ರೈತರ ತೋಟದಲ್ಲಿದ್ದ ಭಾರೀ ಗಾತ್ರದ ಹುಲಿ ಸೆರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೋನಿಯಲ್ಲಿ ಹುಲಿ ಸೆರೆ. ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಕ್ತಿ ಕಾಲೊನಿ ಗ್ರಾಮದ ಲೋಕೇಶ್ ಎಂಬವರ ಬಾಳೆತೋಟದಲ್ಲಿದ್ದ ಹುಲಿರಾಯ.ಭಾನುವಾರ ಹುಲಿ ಕಾಣಿಸಿಕೊಂಡು ಘರ್ಜಿಸುತ್ತಾ ಬೀಡುಬಿಟ್ಟಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದರು.ವಿಷಯ ತಿಳಿಯುತ್ತಿದ್ದಂತೆಯೇ ಬಂಡೀಪುರ ಹುಲಿ ರಕ್ಷಿತಾರಣ್ಯದ ಮದ್ದೂರು ವಲಯದ ಸಿಬ್ಬಂದಿಯಿಂದ ಹುಲಿ ಸೆರೆಗೆ ಸತತ ಕಾರ್ಯಾಚರಣೆ.ಹುಲಿಗೆ ಪಶು ವೈದ್ಯ ಡಾ.ಮಿರ್ಜಾ ವಾಸಿಂ ಅರಿವಳಿಕೆ ಚುಚ್ಚುಮದ್ದು ಕೊಟ್ಟ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.

ಹುಲಿಗೆ ಅಂದಾಜು 7-8 ವರ್ಷ ವಯಸ್ಸಾಗಿದೆ ಎನ್ನಲಾಗಿದೆ.ಹುಲಿಯ ಎದೆ ಮತ್ತು ಹಿಂಗಾಲಿಗೆ ಗಾಯ.ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿರುವ ಸಾಧ್ಯತೆ ಇದೆ.ಸೋಮವಾರದ ತನಕ ಹುಲಿಯ ಆರೋಗ್ಯದ ಮೇಲೆ ನಿಗಾ ಇರಿಸಿ ಬಳಿಕ ಪಶು ವೈದ್ಯರ ಸಲಹೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.ರಕ್ತದ ಮಾದರಿ ಸಂಗ್ರಹಿಸಿ ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.



