Monday, August 10, 2026
20.5 C
Belagavi

ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲ ಆಗುವ ರೀತಿ ‘ಎಸ್.ಐ.ಆರ್’ ಪ್ರಕ್ರಿಯೆ ನಡೆಸುತ್ತಿದೆ: ಡಾ. ಯತೀಂದ್ರ ಸಿದ್ದರಾಮಯ್ಯ

advertisement

spot_img

ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲ ಆಗುವ ರೀತಿ ‘ಎಸ್.ಐ.ಆರ್’ ಪ್ರಕ್ರಿಯೆ ನಡೆಸುತ್ತಿದೆ: ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜೂನ್ 28:

ಮೈಸೂರಿನ ಜಿಕೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಿದ್ದ ವಿಭಾಗೀಯ ಮಟ್ಟದ ಎಸ್.ಐ.ಆರ್ ಜಾಗೃತಿ ಸಮಾವೇಶದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು.

ಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗವು ಯಾವುದೇ ಪಕ್ಷಪಾತ ಇಲ್ಲದೆ ಕಾರ್ಯನಿರ್ವಹಿಸಬೇಕು, ಆಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದರು.ಈ ಹಿಂದೆ ಮತದಾರರ ಪರಿಷ್ಕರಣೆ ನಡೆದಾಗ ಚುನಾವಣಾ ಆಯೋಗವು ಹೊಸದಾಗಿ ಮತದಾರರನ್ನು ಸೇರಿಸುತ್ತಿದ್ದರೇ ಹೊರತು, ಪಟ್ಟಿಯಿಂದ ತೆಗೆದು ಹಾಕುತ್ತಿರಲಿಲ್ಲ ಹಾಗೂ ಮತದಾರರ ದಾಖಲೆಗಳನ್ನು ಕೇಳುತ್ತಿರಲಿಲ್ಲ. ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ತಮಿಳುನಾಡು ಮತ್ತು ಬಿಹಾರದಲ್ಲಿ ಬಿಜೆಪಿಗೆ ಹೆಚ್ಚು ಲಾಭವಾಗುವಂತೆ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದರು.

ಎಸ್.ಐ.ಆರ್ ಪ್ರಕ್ರಿಯೆ ನಡೆಯುವಾಗ ಅರ್ಜಿಯಲ್ಲಿ ತಪ್ಪು ಮಾಹಿತಿ ಕೊಟ್ಟರೆ ಅವರ ಹೆಸರು ಅಂತಿಮ ಪಟ್ಟಿಯಲ್ಲಿ ಬರುವುದೇ ಇಲ್ಲ. ಹಾಗಾಗಿ ನಮ್ಮ ಬಿ.ಎಲ್.ಒ.ಗಳು ಪ್ರತಿ ಮತದಾರರು ಅರ್ಜಿ ಸಲ್ಲಿಸುವಾಗ ಸಹಾಯ ಮಾಡಬೇಕು, ಮಾಹಿತಿ ಸರಿ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಸ್ವಲ್ಪ ಎಚ್ಚರ ತಪ್ಪಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯದಲ್ಲಿ ಹಾನಿಯಾಗುವುದು ನಿಶ್ಚಿತ ಎಂದು ಹೇಳಿದರು.ಮತದಾರರಿಗೆ ಆಯೋಗ ಕೇಳಿರುವ 11 ದಾಖಲೆಗಳು ಸುಲಭವಾಗಿ ಸಿಗಲು ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದು, ಗ್ರಾಮ ಪಂಚಾಯತ್ ಹಾಗೂ ನಗರ ಪಾಲಿಕೆ ಮಟ್ಟದಲ್ಲಿ ದಾಖಲೆಗಳು ಸಿಗಲಿವೆ. ಈ ದಾಖಲೆಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಸರಿಯಾದ ಮಾಹಿತಿ ಒದಗಿಸದಿದ್ದರೆ ಪೌರತ್ವವೇ ರದ್ದಾಗಬಹುದು, ಸರ್ಕಾರಿ ಸೌಲಭ್ಯಗಳು ಸಿಗದೇ ಹೋಗಬಹುದು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ನಮ್ಮ ಪಕ್ಷದ ಬಿ.ಎಲ್.ಒ.ಗಳು ಆ ದಾಖಲೆಗಳು ಹಾಗೂ ಸಮಗ್ರ ಪ್ರಕ್ರಿಯೆ ಕುರಿತು ಜನರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ತಿಳಿಸಿದರು.ಜನಜಾಗೃತಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಚಂದ್ರಶೇಖರ್, ಉಪಾಧ್ಯಕ್ಷರಾದ ವಿ.ಆರ್. ಸುದರ್ಶನ್, ಜಿಲ್ಲಾಧ್ಯಕ್ಷರಾದ ಬಿ.ಜೆ. ವಿಜಯಕುಮಾರ್, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img