ಬೆಳಗಾವಿ : ಮಳೆ ಗಾಳಿಗೆ ಗೋಕಾಕದಲ್ಲಿ ಮನೆ ಬಿದ್ದು ಅವಾಂತರ ಸೃಷ್ಟಿಯಾಗಿದ್ದು, ಮನೆಯ ಮೇಲ್ಚಾವಣಿ ಕುಸಿದು ತಾಯಿ ಮತ್ತು ಮಗ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಗೋಕಾಕ ಪಟ್ಟಣದ ಸಂಗಮ ನಗರದಲ್ಲಿ ಮನೆ ಬೀಳುತ್ತಿದ್ದಂತೆ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಫರೀದಾ, ಹಾಗೂ ರಿಯಾಜ್ ಗಾಯಗೊಂಡ ತಾಯಿ ಮಗ, ಈ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಧ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ತಾಯಿ ಮತ್ತು ಮಗ ಇಬ್ಬರಿಗೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಗೋಡೆ ನೆನೆದು ನಡೆದ ದುರ್ಘಟನೆ ಸಂಭವಿಸಿದೆ. ಈ ಕುರಿತು ಗೋಕಾಕ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.