Wednesday, August 12, 2026
20.7 C
Belagavi

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಹ್ವಾನ ಸ್ವಾಗತಿಸುವೆ : ಸಂಸದ ಯದುವೀರ್ ಒಡೆಯರ್

advertisement

spot_img

ಮೈಸೂರ:ಈ ಬಾರಿ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಬಾನು ಮುಷ್ತಾಕ್ ಖ್ಯಾತ ಬರಹಗಾರ್ತಿ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಮುಸ್ಲಿಂ ಮಹಿಳೆಯರಿಗೂ ಸಮಾನ ಹಕ್ಕು ಕೊಡಬೇಕು. ಮಸೀದಿಗಳಿಗೆ ಅವಕಾಶ ಕೊಡಬೇಕು ಎಂದು ಬಾನು ಮುಷ್ತಾಕ್ ಈ ಹಿಂದೆಯೇ ಸಾಮಾಜಿಕ ಬಹಿಷ್ಕಾರವನ್ನೂ ಎದುರಿಸಿದ್ದರು. ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ನೀಡಿರುವ ಕೊಡುಗೆ ಅಪಾರ. ಅವರನ್ನು ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದರು.

ಬಾನು ಮುಷ್ತಾಕ್ ಆಯ್ಕೆ ಬಗ್ಗೆ ಬಿಜೆಪಿ ನಾಯಕರಿಂದ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯಾತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದು ಹೇಳಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img