೊಪ್ಪಳ: ರಾಜ್ಯದ ನಡೆದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ನಲ್ಲಿಯೂ ಬಿಜೆಪಿ ಬಹುಮತ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಬರುವ ಉಪ ಚುನಾವಣೆ ಫಲಿತಾಂಶದಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ನಾವು ಮಾಡಿರುವ ಸಾಧನೆಗಳು ಮತ್ತು ಚುನಾವಣೆಯಲ್ಲಿ ಸಂಘಟಿತವಾದ ಪ್ರಚಾರದ ಪರಿಣಾಮ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಗಳಿಸುವ ವಿಶ್ವಾಸ ಇದೆ. ಅಲ್ಲದೇ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ನಲ್ಲಿ ಕೂಡಾ ಬಿಜೆಪಿ ಗೆಲ್ಲುತ್ತದೆ ಅಂತ ಎಲ್ಲ ಸಮೀಕ್ಷೆ ಹೇಳಿದೆ. ಈ ಭಾರಿ ಪಶ್ಚಿಮ ಬಂಗಾಲದಲ್ಲಿ ದೊಡ್ಡ ಪರಿವರ್ತನೆಯಾಗತ್ತದೆ. ಭಾರತದ ರಾಜಕಿಯ ದಿಕ್ಸೂಚಿ ಬದಲಾವಣೆಯಾಗುವ ಪಲಿತಾಂಶ ಬರತ್ತದೆ ಎಂದು ಹೇಳಿದರು.ಕಾಂಗ್ರೆಸ್ ಗೆ ಮುಖಭಂಗ
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ರಾಜ್ಯವನ್ನು ಅಧೊಗತಿಗೆ ತೆಗೆದುಕೊಂಡು ಹೋಗಿ ಪ್ರಾಚೀನ ಕಾಲಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಚುನಾವಣೆಯನ್ನೂ ಪ್ರಾಚೀನಕಾಲಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ತಂತ್ರಜ್ಞಾನ ಬಹಳಷ್ಟು ಮುಂದೆ ಹೋಗಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕೂಡಾ ಹಲವು ಚುನಾವಣೆಗಳಾಗಿವೆ. ಕಾಂಗ್ರೆಸ್ ಪಕ್ಷ ಸೋಲುತ್ತಿರುವುದರಿಂದ ಬ್ಯಾಲೇಟ್ ಪೇಪರ್ ಕಡೆಗೆ ಹೋಗುತ್ತಿದೆ. ಆದರೆ, ಬ್ಯಾಲೆಟ್ ಪೇಪರ್ ನಲ್ಲಿ ಮೋಸ ಮಾಡಿ ಗೆದ್ದು ಈಗ ಸೋತಿರುವುದು ಕಾಂಗ್ರೆಸ್ ಗೆ ಮುಖಭಂಗ ಆಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತೋಗಿದೆ, ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ ಎಂದು ಹೇಳಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img