ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ CLP ಸಭೆ ನಡೆಯಿತು.
ಡಿಸಿಎಂ ಮತ್ತು KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಬೊಸರಾಜು ಅವರು, ದಿನೇಶ್ ಗುಂಡೂರಾವ್ ಮತ್ತು ಸತೀಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬರೂ ಅರ್ಥಪೂರ್ಣವಾಗಿ ಪಾಲ್ಗೊಳ್ಳುವಂತೆ, ವಿಷಯ ಮಂಡನೆ ಮಾಡುವಂತೆ ಕರೆ ನೀಡಿದರು



