Wednesday, August 12, 2026
20.7 C
Belagavi

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

advertisement

spot_img

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

ನಮಗೆ ಮೋಸ ಮಾಡಿದರೆ ತಮ್ಮ ಆತ್ಮಸಾಕ್ಷಿಗೆ ಮೋಸ ಮಾಡಿಕೊಂಡಂತೆ

ಅಧಿಕಾರ ನನ್ನದಲ್ಲ, ಈ ಜನರ ಸ್ವತ್ತು

ಕನಕಪುರ,

“2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು.

ಜನತೆಗೆ ಕೃತಜ್ಞತೆ ಸಮರ್ಪಣೆ ನಿಮಿತ್ತ ದೊಡ್ಡಆಲಳ್ಳಿ ಹಾಗೂ ಸಾತನೂರಿನಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಬಿಜೆಪಿ ಜೆಡಿಎಸ್ ನವರು ಎಷ್ಟೇ ಷಡ್ಯಂತ್ರ ಮಾಡಿದರೂ ನೀವು ಜಗ್ಗಲಿಲ್ಲ, ಬಗ್ಗಲಿಲ್ಲ ನನ್ನ ಬೆಂಬಲಕ್ಕೆ ನಿಂತಿದ್ದೀರಿ. ನಿಮಗೆ ಧನ್ಯವಾದಗಳು” ಎಂದರು.ನಮಗೆ ಮೋಸ ಮಾಡಿದರೆ ತಮ್ಮ ಆತ್ಮಸಾಕ್ಷಿಗೆ ಮೋಸ ಮಾಡಿಕೊಂಡಂತೆ

“ಎಲ್ಲಾ ಪಕ್ಷದ ಮತದಾರರ ಮತ ಉಳಿಸಿಕೊಳ್ಳಬೇಕು. ಇನ್ನು ಮುಂದೆ ಯಾರೂ ನಮಗೆ ಮೋಸ ಮಾಡುವುದಿಲ್ಲ. ನಮಗೆ ಮೋಸ ಮಾಡಿದರೆ ಅವರು ತಮ್ಮ ಆತ್ಮ ಸಾಕ್ಷಿಗೆ ಮೋಸ ಮಾಡಿಕೊಂಡಂತೆ. ಇಲ್ಲಿವರೆಗೂ ತಪ್ಪು ನಿಮ್ಮದೇ ಆಗಿರಲಿ ಅಥವಾ ಅವರದೇ ಆಗಿರಲಿ ಎಲ್ಲರೂ ರಾಜಿ ಮಾಡಿಕೊಂಡು ಒಟ್ಟಾಗಿ ಕೆಲಸ ಮಾಡಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ. ರಾಜಕೀಯವಾಗಿ ಪ್ರಕರಣ ಬಂದರೆ ಅವುಗಳನ್ನು ರಾಜಿ ಮಾಡಿ ಕಳಿಸಿ ಎಂದು ಪೊಲೀಸರಿಗೆ ತಿಳಿಸಿರುವೆ. ಇದನ್ನು ಮಾದರಿ ಕ್ಷೇತ್ರ ಮಾಡಬೇಕು.

ಮಾಧ್ಯಮ ಪ್ರತಿಕ್ರಿಯೆ

ಅಧಿಕಾರ ನನ್ನದಲ್ಲ, ಈ ಜನರ ಸ್ವತ್ತು:

ಕಬ್ಬಾಳಮ್ಮ ದೇವಾಲಯ ಬಳಿ ಮಾಧ್ಯಮಗಳು, ನಿಮ್ಮ ಕ್ಷೇತ್ರದ ಜನ ಇಂದು ಹಬ್ಬದಂತೆ ನಿಮ್ಮನ್ನು ಸ್ವಾಗತಿಸಿದೆ ಎಂದು ಕೇಳಿದಾಗ, “ಈ ಅಧಿಕಾರ ನನ್ನದಲ್ಲ, ಈ ಜನರ ಸ್ವತ್ತು. ಈ ಜನ ಬೆಂಗಳೂರಿಗೆ ಬಂದು ಭೇಟಿ ಮಾಡಲು ಆಗುವುದಿಲ್ಲ. ಪ್ರಮಾಣ ವಚನ ಕಾರ್ಯಕ್ರಮವನ್ನು ದೊಡ್ಡದಾಗಿ ಮಾಡಿದರೆ ಸಾವಿರಾರು ಬಸ್ ಜನ ಬರುತ್ತಾರೆ ಜನರಿಗೆ ತೊಂದರೆಯಾಗಲಿದೆ ಎಂದು ಸರಳ ಕಾರ್ಯಕ್ರಮ ಮಾಡಿದೆವು. ಹೀಗಾಗಿ ನಾನೇ ನಮ್ಮ ಜನರನ್ನು ನೋಡಲು ಬಂದಿರುವೆ. ಈ ಕಬ್ಬಾಳಮ್ಮ ದೇವಾಲಯ ಹಾಗೂ ಪ್ರದೇಶ ಈ ಹಿಂದೆ ಹೇಗಿತ್ತು ಈಗ ಹೇಗಾಗಿದೆ ಎಂಬುದೇ ನಮ್ಮ ಸಾಕ್ಷಿಗುಡ್ಡೆ. ಕ್ಷೇತ್ರದಲ್ಲಿ ಪ್ರತಿಹಳ್ಳಿಯಲ್ಲೂ ಸೇರಿದಂತೆ 300ಕ್ಕೂ ಹೆಚ್ಚು ದೇವಾಲಯ ಅಭಿವೃದ್ಧಿ ಮಾಡಿದ್ದೇವೆ. ಎಲ್ಲಾ ವರ್ಗದ ಜನ ನನಗೆ ಸತತವಾಗಿ ಆಶೀರ್ವಾದ ಮಾಡಿದ್ದು, ಜನರಿಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ” ಎಂದು ತಿಳಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img