Monday, August 10, 2026
20.5 C
Belagavi

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ

advertisement

spot_img

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮುಖ್ಯಮಂತ್ರಿ ಟೀಕೆ

ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ, ಏಪ್ರಿಲ್ 3: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಬಿಜೆಪಿಗೆ ಸೋಲಿನ ಭಯ

ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದರು.

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ.
ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.ಬಿಜೆಪಿ ದ್ವಂದ್ವ ನೀತಿ

ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.

ಲೋಕಸಭಾ ಸ್ಥಾನಗಳ ಹೆಚ್ಚಳ: ಮಲತಾಯಿ ಧೋರಣೆ ಇರಬಾರದು

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಗಳನ್ನು ಹೆಚ್ಚಿಸಬೇಕು ಆದರೆ ಮಲತಾಯಿ ಧೋರಣೆ ಇರಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು ಎಂದರು.

ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು

ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ ಎಂದರು. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವ ಬಗ್ಗೆ ಮಾತನಾಡಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದೆ

ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದರು.

ಎಲ್ಲರಿಗೂ ಅನುದಾನ ನೀಡಿದಂತೆ ಅಲ್ಪಸಂಖ್ಯಾತರಿಗೂ ಅನುದಾನ ಒದಗಿಸಲಾಗಿದೆ

ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಯತ್ನಾಳ್ ಅವರು ಆರೋಪಿಸಿರುವ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ14% ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ

ಬಿಜೆಪಿ ಯವರು ಸಿಎಂ ಸ್ಥಾನದ ಬಗ್ಗೆ ಪದೇ ಪದೇ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಈಗಾಗಲೇ ಈ ಕುರಿತು ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು ಅವರೇನು ನಮ್ಮ ಹೈಕಮಾಂಡ್ ಅಲ್ಲ ಎಂದರು. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದರು.

ಬಿಜೆಪಿಯಿಂದ ಹಣದ ದುರುಪಯೋಗ

ಅಧಿಕಾರ ಮತ್ತು ಹಣದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಹಾಗೇನಾದರೂ ಹಣ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರೆ ಅದು ಬಿಜೆಪಿ ಎಂದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img