Saturday, April 11, 2026
36.1 C
Belagavi

ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟು

advertisement

spot_img

ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟು

ದಾವಣಗೆರೆ ದಕ್ಷಿಣ ಉಪಚುನಾವಣೆ: ಸಿ.ಎಂ ರೋಡ್ ಶೋ

ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ : ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ನಡೆಯುತ್ತಿದೆ: ಸಿಎಂ

ದಾವಣಗೆರೆ ದಕ್ಷಿಣ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.

ಸಮರ್ಥ್ ಅತ್ಯಂತ ವಿದ್ಯಾವಂತ ಮತ್ತು ರಾಜಕಾರಣದ ಎಲ್ಲ ಅರ್ಹತೆಗಳಿರುವ ಸಮರ್ಥ ಅಭ್ಯರ್ಥಿ. ಇವರು ಗೆದ್ದು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆ. ಎಲ್ಲಾ ಜನಪರ ಗುಣಗಳು ಸಮರ್ಥ್ ಅವರಲ್ಲಿದೆ ಎಂದರು.‌

ದಾವಣಗೆರೆಗೆ ಶಾಮನೂರು ಕೊಡುಗೆ ಸಾಕಷ್ಟಿದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದರು.

ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ ಎಂದರು.

ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ ಇದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023. ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಜನರ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ಸರ್ವ ಜಾತಿ ಜನಾಂಗಗಳನ್ನು ಒಟ್ಟಿಗೇ ಕರೆದೊಯ್ಯುತ್ತದೆ. ನಮ್ಮ ಗ್ಯಾರಂಟಿಗಳ ಫಲವನ್ನು ಎಲ್ಲಾ ಪಕ್ಷದವರೂ, ಎಲ್ಲಾ ಜಾತಿ, ಎಲ್ಲಾ ಧರ್ಮದವರೂ ಪಡೆಯುತ್ತಿದ್ದಾರೆ. ಆದ್ದರಿಂದ ನಮ್ಮದು “ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ಕಾಂಗ್ರೆಸ್ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವಣ್ಣನವರ ಆಶಯದ ಹಾದಿಯಲ್ಲಿ ನಡೆದರೆ, ಬಿಜೆಪಿ ಗೋಡ್ಸೆ ಮಾತಿನಂತೆ ನಡೆಯುತ್ತದೆ ಎಂದರು.ಆದ್ದರಿಂದ ದಲಿತರು, ಹಿಂದುಳಿದವರು, ಶ್ರಮಿಕರು, ಮಹಿಳೆಯರು ಎಲ್ಲಾ ಧರ್ಮದವರ ಪಕ್ಷ. ಆದ್ದರಿಂದ ಎಲ್ಲರಿಗೂ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.‌

ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ ಎಂದರು.

ನಮ್ಮ ಮೂಲ ಉದ್ದೇಶ ತಳ ಸಮುದಾಯದ ಅಭಿವೃದ್ದಿ. ಬಸವಣ್ಣ ಅವರ ಪರಿಕಲ್ಪನೆಯಲ್ಲಿ ನಾವು ಸರ್ಕಾರ ನಡೆಸುತ್ತಿದ್ದೇವೆ. ಮಧ್ಯವರ್ತಿಗಳ ಕಾಟ ಇಲ್ಲದೆ ಬಡವರ ಖಾತೆಗೆ ಹಣ ಹಾಕುತ್ತಿದ್ದೇವೆ ಎಂದರು.

ಗ್ಯಾರಂಟಿಯಿಂದ ಖಜಾನೆ ಖಾಲಿ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಾವು 1.40 ಕೋಟಿ ರೂ ಸಾಲ ಮಾಡಿದ್ದೇವೆ. ಬಿಜೆಪಿಯವರು 5.30 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ ಎಂದು ವಿವರಿಸಿದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img