ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ, ಹೋಬಳಿ ಇರಲಿ ಅಥವಾ ನಗರದ ಬೀದಿಗಳಿರಲಿ… ಎಲ್ಲೆಡೆ ಕೇಳಿ ಬರುತ್ತಿರುವುದು ಒಂದೇ ಧ್ವನಿ – ಅದು ಕಾಂಗ್ರೆಸ್ ಜಯಘೋಷ!
ಇಂದು ಸಂಜೆ ಬಾಗಲಕೋಟೆ ನಗರದ ವಾರ್ಡ್-29ರಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಜನರು ಅಪಾರ ಉತ್ಸಾಹದಿಂದ ಪಾಲ್ಗೊಂಡಿದ್ದರು. ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಜನಾಭಿಪ್ರಾಯ ಸ್ಪಷ್ಟವಾಗಿ ವ್ಯಕ್ತವಾಗಿದ್ದು, ಗೆಲುವಿನ ದಿಕ್ಕಿನಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸಿದೆ.
ಅಭ್ಯರ್ಥಿ ಶ್ರೀ ಉಮೇಶ್ ಮೇಟಿ, ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಶಿವಾನಂದ ಪಾಟೀಲ್, ಮಾಜಿ ಶಾಸಕರಾದ ಶ್ರೀ ಆನಂದ ನ್ಯಾಮಗೌಡ, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ!



