Monday, August 10, 2026
21.2 C
Belagavi

ವ್ಯಕ್ತಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳು ಸಂವಿಧಾನ ನೀಡಿದ ಹಕ್ಕು – ಸಚಿವ ಸತೀಶ ಜಾರಕಿಹೊಳಿ

advertisement

spot_img

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 77ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ನಂತರ ಗೌರವ ರಕ್ಷೆಯನ್ನು ಸ್ವೀಕರಿಸಿ, ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಲಾಯಿತು.
“ಸಾಮಾಜಿಕ ನ್ಯಾಯ ಮತ್ತು ಸರ್ವರಿಗೂ ಸಮಾನತೆ – ಸಂವಿಧಾನದ ಅಮೂಲ್ಯ ಕೊಡುಗೆ” ಎಂಬ ಆಶಯದೊಂದಿಗೆ ಮಾತನಾಡಿದ ಸಂದರ್ಭದಲ್ಲಿ,ಬೆಳಗಾವಿ ಜಿಲ್ಲೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ಪವಿತ್ರ ನೆಲವಾಗಿದ್ದು, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನತೆ, ವ್ಯಕ್ತಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ತಿಳಿಸಲಾಯಿತು.
ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ನೀಡಿದ ಐತಿಹಾಸಿಕ ದಿನವಾಗಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ಮಾನವತಾವಾದಿಗಳು ದೂರದೃಷ್ಟಿಯಿಂದ ರಚಿಸಿದ ಭಾರತೀಯ ಸಂವಿಧಾನವು ಭವ್ಯ ಭಾರತದ ದಾರಿದೀಪವಾಗಿದೆ. ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಅತಿ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸುವ ಮೂಲಕ ನಮ್ಮ ರಾಜ್ಯ ಸರ್ಕಾರ “ನುಡಿದಂತೆ ನಡೆದಿದೆ” ಎಂಬುದನ್ನು ಸಾಬೀತುಪಡಿಸಿದೆ ಎಂದು ತಿಳಿಸಲಾಯಿತು.ಈ ಸಂದರ್ಭದಲ್ಲಿ ನಡೆದ ಪಥಸಂಚಲನದಲ್ಲಿ ಕೆ.ಎಸ್.ಆರ್.ಪಿ. 2ನೇ ಪಡೆ ತುಕಡಿ, ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಭಾರತ ಸೇವಾದಳ, ಮಹೇಶ್ವರಿ ಅಂಧಮಕ್ಕಳ ಶಾಲೆ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಗೌರವ ನೀಡಿದರು. ಪಥಸಂಚಲನ, ವಾದ್ಯಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಲವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಮಹಾನಗರ ಪಾಲಿಕೆ ಮಹಾಪೌರ ಮಂಗೇಶ ಪವಾರ, ಉಪ ಮಹಾಪೌರ ವಾಣಿ ಜೋಶಿ, ವಿಭಾಗೀಯ ಆಯುಕ್ತೆ ಜಾನಕಿ ಕೆ.ಎಂ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಎಂ. ಕಾರ್ತಿಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img