Wednesday, August 12, 2026
20.7 C
Belagavi

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

*ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

“ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು (ಮಾಧ್ಯಮಗಳು), ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ” ಎಂದರು.

“ಪುಣೆಯಲ್ಲಿರುವ ನನ್ನ ಸ್ನೇಹಿತರ ಮನೆ ಮದುವೆ ಕಾರ್ಯಕ್ರಮವಿತ್ತು. ಹೀಗಾಗಿ ನಿನ್ನೆ ದೆಹಲಿಗೆ ಬಂದಿದ್ದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಇಂದು ಅನೇಕ ಸಭೆಗಳಿವೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ” ಎಂದು ಹೇಳಿದರು.

ನಾಳೆಗೆ ನೀವು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳುತ್ತಿರುವ ಬಗ್ಗೆ ಕೇಳಿದಾಗ, “ಹೌದು, ನಾಳೆಗೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ. ಮತ್ತೊಂದು ದಿನ ನಮ್ಮ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಭೋಜನಕೂಟ ಹಮ್ಮಿಕೊಳ್ಳಲಾಗುವುದು. ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಭೋಜನಕೂಟ ಇಟ್ಟುಕೊಂಡಿದ್ದೇನೆ” ಎಂದು ತಿಳಿಸಿದರು.

ಖಾಸಗಿ ಕಾರ್ಯಕ್ರಮ ಎಂದರೂ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಎಂದರೆ ವಿಭಿನ್ನ ಚರ್ಚೆಗಳೇ ಸಾಗುತ್ತವೆ ಎಂದು ಕೇಳಿದಾಗ, “ಯಾವ ವಿಭಿನ್ನ ಚರ್ಚೆನೂ ಬೇಡ. ನಾಳೆ (ಮಂಗಳವಾರ) ಭೋಜನಕೂಟವಿದೆ, ನಾಡಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ” ಎಂದು ತಿಳಿಸಿದರು.

ಅಸ್ಸಾಂ ಚುನಾವಣೆಗೆ 43 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಬಗ್ಗೆ ಕೇಳಿದಾಗ, “43 ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, ಇಂದು ಮತ್ತೊಂದು ಸ್ಕ್ರೀನಿಂಗ್ ಸಮಿತಿ ಸಭೆ ಇದೆ. ಈ ಸಮಿತಿಯಲ್ಲಿ ನಾನು ಇಲ್ಲ” ಎಂದು ತಿಳಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img