Monday, August 10, 2026
21.2 C
Belagavi

ನವಲಗುಂದ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲು ಶ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ, ಭೂಮಿ ಪೂಜೆ ಸಮಾರಂಭ

ನವಲಗುಂದ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲು ಶ್ರಮ
-ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ ಫೆ.8: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.

ಇಂದು ಶಿರಗುಪ್ಪಿ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಯೋಗದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ, ಭೂಮಿ ಪೂಜೆ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಅಲ್ಲದೇ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ. ಶಾಸಕ ಎನ್.ಎಚ್.ಕೋನರಡ್ಡಿ ನಿಷ್ಠಾವಂತ ಪ್ರಾಮಾಣಿಕ ಶಾಸಕರಾಗಿದ್ದಾರೆ. ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಚಾಲನೆ ನೀಡಲಾಗಿರುತ್ತದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣವಾಗಿದೆ. ಈ ಹಿಂದೆ ರೂ.1610 ಕೋಟಿ ಅಂದಾಜು ವೆಚ್ಚದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ವಿಳಂಬ ಮಾಡಿದ ನಂತರ ರೂ.200 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತಿದೆ. ಈ ಹಳ್ಳದ ಪ್ರವಾಹದಿಂದ ಸುಮಾರು 37 ಹಳ್ಳಿಗಳು ಹಾಗೂ 20 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಪ್ರವಾಹ ಉಂಟಾಗುತ್ತಿತ್ತು. ರೂ. 150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು. ಕೇಂದ್ರ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ. ಕೇಂದ್ರ ವನ್ಯಜೀವಿ ಮಂಡಳಿಯು ಅನುಮತಿ ಕೂಡಲೇ ನೀಡಬೇಕಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ
ರೂ.5300 ಕೋಟಿ ಕೊಡುತ್ತೇವೆ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ. ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಬಣ್ಣಿಸಿದ್ದರು. 2005 ರಲ್ಲಿ ಮನರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಅವರು ತಿಳಿಸಿದರು.ನಾವು ನಂಬಿಕೆ ಇಟ್ಟಿಕೊಂಡಿದ್ದು ಮನುಷ್ಯ ಧರ್ಮ, ಮಾನವೀಯತೆ ಧರ್ಮ. ಬಸವಣ್ಣನವರು ಇವನಾರವ ಇವನಾರವ ಎಂದೆನಿಸದಿರಯ್ಯ ಇವ ನಮ್ಮವ ಇವ ನಮ್ಮವ ಎಂದೆಸಯ್ಯಾ.‌.. ಎಂದು ಹೇಳಿದ್ದಾರೆ. ಸುಮಾರು 1.16 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ‌ ಯೋಜನೆಗೆ ವ್ಯಯಿಸಲಾಗಿದೆ. ವಾರ್ಷಿಕವಾಗಿ ಸುಮಾರು 54 ಸಾವಿರ ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತದೆ. ಪ್ರತಿ ಕುಟಂಬಕ್ಕೆ 4-5 ಸಾವಿರ ಪ್ರತಿ ತಿಂಗಳು ನೀಡಲಾಗುತ್ತಿದೆ. ವರ್ಷಕ್ಕೆ 50 ಸಾವಿರ ಹಣ ನೇರವಾಗಿ ಮುಟ್ಟಲಿದೆ. ಸುಮಾರು 25 ಸಾವಿರ ಕೋಟಿ ನೀರಾವರಿಗೆ ಖರ್ಚು ಮಾಡಲಾಗಿದೆ. 4.5 ಲಕ್ಷ ಕೋಟಿಗೂ ಹೆಚ್ಚು ಹಣ ಕೇಂದ್ರಕ್ಕೆ ಕೊಡುತ್ತಿದ್ದೇವೆ. ಆದರೆ ಕೇಂದ್ರದಿಂದ 60 ಸಾವಿರ ಕೋಟಿ ಮಾತ್ರ ರಾಜ್ಯಕ್ಕೆ ಮರಳುತ್ತಿದೆ. ಮನರೇಗಾ ಯೋಜನೆಯನ್ನು ಮರು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇವೆ. ಶೇ. 53 ಮಹಿಳೆಯರು ಇದ್ದಾರೆ. ಅದರಲ್ಲಿ ಶೇ. 28 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಇದ್ದಾರೆ. ಶೇ.17 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 11 ರಷ್ಟು ಪರಿಶಿಷ್ಟ ಪಂಗಡ ವರ್ಗದವರಿದ್ದಾರೆ ಎಂದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img