Monday, August 10, 2026
21.2 C
Belagavi

ಸರ್ಕಾರಿ ನೌಕರರು ಆತ್ಮಸಾಕ್ಷಿಗೆ ಅನುಗುಣವಾಗಿ ನ್ಯಾಯದ ಪರ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ

advertisement

spot_img

ಸರ್ಕಾರಿ ನೌಕರರು ಆತ್ಮಸಾಕ್ಷಿಗೆ ಅನುಗುಣವಾಗಿ ನ್ಯಾಯದ ಪರ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ

ಸರ್ಕಾರಿ ನೌಕರರು ರಾಜಕೀಯ ಅಂತರ ಕಾಪಾಡಿಕೊಂಡಾಗ ಜನತೆಗೆ ನ್ಯಾಯ ಕೊಡಲು ಸಾಧ್ಯ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜಕಾರಣಿಗಳು ಬರುತ್ತಾರೆ, ಹೋಗುತ್ತಾರೆ. ಆದರೆ ಸರ್ಕಾರಿ ನೌಕರರಾದ ನೀವು ಶಾಶ್ವತವಾಗಿರುತ್ತೀರಿ. ನೀವು ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಕಾನೂನು ಮತ್ತು ನ್ಯಾಯದ ಪರವಾಗಿ ಕೆಲಸ ಮಾಡಬೇಕು” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನೌಕರರಿಗೆ ಕಿವಿ ಮಾತು ಹೇಳಿದರು.
ಇಂದು ಹಾವೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಹಾವೇರಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇವಲ ಒಂದು ಸಂಘಟನೆಯಲ್ಲ, ಅದು ಕರ್ನಾಟಕದ ಸಾಂಸ್ಕೃತಿಕ, ಆರ್ಥಿಕ ಹಾಗೂ ಆಡಳಿತಾತ್ಮಕ ರಂಗದ ಒಂದು ಅವಿಭಾಜ್ಯ ಅಂಗವಾಗಿದೆ. “ರಾಜ್ಯದ ಪ್ರಗತಿ, ಅಭಿವೃದ್ಧಿ ಹಾಗೂ ಆಡಳಿತದಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ದೊಡ್ಡದಾಗಿದೆ. ಸರ್ಕಾರ ಕಾಗದದ ಮೇಲೆ ತರುವ ಯೋಜನೆಗಳನ್ನು ಹಗಲಿರುಳು ಶ್ರಮಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನೌಕರರದ್ದಾಗಿದೆ. ರಾಜ್ಯದ ಪ್ರಗತಿ ಹಾಗೂ ಸಮಸ್ಯೆಗಳ ನಿವಾರಣೆಯಲ್ಲಿ ಅವರ ಕೊಡುಗೆ ದೊಡ್ಡದು. ​ಆಡಳಿತ ಮತ್ತು ಆಳುವಿಕೆ ಬೇರೆ ಬೇರೆ: 11ನೇ ಶತಮಾನದ ಕಲ್ಯಾಣ ಚಾಲುಕ್ಯರ ಆರನೇ ವಿಕ್ರಮಾದಿತ್ಯನ ಶಿಲಾಶಾಸನಗಳಲ್ಲೇ ಆಡಳಿತ ಹಾಗೂ ಆಳ್ವಿಕೆ ಬೇರೆ ಬೇರೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆ ಕಾಲದಲ್ಲೇ ದಂಡನಾಯಕರ ಕರ್ತವ್ಯಗಳು ಹಾಗೂ ನೌಕರರ ವರ್ಗಾವಣೆ ನೀತಿಗಳ ಬಗ್ಗೆ ನಿಯಮಗಳಿದ್ದವು ಎಂದು ಹೇಳಿದರು.

ರೈತರು ಮತ್ತು ಕಾರ್ಮಿಕರೇ ದೇಶದ ಆರ್ಥಿಕತೆಯ ನಿಜವಾದ ನಿರ್ಮಾತೃಗಳು:

ಯಾವ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುತ್ತದೆಯೋ, ಆ ದೇಶ ಮಾತ್ರ ಜಗತ್ತಿನಲ್ಲಿ ಸ್ವಾಭಿಮಾನದಿಂದ ತಲೆ ಎತ್ತಿ ನಿಲ್ಲಲು ಸಾಧ್ಯ. ಕರ್ನಾಟಕ ಕೇವಲ ನೈಸರ್ಗಿಕ ಸಂಪತ್ತು, ಸಂಸ್ಕೃತಿ ಮತ್ತು ಇತಿಹಾಸದಲ್ಲಿ ಮಾತ್ರವಲ್ಲ, ಆಡಳಿತಾತ್ಮಕ ವೈಖರಿಯಲ್ಲೂ ದೇಶದಲ್ಲೇ ಅತ್ಯಂತ ಶ್ರೀಮಂತ ಹಾಗೂ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬೇರೆ ರಾಜ್ಯಗಳು ಮಾದರಿಯಾಗಿ ಸ್ವೀಕರಿಸುತ್ತಿವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ 33 ಕೋಟಿ ಇದ್ದ ಜನಸಂಖ್ಯೆಗೆ ಆಹಾರದ ಕೊರತೆಯಿತ್ತು. ಇಂದು 130 ಕೋಟಿಗೂ ಅಧಿಕ ಜನಸಂಖ್ಯೆ ಇದ್ದರೂ ಎಲ್ಲರಿಗೂ ಅನ್ನ ಸಿಗುತ್ತಿದೆ ಎಂದರೆ ಅದಕ್ಕೆ ನಮ್ಮ ದೇಶದ ರೈತರು ಮತ್ತು ಕೃಷಿ ವಿಜ್ಞಾನಿಗಳ ಶ್ರಮವೇ ಕಾರಣ. ಹಸಿರು ಕ್ರಾಂತಿ, ಶ್ವೇತ ಕ್ರಾಂತಿ ಹಾಗೂ ನೀಲಿ ಕ್ರಾಂತಿಗಳ ಮೂಲಕ ದೇಶ ಆಹಾರ ಭದ್ರತೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. “ಯಾವುದೇ ಆದೇಶಗಳು ಮೇಲಿನಿಂದ ಬಂದರೂ, ತಳಮಟ್ಟದಲ್ಲಿ ದೇಶವನ್ನು ಕಟ್ಟುವ ಕೆಲಸ ಮಾಡುವುದು ರೈತರು ಮತ್ತು ಕಾರ್ಮಿಕರು. ನಾನು ಮುಖ್ಯಮಂತ್ರಿಯಾಗಿದ್ದಾಗಲೂ ನನ್ನನ್ನು ಒಬ್ಬ ಮುಖ್ಯ ಕಾರ್ಮಿಕ ಎಂದೇ ಭಾವಿಸಿದ್ದೆ. ಮುಖ್ಯಮಂತ್ರಿ ಎಂಬುದು ಕೇವಲ ಒಂದು ಜವಾಬ್ದಾರಿಯಷ್ಟೇ” ಎಂದು ಹೇಳಿದರು.
.
​ಸರ್ಕಾರಿ ನೌಕರರ ಮಕ್ಕಳು ‘ಎಕ್ಸ್‌ಟ್ರಾ ಆರ್ಡಿನರಿ’
​”ಕಷ್ಟಪಟ್ಟು ಓದಿ, ಉತ್ತಮ ಅಂಕ ಗಳಿಸಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನೀವೆಲ್ಲರೂ ಈಗಾಗಲೇ ಪ್ರತಿಭಾವಂತರು. ಇನ್ನು ನಿಮ್ಮ ಕಠಿಣ ಪರಿಶ್ರಮವನ್ನು ನೋಡಿ ಬೆಳೆಯುವ ನಿಮ್ಮ ಮಕ್ಕಳು ಕೇವಲ ಪ್ರತಿಭಾವಂತರಲ್ಲ, ಅವರು ‘ಎಕ್ಸ್‌ಟ್ರಾ ಆರ್ಡಿನರಿ’ ಪ್ರತಿಭೆಗಳು.” ​​ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆಯಲು ಮಕ್ಕಳಿಗೆ ಕೇವಲ ಅಂಕಗಳಷ್ಟೇ ಸಾಲದು. ಮಕ್ಕಳಿಗೆ ಉತ್ತಮ ಸಂಸ್ಕಾರ, ವಿದ್ಯೆ ಹಾಗೂ ಜ್ಞಾನವನ್ನು ಧಾರೆ ಎರೆಯಬೇಕು. ತರ್ಕಬದ್ಧವಾಗಿ ಯೋಚಿಸುವ ಮತ್ತು ಆಧುನಿಕ ಸವಾಲುಗಳನ್ನು ಎದುರಿಸುವ ನೈತಿಕ ಶಕ್ತಿಯನ್ನು ತುಂಬಬೇಕು. ಇಂದಿನ ತೀವ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಿದ್ಧಪಡಿಸಬೇಕು. ​”ನಿಮ್ಮ ಮಕ್ಕಳು ಕೇವಲ ನಿಮ್ಮ ಕುಟುಂಬಕ್ಕೆ ಅಥವಾ ರಾಜ್ಯಕ್ಕೆ ಮಾತ್ರ ಸೀಮಿತವಲ್ಲ; ಅವರು ಇಡೀ ದೇಶದ ಆಸ್ತಿಯಾಗಲಿದ್ದಾರೆ. ಹೆತ್ತವರಿಗೆ ತಮ್ಮ ಮಕ್ಕಳು ಜೀವನದಲ್ಲಿ ಯಶಸ್ವಿಯಾಗುವುದನ್ನು ನೋಡುವುದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ” ಎಂದು ಈ ಸಂದರ್ಭದಲ್ಲಿ ನುಡಿದರು.​ಆಡಳಿತಗಾರರು ಮತ್ತು ಅಧಿಕಾರಿಗಳ ನಡುವೆ ಸಮನ್ವಯ ಅಗತ್ಯ

​ನಾವು ಆಳುವವರು ಆಡಳಿತ ನಡೆಸಲು ಬಂದಿದ್ದೇವೆ, ಆದರೆ ಆಡಳಿತ ನಡೆಸುವವರು ನಮ್ಮನ್ನು ಆಳಲು ಪ್ರಯತ್ನಿಸುತ್ತಿದ್ದಾರೆ” ರಾಜಕಾರಣದಲ್ಲಿ ತಮಗೆ 35 ವರ್ಷಗಳ ಅನುಭವವಿದ್ದು, ತಮ್ಮ ತಂದೆಯವರ ಕಾಲದಿಂದಲೂ ಸೇರಿ ಒಟ್ಟು50 ವರ್ಷಗಳಿಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವುದಾಗಿ ತಿಳಿಸಿದರು. ತಾವು ಅಧಿಕಾರಿಗಳನ್ನು ಸುಮಾರು ನಾಲ್ಕು ತಲೆಮಾರುಗಳನ್ನು ಹತ್ತಿರದಿಂದ ನೋಡಿರುವುದಾಗಿ ಅವರು ಸ್ಮರಿಸಿಕೊಂಡರು.

​ಕಾರ್ಯವೈಖರಿಯ ಬದಲಾವಣೆ:
“ಹಿಂದೆ ಅಧಿಕಾರಿಗಳು ತಮ್ಮ ಕರ್ತವ್ಯದ ಬಗ್ಗೆ ಅತ್ಯಂತ ನಿಖರತೆ ಮತ್ತು ಬದ್ಧತೆಯನ್ನು ಹೊಂದಿದ್ದರು. ಆದರೆ ಈಗಿನ ವ್ಯವಸ್ಥೆಯಲ್ಲಿ ಪರಿಸ್ಥಿತಿ ಬದಲಾಗಿದೆ. ನಾವು ಅವರ ಸೂಚನೆಗಳನ್ನು ಪಾಲಿಸುವಂತಾಗಿದೆ, ನಮ್ಮ ಸೂಚನೆಗಳನ್ನು ಅವರು ಪಾಲಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. ಕೆಲವು ಅಧಿಕಾರಿಗಳು ಕೆಲಸ ಮಾಡದಿರಲು ನೂರಾರು ಕಾರಣಗಳನ್ನು ಹುಡುಕುತ್ತಾರೆ. “ಇದು ನೀಲಿ ಮಸಿಯಲ್ಲಿದೆ, ಕೆಂಪು ಮಸಿಯಲ್ಲಿದೆ” ಎಂಬಂತಹ ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಒಡ್ಡಿ ಫೈಲ್‌ಗಳನ್ನು ವಿಳಂಬ ಮಾಡುವುದು ಸರಿಯಲ್ಲ. ಕೆಲಸ ಮಾಡಬಾರದು ಎಂದು ನಿರ್ಧರಿಸಿದರೆ ಅದಕ್ಕೆ ಸಾವಿರ ದಾರಿಗಳು ಸಿಗುತ್ತವೆ. ಕೆಳಗಿನ ಹಂತದ ಕೇಸ್ ವರ್ಕರ್‌ನಿಂದ ಹಿಡಿದು ಡಿಸಿ, ಸೂಪರಿಂಟೆಂಡೆಂಟ್, ಅಂಡರ್ ಸೆಕ್ರೆಟರಿ, ಜಾಯಿಂಟ್ ಸೆಕ್ರೆಟರಿ ಹಾಗೂ ಸೆಕ್ರೆಟರಿವರೆಗೂ ಪ್ರತಿಯೊಂದು ಹಂತದಲ್ಲೂ ಫೈಲ್‌ಗಳು ಅನಗತ್ಯವಾಗಿ ಅಡ್ಡಾಡುತ್ತವೆ. ಡಿಸಿ ಶಿಫಾರಸು ಮಾಡಿದರೂ ಸಚಿವಾಲಯದಲ್ಲಿ ಅದನ್ನು ಮತ್ತೆ ಪರಿಶೀಲನೆಗೆ ಒಳಪಡಿಸುವ ಈ ಹಳೆಯ ವ್ಯವಸ್ಥೆ ಬದಲಾಗಬೇಕಿದೆ. ​”ಸರ್ಕಾರಿ ಕಚೇರಿಗಳಿಗೆ ಬರುವ ಜನರಲ್ಲಿ ಆತಂಕ ಮತ್ತು ಅಸಮಾಧಾನ ಇರಬಾರದು. ಸರ್ಕಾರದೊಂದಿಗೆ ಜನರ ಸಂಬಂಧವು ಪ್ರೀತಿ, ವಿಶ್ವಾಸ ಮತ್ತು ಸಂತೋಷದಿಂದ ಕೂಡಿರಬೇಕು. ಈ ನಿಟ್ಟಿನಲ್ಲಿ ಆಡಳಿತಗಾರರು ಮತ್ತು ನೌಕರರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ರಾಜ್ಯದ ಪ್ರಗತಿ ಸಾಧ್ಯ ಎಂದು ಹೇಳಿದರು

ರಾಜಕೀಯ ಅಂತರ
ಕರ್ನಾಟಕದಲ್ಲಿ ಪ್ರಕೃತಿ ನೀಡಿರುವ ಅದ್ಭುತವಾದ ಮಣ್ಣು ಮತ್ತು ಸಂಪನ್ಮೂಲವಿದೆ. ಜಗತ್ತಿನಲ್ಲಿ ಬೆಳೆಯುವ ಯಾವುದೇ ತರಹದ ಬೆಳೆಗಳನ್ನು ನಮ್ಮ ರಾಜ್ಯದಲ್ಲಿ ಬೆಳೆಯಬಹುದು. ಕೈಗಾರಿಕೀಕರಣ, ಐಟಿ-ಬಿಟಿ ಹಾಗೂ ಸ್ಯಾಟಲೈಟ್ ತಂತ್ರಜ್ಞಾನ ಹೀಗೆ ಎಲ್ಲವೂ ನಮ್ಮಲ್ಲಿದೆ. ಆದರೆ ಇಷ್ಟೆಲ್ಲಾ ಇದ್ದರೂ ಇನ್ನೂ ಬಡತನ, ಸಂಕಷ್ಟ ಮತ್ತು ವಿವಾದಗಳು ಮುಂದುವರಿದಿವೆ. ಇವುಗಳನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ” ಎಂದರು.
​”ನೌಕರರು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯಬಾರದು. ನೀವು ರಾಜಕೀಯ ಅಂತರವನ್ನು ಮತ್ತು ನ್ಯಾಯವನ್ನು ಕಾಪಾಡಿಕೊಂಡಾಗ ಮಾತ್ರ ಜನಸಾಮಾನ್ಯರಿಗೆ ನಿಜವಾದ ನ್ಯಾಯ ಸಿಗಲು ಸಾಧ್ಯ” ನಮ್ಮ ನಿರೀಕ್ಷೆಗೂ ಮೀರಿ ಸಂಘಟನೆಯನ್ನು ಬಲಪಡಿಸಿದ್ದಾರೆ. ಹಿಂದೆ ಏಳನೇ ವೇತನ ಆಯೋಗದ ಜಾರಿಯ ವಿಷಯದಲ್ಲೂ ನಾವು ಚರ್ಚಿಸಿ, ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ” ಎಂದು ನೆನಪಿಸಿಕೊಂಡರು.
​ದಕ್ಷ ಅಧಿಕಾರಿಗಳ ಕೊಡುಗೆ:
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರಂತಹ ದಕ್ಷ ಅಧಿಕಾರಿಗಳನ್ನು ಸ್ಮರಿಸಿದ ಅವರು, “ಮುಖ್ಯಮಂತ್ರಿಗಳಿಗೂ ನೇರವಾಗಿ ‘ನೋ’ ಎಂದು ಹೇಳುವಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳು ನಮ್ಮಲ್ಲಿದ್ದಾರೆ. ಅಂತಹವರಿಂದ ನ್ಯಾಯಸಮ್ಮತವಾದ ಶಿಫಾರಸುಗಳು ಬಂದಾಗ ಸರ್ಕಾರ ಅದನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ” ​”ವೇತನ ಆಯೋಗ ಸೇರಿದಂತೆ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ನಾವು ಸದಾ ನಿಮ್ಮ ಜೊತೆಗಿರುತ್ತೇವೆ. ಆದರೆ ನೀವು ಜನರ ಪರವಾಗಿ ನಿಂತು ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಜಿಲ್ಲಾಧಿಕಾರಿಗಳಾದ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಐ.ಪಿ.ಎಸ್ ಅಧಿಕಾರಿಗಳಾದ ರವಿ ಡಿ ಚೆನ್ನಣ್ಣನವರ, ಹಾವೇರಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಲ್ಲೇಶ ಕರಿಗಾರ, ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಸ್.ಎಫ್ ಸಿದ್ದನಗೌಡ್ರ, ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಮೂರು ಜಿಲ್ಲೆಗಳ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img