Sunday, August 9, 2026
20.1 C
Belagavi

ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಸಿಎಂ ಡಿ ಕೆ‌ ಶಿವಕುಮಾರ್ ತೀವ್ರ ಸಂತಾಪ

advertisement

spot_img

ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಸಿಎಂ ಡಿ ಕೆ‌ ಶಿವಕುಮಾರ್ ತೀವ್ರ ಸಂತಾಪ

ಬೆಂಗಳೂರು : ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಎಲ್ಲರ ಮನಗೆದ್ದ ಗಾನಕೋಗಿಲೆ ಎಸ್ ಜಾನಕಿ ಅವರ ನಿಧ‌ನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಖ್ಯಾತಿಯ ಬಹುಭಾಷಾ ಗಾಯಕಿ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡ ಭಾಷೆ ಇರುವ ತನಕ ಎಸ್ ಜಾನಕಿ ಅವರ ಹಾಡುಗಳು ಅಜರಾಮರ. ಅವರ ದನಿಯಲ್ಲಿ ಕನ್ನಡ ಹಾಡುಗಳನ್ನು ಕೇಳಿ ಬೆಳೆದವರು ನಾವು. ಕನ್ನಡದ ಸೊಬಗಿಗೆ ಮಾಧುರ್ಯ ತುಂಬಿದವರು ಅವರು” ಎಂದು ಸಿಎಂ ಅವರು ಸ್ಮರಿಸಿದ್ದಾರೆ.

“ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಅವರು ಮೂಲತಃ ಆಂಧ್ರಪ್ರದೇಶದವರಾದರೂ ಕನ್ನಡದ ಮೇಲಿನ‌ ಅಭಿಮಾನಕ್ಕೆ ಮೈಸೂರಿನಲ್ಲಿ ನೆಲೆಸಿದ್ದರು. 20 ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವ ಹೆಗ್ಗಳಿಕೆ ಇವರದು.ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ” ಎಂದು ನೋವು ವ್ಯಕ್ತಪಡಿಸಿದ್ದಾರೆ.

ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತಿತರ ರಾಜ್ಯಗಳ ಪ್ರಶಸ್ತಿ ಇವರ ಮುಡಿಗೇರಿದ್ದವು. ಜಾನಕಮ್ಮನವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img