Friday, July 17, 2026
23.9 C
Belagavi

ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್;ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

advertisement

spot_img

ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್; ಸಾರ್ವಜನಿಕ ಸ್ವಾಥ್ಯ ಕೆಡಿಸುವ, ಕಾನೂನು ಮೀರಿ ವರ್ತಿಸುವ ಅಪರಾಧಿ ಮನೋಭಾವ ನಿಯಂತ್ರಿಸಿ; ಜಿಲ್ಲೆಯನ್ನು ದುಶ್ಚಟ, ಅಪರಾಧಮುಕ್ತ ಜಿಲ್ಲೆ ಮಾಡುವಲ್ಲಿ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಧಾರವಾಡ,- ಅಪರಾಧ ಪ್ರಕರಣಗಳು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ, ಅದಕ್ಕೆ ಕುಮ್ಮಕ್ಕು ನೀಡುವ ಮತ್ತು ಡ್ರಗ್ಸ್, ಗಾಂಜಾ, ಅಫೀಮು ಪ್ರಕರಣಗಳಲ್ಲಿ ಸಿಗುವ ವ್ಯಕ್ತಿಗಳಿಗೆ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಧಾರವಾಡ ಜಿಲ್ಲೆಯನ್ನು ಡ್ರಗ್ಸ್, ಗಾಂಜಾ ಮತ್ತು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಹೇಳಿದರು.

ಅವರು ನಿನ್ನೆ (ಮೇ. 13) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಹಾಗೂ ಮಹಾನಗರ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ಕಳೆದ ಐದಾರು ತಿಂಗಳಿಂದ ಅಪರಾಧಗಳ ಸಂಖ್ಯೆ ಕಡಿಮೆ ಆಗಿದ್ದರೂ ಸಂಪೂರ್ಣ ನಿಯಂತ್ರಣವಾಗುತ್ತಿಲ್ಲ. ಡ್ರಗ್ಸ್, ಗಾಂಜಾ ಸೇವನೆ, ಮಾರಾಟ ಕಡಿಮೆ ಆಗಿದ್ದರೂ ಸಂಪೂರ್ಣ ನಿಲ್ಲುತ್ತಿಲ್ಲ. ಕೆಳಮಟ್ಟದಿಂದ ಪೆÇಲೀಸ್ ಅಧಿಕಾರಿಗಳು ಪ್ರತಿ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ತನಿಖೆ ಮಾಡಿ, ನಿಜವಾದ ಅಪರಾಧಿಗಳ ಮೇಲೆ ಕ್ರಮ ಜರುಗಿಸಬೇಕು. ಅಪರಾಧಿ ಕೃತ್ಯದ ಮನೊಭಾವದವರಿಗೆ ಪೊಲೀಸ್ ಖದರು ತೋರಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ ಎಂದು ಸಚಿವರು ತಿಳಿಸಿದರು.ಕಾಲೇಜು, ಸಾರ್ವಜನಿಕ ಸ್ಥಳ ಹಾಗೂ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಅಪರಾಧಿ ಡ್ರಗ್ಸ್, ಗಾಂಜಾ ಅಂತಹ ಅಫೀಮುಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ, ಕಾಲೇಜು ಶಿಕ್ಷಕರನ್ನು, ಸಮಾಜದ ಗಣ್ಯ ವ್ಯಕ್ತಿಗಳನ್ನು, ಜನಾಭಿಪ್ರಾಯ ರೂಪಿಸುವವರನ್ನು ಅಪರಾಧಮುಕ್ತ ಜಿಲ್ಲೆ ಮಾಡುವ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರು ಮತ್ತು ಠಾಣಾ, ವೃತ್ತ ಮಟ್ಟದ ಅಧಿಕಾರಿಗಳು ರಾತ್ರಿ ವೇಳೆ ಜಿಲ್ಲೆಯಲ್ಲಿ ಸಂಚರಿಸಿ, ಅನಿರೀಕ್ಷಿತ ಭೇಟಿ ನೀಡಿ, ಶಾಂತಿ, ಕಾನೂನು ಸುವ್ಯವಸ್ಥೆ ಪರಿಶೀಲಿಸಬೇಕು. ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಎಸ್.ಪಿ. ಅವರು ಖುದ್ದು ಪರಿಶೀಲಿಸಿ ತಮಗೆ ವರದಿ ಸಲ್ಲಿಸಬೇಕೆಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯು ವಿದ್ಯಾವಂತರ ನಾಡು, ಸಾಂಸ್ಕøತಿಕ ಬಿಡು, ಸಾಹಿತ್ಯ, ಸಂಸ್ಕೃತಿಯ ನೆಲ ಎಂಬುದು ಮರುಕಳಿಸುವಂತೆ ನಾವೇಲ್ಲರೂ ಕೆಲಸ ಮಾಡುವ ಅಗತ್ಯವಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಸಿ, ಜಿಲ್ಲಾಡಳಿತ ಕಾರ್ಯೋನ್ಮುಖವಾಗಬೇಕು ಎಂದು ಸಚಿವರು ಸಲಹೆ ನೀಡಿದರು.

ಅಪರಾಧಿಗಳು, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗವಹಿಸುವವರು, ಶಾಂತಿ, ಸುವ್ಯಸ್ಥೆಗೆ ದಕ್ಕೆ ತರುವವರ ಮೇಲೆ ಮುಲಾಜು ಇಲ್ಲದೆ ಕ್ರಮಕೈಗೊಳ್ಳಿ. ಯಾರ ಶಿಫಾರಸ್ಸು, ಒತ್ತಡಗಳಿಗೆ ಒಳಗಾಗದೇ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳಿ. ಧಾರವಾಡ ಜಿಲ್ಲೆ ಆದಷ್ಟು ಬೇಗನೆ ಡ್ರಗ್ಸ್, ಗಾಂಜಾ ಹಾಗೂ ಅಪರಾಧ ಮುಕ್ತ ಜಿಲ್ಲೆಯಾಗಿ ರೂಪಗೊಳ್ಳಬೇಕು. ಇದಕ್ಕೆ ನಾನು ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರ, ಜನಪ್ರತಿನಿಧಿಗಳ ಸಹಕಾರ, ಮಾರ್ಗದರ್ಶನ ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ಅಧಿಕಾರಿಗಳು ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತರಾದ ರವೀಶ ಸಿ.ಆರ್. ಮತ್ತು ಶೃತಿ ಎನ್.ಎಸ್. ಅವರು ಮಾತನಾಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ನಾಗರಿಕ ಪೊಲೀಸ್ , ಸೈಬರ್ ಕ್ರೈಂ, ಅಬಕಾರಿ ಪೊಲೀಸ್ ಸಂಚಾರಿ ಪೊಲೀಸ್ ಎನ್ಕಾರ್ಡ್ ಪೊಲೀಸ್ , ರೈಲ್ವೆ ಪೊಲೀಸ್ ಇಲಾಖೆಗಳ ವಿವಿಧ ಹಂತದ ಅಧಿಕಾರಿಗಳು ಭಾಗವಹಿಸಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img