Monday, August 10, 2026
20.5 C
Belagavi

ಬಿಜೆಪಿ ರಣತಂತ್ರ : ದಾವಣಗೆರೆ ದಕ್ಷಿಣಕ್ಕೆ ಅಚ್ಚರಿ ಅಭ್ಯರ್ಥಿ, ಬಾಗಲಕೋಟೆ ಯಾರಿಗೆ ಟಿಕೆಟ್?..

advertisement

spot_img

ಬಿಜೆಪಿ ರಣತಂತ್ರ : ದಾವಣಗೆರೆ ದಕ್ಷಿಣಕ್ಕೆ ಅಚ್ಚರಿ ಅಭ್ಯರ್ಥಿ, ಬಾಗಲಕೋಟೆ ಯಾರಿಗೆ ಟಿಕೆಟ್?..

ಬೆಂಗಳೂರು : ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳ ಕಾವು ಜೋರಾಗುತ್ತಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಹಾಲಿ ಶಾಸಕರ ನಿಧನದ ಬಳಿಕ ಎದುರಾಗಿರುವ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಇಂದು ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಿಸಿದೆ.

ಪ್ರಮುಖವಾಗಿ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಗೆ ಮಣೆ ಹಾಕಿದೆ. ಈ ಮೂಲಕ ದಲಿತರ ಪರ ಎನ್ನುವ ಕಾಂಗ್ರೆಸ್ ಗೆ ನೇರ ಚೆಕ್ ಮೆಟ್ ಇಡುವ ಕೆಲಸ ಮಾಡಿದೆ.ಬಿಜೆಪಿ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಘೋಷಿಸಿದೆ. ಈ ಮೂಲಕ ಎಸ್ಟಿ ಸಮುದಾಯದ ಯುವ ನಾಯಕನಿಗೆ ಅವಕಾಶ ನೀಡಿದೆ.

ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿರುವ ಶ್ರೀನಿವಾಸ್ ದಾಸಕರಿಯಪ್ಪ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಜಿ. ಎಂ. ಸಿದ್ದಶ್ವರರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ವಿಚಾರದಲ್ಲಿಯೂ ತುಟಿ ಬಿಚ್ಚಿ ರಲಿಲ್ಲ. ವಿರೋಧವೂ ವ್ಯಕ್ತಪಡಿಸಿರಲಿಲ್ಲ. ಜಿಲ್ಲೆಯಲ್ಲಿನ ರಾಜಕೀಯ ಕಿತ್ತಾಟದಲ್ಲಿ ಎಂಟ್ರಿಯಾಗದೆ ಪಕ್ಷದ ಕೆಲಸ ಮಾಡುತ್ತಿದ್ದ ಶ್ರೀನಿವಾಸಗೆ ಎರಡು ಬಣಗಳ ಜೊತೆ ಉತ್ತಮ ಒಡನಾಟವಿದೆ.

ಶ್ರೀನಿವಾಸ್ ದಾಸಕರಿಯಪ್ಪ ಅವರು 2023ರ ವಿಧಾನಸಭೆ ಚುನಾವಣೆ ವೇಳೆಯೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಭರ್ಜರಿ ಓಡಾಟ ನಡೆಸಿದ್ದರು. ಆದರೆ ಅಂತಿಮವಾಗಿ ಅಜಯ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಒಲಿದಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದರು. ಡಾ. ಶಾಮನೂರು ಶಿವಶಂಕರಪ್ಪರು ಭರ್ಜರಿ ಜಯಭೇರಿ ಬಾರಿಸಿದ್ದರು..ಶ್ರೀನಿವಾಸ್ ದಾಸಕರಿಯಪ್ಪ ಅವರು ದಾಸಕರಿಯಪ್ಪ ಅವರ ಪುತ್ರ. ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದ ಅವರ ತಂದೆ ದಾಸಕರಿಯಪ್ಪ ಅವರು ಜೆಡಿಎಸ್ ನಲ್ಲಿ ಪ್ರಬಲ ನಾಯಕರಾಗಿದ್ದರು.
ಅವರ ಪುತ್ರನಿಗೆ ಮಣೆ ಹಾಕುವ ಮೂಲಕ ಬಿಜೆಪಿಯು ಹೊಸ ದಾಳ ಉರುಳಿಸಿದೆ.

ಡಾ. ಶಾಮನೂರು ಶಿವಶಂಕರಪ್ಪರ ನಿಧನದಿಂದ ತೆರವಾದ ಈ ಕ್ಷೇತ್ರಕ್ಕೆ ಶ್ರೀನಿವಾಸ್ ದಾಸಕರಿಯಪ್ಪ ಅವರು ಬಿಜೆಪಿಯ ಹುರಿಯಾಳಾಗಿದ್ದು, ತೀವ್ರ ಪ್ರಬಲ ಪೈಪೋಟಿ ನೀಡಲು ತಂತ್ರಗಾರಿಕೆ ಆರಂಭಿಸಿದ್ದಾರೆ. ಬಿಜೆಪಿ ಈ ಹಿಂದಿನ ಚುನಾವಣೆಗಳಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವ ಕೆಲಸ ಮಾಡುತ್ತ ಬಂದಿದೆ. ಹೀಗಾಗಿ ಈ ಬಾರಿಯ ಅಭ್ಯರ್ಥಿ ಆಯ್ಕೆಯು ಕಾಂಗ್ರೆಸ್ ಕಟ್ಟಿ ಹಾಕುವ ರಣತಂತ್ರದ ಭಾಗವಾಗಿಯೇ ವಿಶ್ಲೇಷಿಸಲಾಗುತ್ತಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img