Thursday, August 13, 2026
25.1 C
Belagavi

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

advertisement

spot_img

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:
-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಧಾರವಾಡ _ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಯಾದ ವಿ.ಅನ್ಬುಕುಮಾರ್ ಅವರು ಇಂದು (ಜು.20) ಬೆಳಿಗ್ಗೆ ಕೆ.ಸಿ.ಡಿ ಕಾಲೇಜ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸುಮಾರು 500 ವಿದ್ಯಾರ್ಥಿಗಳಿಂದ ಮಾನವ ಸರಪಳಿ (ಸ್ವೀಪ್ ಚಟುವಟಿಕೆ) ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

18 ವರ್ಷ ವಯಸ್ಸು ಪೂರ್ಣಗೊಳಿಸಿದ ಯುವ ಮತದಾರರು ಈ ಅಭಿಯಾನದ ಪ್ರಯೋಜನ ಪಡೆದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಎಲ್ಲರೂ ಸಹಕರಿಸಬೇಕೆಂದು ಅವರು ಹೇಳಿದರು.

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIಖ) ಕಾರ್ಯಕ್ರಮ ಯಶಸ್ವಿಯಾಗಿ ಸಾಗುತ್ತಿದ್ದು, ರಾಜ್ಯದಲ್ಲಿ ಸುಮಾರು ಐದೂವರೆ ಕೋಟಿ ಮತದಾರರ ಪೈಕಿ ಮೂರುವರೆ ಕೋಟಿ ಮತದಾರರ ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.ಈ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ರಾಜ್ಯದ 59 ಸಾವಿರ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‍ಒ) ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಜೊತೆಗೆ, ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡುತ್ತಿರುವ ಜಿಲ್ಲಾಧಿಕಾರಿಗಳು, ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಸೇವೆಯನ್ನು ಅಭಿನಂದಿಸಲು ಇಷ್ಟಪಡುತ್ತೇನೆ ಎಂದು ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಅವರು ಹೇಳಿದರು.

ಧಾರವಾಡ ಜಿಲ್ಲಾಡಳಿತವು ಸುಮಾರು 500 ವಿದ್ಯಾರ್ಥಿಗಳಿಂದ ಇಂದು ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್.ಆರ್., ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪೆÇ್ರಬೆಷನರಿ ಐಎಎಸ್ ಅಧಿಕಾರಿ ಅನುಪ್ರೀಯಾ ಸಾಕ್ಯಾ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಎಸ್. ಘಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ. ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಯಗಳ ಅಧಿಕಾರಿಗಳು, ಶಾಲಾ-ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಇದ್ದರು.

ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಎಸ್. ಎಂ ಹೂಡೆದಮನಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img