Wednesday, July 15, 2026
25.6 C
Belagavi

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

advertisement

spot_img

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ರಾಜ್ಯದಲ್ಲಿ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಮನೆ, ನಿವೇಶನಗಳನ್ನು ನೀಡಲಾಗಿದೆ: ಸಿ.ಎಂ

ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು KHB ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅವರು ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥಾದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ವುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ KHB ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖಿಸಿದರು.

ಖಾಲಿ ಇರುವ KHB ನಿವೇಶನಗಳ ಮಾರಾಟದಿಂದ KHB ಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ kHB ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದರು.ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ ಎಂದರು.

ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆಹೆಚ್ ಬಿ ಅಧ್ಯಕ್ಷರಾದ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, MLC ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img