Saturday, April 11, 2026
28.1 C
Belagavi

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಹೇಳಿಕೆ

advertisement

spot_img

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಹೇಳಿಕೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ.‌

ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಧಾನಿ ಎದುರು ಬಾಯಿ ಬಿಡಲಾಗದೆ ಕೈಕಾಲು ನಡುಗುವಂತಹ ಸ‍್ಥಿತಿ ಇರುವ ಬಿಜೆಪಿಯೂ ಅಲ್ಲ, ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಕೂಡಾ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಅವರನ್ನೂ ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು. ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ.

ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಿ ಡಿ.ಕೆ.ಶಿವಕುಮಾರ್ ಅವರನ್ನು ಒಲಿಸಿಕೊಳ್ಳುವ ದುರಾಲೋಚನೆ ಏನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ದರೆ, ಅವರ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ, ಸುಳ್ಳು ಕೇಸ್ ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎನ್ನುವುದು ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ.

ಕರ್ನಾಟಕದ ಇತ್ತೀಚಿನ ರಾಜಕೀಯ ಇತಿಹಾಸದ ಪುಟಗಳ ಮೇಲೆ ಒಮ್ಮೆ ಕಣ್ಣಾಡಿಸಿದರೆ ಈ ಪೋನ್ ಕದ್ದಾಲಿಕೆ, ಗೂಢಚರ್ಯೆಗಳೆಲ್ಲ ಯಾವ ಪಕ್ಷದ ದುಷ್ಕೃತ್ಯಗಳು ಎನ್ನುವುದು ಅರಿವಾಗುತ್ತದೆ. ಈ ದುರ್ಬುದ್ದಿಯ ಕಾರಣದಿಂದಾಗಿಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ, ವಚನಭಂಗದಂತಹ ಅನಿಷ‍್ಠಗಳು ಕಾಣಿಸಿಕೊಂಡಿರುವುದು. 2004ರಿಂದ 2013 ವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ ರಾಜ್ಯ ಐದು ಮುಖ್ಯಮಂತ್ರಿಗಳನ್ನು, 2018ರಿಂದ 2023ರ 5 ವರ್ಷಗಳ ಅವಧಿಯಲ್ಲಿ ಮೂರು ಮುಖ್ಯಮಂತ್ರಿಗಳನ್ನು ರಾಜ್ಯ ಕಾಣುವಂತಾಗಲು ಇವರೊಳಗಿನ ಪರಸ್ಪರ ಅಪನಂಬಿಕೆ, ದ್ವೇಷ, ಅಸೂಯೆ, ಬೆನ್ನಿಗೆ ಚೂರಿ ಹಾಕುವ ಕುತಂತ್ರಗಳೇ ಕಾರಣ.

2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ಪೂಜ್ಯ ನಿರ್ಮಲಾನಂದನಾಥ ಸ್ವಾಮಿಗಳ ಫೋನನ್ನೆ ಕದ್ದಾಲಿಸಿದ್ದಾರೆ ಎಂದು ಈಗಿನ ಅವರ ರಾಜಕೀಯ ಸಂಗಾತಿ ಬಿ.ವೈ ವಿಜಯೇಂದ್ರ ಅವರೇ ಆರೋಪ ಮಾಡಿದ್ದರು. ಇದರ ಬಗ್ಗೆ ತನಿಖೆ ಮಾಡಿದ್ದ ಸಿಬಿಐ, ಒಬ್ಬ ಸ್ವಾಮೀಜಿಗಳದ್ದಷ್ಟೇ ಅಲ್ಲ, ಬದಲಿಗೆ ಏಳು ಸ್ವಾಮೀಜಿಗಳ ಫೋನ್ ಗಳ ಕದ್ದಾಲಿಕೆ ಮಾಡಲಾಗಿದೆ ಎಂದು ತಿಳಿಸಿತ್ತು. ನಂಬಿಕೆಗೆ ತಾನು ಅರ್ಹ ಅಲ್ಲ ಎಂದು ಸಾಬೀತು ಮಾಡಿರುವ ಕುಮಾರಸ್ವಾಮಿವರನ್ನು ಬಿಜೆಪಿಯವರು ಸುಮ್ಮನೆ ಬಿಟ್ಟಾರೆಯೇ? ಅವರ ವಿರುದ್ಧವೂ ಗೂಢಚಾರರನ್ನು ಬಿಟ್ಟಿರಬಹುದು. ಇಂತಹ ದುರ್ಬುದ್ದಿಗಾಗಿಯೇ ರಾಜ್ಯದ ಜನತೆ ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿರುವುದು ಎನ್ನುವುದು ನೆನಪಿರಲಿ.

ಅಧಿಕಾರವನ್ನು ದುರ್ಬಳಕೆ ಮಾಡಿ ಸರ್ಕಾರಿ ಯಂತ್ರಗಳ ಮೂಲಕವೇ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲ, ಸ್ವಪಕ್ಷದಲ್ಲಿ ತಮ್ಮ ನಾಯಕತ್ವಕ್ಕೆ ಪೈಪೋಟಿ ನೀಡಬಲ್ಲ ನಾಯಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬಂದ ದಿನದಿಂದಲೇ ಮಾಡುತ್ತಿದ್ದಾರೆ ಎನ್ನುವುದು ಜಗಜ್ಜಾಹೀರಾಗಿರುವ ಸತ್ಯ. ಹಾಡಹಗಲೇ ಪೊಲೀಸ್, ಸಿಬಿಐ, ಇಡಿ, ಐಟಿ ಇಲಾಖೆಗಳ ದುರ್ಬಳಕೆಯಾಗುತ್ತಿರುವ ಬಗ್ಗೆ ಇಡೀ ದೇಶದ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹವರು ತಮ್ಮ ರಾಜಕೀಯ ವಿರೋಧಿಗಳ ಫೋನ್‌ ಗಳನ್ನು ಕದ್ದು ಆಲಿಸದೆ ಬಿಡುತ್ತಾರೆಯೇ? ಆದರೆ ಇಂತಹ ಬೆದರಿಕೆಗಳಿಗೆ ನಾನಾಗಲಿ, ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ.

ಕುಮಾರಸ್ವಾಮಿಯವರಿಗೆ ಈ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು. ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಡಚರ್ಯೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ.

ಹೆಚ್.ಡಿ.ಕುಮಾರಸ್ವಾಮಿ ಮತ್ತು ಆರ್ ಅಶೋಕ್ ಅವರು ತಮ್ಮ ಅಮೂಲ್ಯ ಕ್ಷಣಗಳನ್ನು ಈ ರೀತಿ ಕುಟಿಲ ರಾಜಕೀಯದಲ್ಲಿ ವ್ಯರ್ಥಮಾಡುವ ಬದಲಿಗೆ ರಚನಾತ್ಮಕ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡಿ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಜ್ಞಾವಂತ ಮತದಾರರು ಐದು ವರ್ಷಗಳ ಕಾಲ ಸರ್ಕಾರ ನಡೆಸಲು ನಮಗೆ ಜನಾದೇಶ ನೀಡಿದ್ದಾರೆ. ವಿರೋಧ ಪಕ್ಷಗಳ ಎಲ್ಲ ಕುತಂತ್ರ-ಕುಚೇಷ್ಠೆಗಳ ನಡುವೆಯೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷ ಪೂರ್ಣಗೊಳಿಸಲಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img