Thursday, August 13, 2026
25.1 C
Belagavi

ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ

advertisement

spot_img

ಬೆಂಗಳೂರು, ಡಿಸೆಂಬರ್ 22:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಡಿಸೆಂಬರ್ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆ ತಿಳಿಸಲಿದೆ. ಕೆಲ ದಿನಗಳ ಹಿಂದೆಯಷ್ಟೇ ಕೆಎಸ್‌ಸಿಎ ಹೊಸ ಸಮಿತಿ ರಚನೆಯಾಗಿದೆ. ಎಲ್ಲವನ್ನು ಪೂರ್ಣಗೊಳಿಸುವುದಾಗಿ ಕೆಎಸ್‌ಸಿಎ ಅವರು ಹೇಳಿದ್ದಾರೆ ಎಂದು ತಿಳಿಸಿದರು.ಸಭೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ. ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ ಅವರು ಹಾಗೂ ಕೆಎಸ್‌ಸಿಎ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img