2018 ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಪರವಾಗಿ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಖರೀದಿ ಮಾಡಿರುವ ಬಗ್ಗೆ ಮಾಜಿ ಸಚಿವರಾದ ಸಿ. ಎಂ. ಇಬ್ರಾಹಿಂ ಅವರು ನೀಡಿರುವ ಹೇಳಿಕೆ ನಿಜವಾಗಿದ್ದಲ್ಲಿ, ಅಂತಹ ಮತಗಳಿಂದ ಆಯ್ಕೆಗೊಂಡ ಅಭ್ಯರ್ಥಿಯ ಚುನಾವಣೆಯನ್ನು ಅಸಿಂಧುಗೊಳಿಸಬೇಕೆಂದು ಆಗ್ರಹಿಸಿ ಮತ್ತು ಅರಸೀಕೆರೆ ಶಾಸಕರಾದ ಶಿವಲಿಂಗೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ 7 ಕೋಟಿ ಹಣವನ್ನು ಹಂಚಬೇಕೆಂದು ಮಾತನಾಡಿರುವ ವಿಡಿಯೋ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶ್ರೀ ಅರುಣ್ ಶಹಾಪುರ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ವಸಂತ ಕುಮಾರ್, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.