Monday, August 10, 2026
20.5 C
Belagavi

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್

advertisement

spot_img

ವಾರ್ತಾ ಇಲಾಖೆ ಆಯುಕ್ತರಾಗಿ
ಡಿಐಜಿ ಎಂ.ಎನ್.ಅನುಚೇತ್

ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರನ್ನಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಬಾರದಲ್ಲೂ ಇವರನ್ನು ಇರಿಸಿ ಸರ್ಕಾರ ಆದೇಶಿಸಿದೆ.
ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು.ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ “ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.
2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ತಮ್ಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ (CID) ವಿಭಾಗದ ಎಸ್ಪಿ ಆಗಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ (DCP Central) ಆಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಇವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ (DIGP) ಆಗಿ ಕಾರ್ಯನಿರ್ವಹಿಸುತ್ತಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿರುವ ಡಿಐಜಿ ಎಂ.ಎನ್. ಅನುಚೇತ್ ಅವರಿಗೆ ʼ ಬೆವರ ಹನಿʼ ಪ್ರಾದೇಶಿಕ ದಿನಪತ್ರಿಕೆ ಹಾಗೂ ಕೋಲಾರ ಜಿಲ್ಲಾ ಆವೃತ್ತಿ ತಂಡದ ಪರವಾಗಿ ಸಂಪಾದಕ ಕುಚ್ಚಂಗಿ ಪ್ರಸನ್ನ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img