Friday, July 17, 2026
23.9 C
Belagavi

ಜಲ್ ಜೀವನ್ ಮಿಷನ್ 2.0 ಕುರಿತಂತೆ  ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಸಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೀಡಿಯೋ ಸಂವಾದ

advertisement

spot_img
ಜಲ್ ಜೀವನ್ ಮಿಷನ್ 2.0 ಕುರಿತಂತೆ  ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಸಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೀಡಿಯೋ ಸಂವಾದ
1. ಪ್ರತಿ ನಾಗರಿಕನಿಗೂ  ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರನ್ನು ಖಾತ್ರಿಪಡಿಸುವ  ಬದ್ಧತೆಯಿಂದ ಇಂದು ಇಲ್ಲಿ ನೆರೆದಿರುವ ಎಲ್ಲರಿಗೂ ಸ್ವಾಗತ ಕೋರುತ್ತೇನೆ.
2. ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ  ನೀರಿಗಾಗಿ ಪರದಾಟವಿದೆಯಲ್ಲದೇ ಇದರೊಂದಿಗೆ  ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಿದ್ದೇವೆ.
3. ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನದಲ್ಲಿ ಕರ್ನಾಟಕ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗುಣಮಟ್ಟವನ್ನು ಕಾಯ್ದುಕೊಂಡಿದೆ.ಈ ಯೋಜನೆಯಡಿಯ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಏಜೆನ್ಸಿ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ.
4.ನಾವು ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ.86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಗ್ರಾಮಗಳಲ್ಲಿ ಹಾಗೂ 19,980 ಕಾಮಗಾರಿಗಳು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.
5.ಆದರೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕ ರೂ.17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ರೂ.8,880.71 ಕೋಟಿಯೂ ಸೇರಿದ್ದು, ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರಾಜಿ ಮಾಡದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ.
6. ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ. ಆದರೂ ರಾಜ್ಯ ಸರ್ಕಾರ ಕೇಂದ್ರದ ಪಾಲಿನ ಅನುದಾನವನ್ನು ಭರಿಸಿ, ಯೋಜನೆ ಅನುಷ್ಠಾನ ಮುಂದುವರೆಯುವಂತೆ ನೋಡಿಕೊಂಡಿದೆ.
7.ಇದೇ ವೇಳೆ ನಾವು ಸದೃಢವಾದ ಸಾಂಸ್ಥಿಕ ಹಾಗೂ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಲು ಒತ್ತು ನೀಡಿದ್ದೇವೆ. ಒ ಮತ್ತು ಎಂ ನೀತಿಯನ್ನು ಅನುಷ್ಠಾನಗೊಳಿಸಿರುವುದರಲ್ಲಿ ಕರ್ನಾಟಕ ಮೊದಲ ರಾಜ್ಯಗಳಲ್ಲಿ ಒಂದಾಗಿದೆ. ಲಿಂಗ ಸಮತೋಲನವುಳ್ಳ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳನ್ನು ಸಕ್ರಿಯವಾಗಿ ತೊಡಗಿಸಲಾಗಿದೆ. ಇದಕ್ಕಾಗಿಯೇ ಮೀಸಲಿರಿಸಲಾದ ಪಿಎಂಯು ಸ್ಥಾಪಿಸಲಾಗುತ್ತಿದೆ. ಜೀವ ಜಲ ಅಪ್ಲಿಕೇಶನ್,  ಜಿ. ಐ.ಎಸ್  ಆಧಾರಿತ ಆಸ್ತಿ ನಿರ್ವಹಣೆ, ನೈಜ ಸಮಯ ಮೇಲ್ವಿಚಾರಣೆ ಮುಂತಾದ ಡಿಜಿಟಲ್ ನಾವೀನ್ಯತೆಗಳು ಆಡಳಿತವನ್ನು ಪರಿವರ್ತಿಸುತ್ತಿವೆ. 1.51 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ವಿಧಾನದಲ್ಲಿ ತರಬೇತಿ ನೀಡುವ ಮೂಲಕ   ಸಮುದಾಯದ ಮಾಲೀಕತ್ವವನ್ನು ಸುಭದ್ರಪಡಿಸಲಾಗಿದೆ.
8.ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ, ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ಖಾತ್ರಿ ಪಡಿಸಲಾಗುತ್ತಿದೆ.
9.ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು  ಜ್ಞಾನ ಮತ್ತು ನಿರ್ದೇಶನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದ್ದು, ಈ ಮಿಷನ್ ಗಿರುವ ಪರಿವರ್ತನಾ ಸಾಮರ್ಥ್ಯವನ್ನು ಸಾಬೀತುಪಡಿಸಿದೆ.
10.ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ  ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲಾ ಗ್ರಾಮೀಣ ಜನತೆಗೆ  ಇದು ನಿರಂತರತೆಯನ್ನು ಖಚಿತಪಡಿಸುತ್ತದೆಯಲ್ಲದೆ,  ವೇಗ,  ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರಿನ ಹಂಚಿಕೆಯ ರಾಷ್ಟ್ರೀಯ ದೃಷ್ಟಿಕೋನವನ್ನು ಸಾಮೂಹಿಕವಾಗಿ ಸಾಧಿಸಲು ನಮಗೆ ಅನುವು ಮಾಡಿಕೊಡುತ್ತದೆ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img