Wednesday, August 12, 2026
20.7 C
Belagavi

ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆ

advertisement

spot_img

ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆ

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಿ
-ಜಿಪಂ ಸಿಇಒ ಭುವನೇಶ ಪಾಟೀಲ

ಧಾರವಾಡ  ಜು.2: ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಪರಿಶೀಲನೆ ಮಾಡಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು.

ಅವರು ಇಂದು (ಜುಲೈ 2) ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಜನರು ಕುಡಿಯುವ ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಸಾರ್ವಜನಿಕರು ಬೋರವೆಲ್ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದರೆ, ಸೂಚನಾ ಫಲಕವನ್ನು ಅಳವಡಿಸಬೇಕಾಗುತ್ತದೆ. ಕಲುಷಿತ ನೀರು ಪೂರೈಕೆ ಮಾಡುತ್ತಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಶಾಲೆ, ಅಂಗನವಾಡಿ ಹಾಗೂ ಮನೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಈಗಾಗಲೇ ದುರಸ್ತಿ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ವಾರದೊಳಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಬೇಕು. ದುರಸ್ತಿ ಕಾರ್ಯ ಕೈಗೊಳ್ಳದ ಗುತ್ತಿಗೆದಾರರನ್ನು ತೆಗೆದು ಹಾಕಲಾಗುವುದು. ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಾಮರ್ಶೆ ಮಾಡಬೇಕು. ಮೇಲ್ಮಟ್ಟದ ಕುಡಿಯುವ ನೀರಿನ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಬೇಕು ಎಂದು ಅವರು ತಿಳಿಸಿದರು.

ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರರಾದ ಜಗದೀಶ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪರಶುರಾಮ ಎಫ್.ಕೆ., ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಕಮಲಾ ಬೈಲೂರು ಸೇರಿದಂತೆ ಎಲ್ಲ ತಾಲೂಕು ಪಂಚಾಯತಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img