ಡಾ. ಸಿ.ಸೋಮಶೇಖರ ಶ್ರೀಮತಿ ಎನ್. ಸರ್ವಮಂಗಳ ಸಾಹಿತ್ಯ ಸೇವಾ ಪ್ರತಿಷ್ಠಾನ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಜೀವಮಾನ ಸಾಧನೆಗಾಗಿ ಹಿರಿಯ ಸಾಧಕರಿಗೆ ಸಂಸ್ಕೃತಿ ಸಂಗಮ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸುತ್ತೂರು ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ, ಪ್ರಶಸ್ತಿ ಪುರಸ್ಕೃತರಾದ ಹೀ, ಚಿ. ಬೋರಲಿಂಗಯ್ಯ, ಕಾ.ತ.ಚಿಕ್ಕಣ್ಣ, ಶ್ರೀನಿವಾಸ್ ಜಿ. ಕಪ್ಪಣ್ಣ, ರಂಜಾನ್ ದರ್ಗಾ, ಕಸ್ತೂರಿ ಶಂಕರ, ಸಾಹಿತ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಎನ್. ಸರ್ವಮಂಗಳ ಹಾಜರಿದ್ದರು.




