Monday, August 10, 2026
21.2 C
Belagavi

2026-27ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ.

advertisement

spot_img

2026-27ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ.

2017ರಲ್ಲಿ ಜಿಎಸ್‌ಟಿ ಜಾರಿಗೆ ಬಂದಿದ್ದು, 8 ವರ್ಷಗಳ ನಂತರ ದರ ತರ್ಕಬದ್ಧಗೊಳಿಸಿದರು. ಇದರಿಂದ ಶೇ.10 ರಷ್ಟಿದ್ದ ರಾಜ್ಯದ ತೆರಿಗೆ ಸಂಗ್ರಹಣೆ, ಈಗ ಶೇ.4 ಕ್ಕೆ ಇಳಿದಿದೆ. ಕೆಲವು ರಾಜ್ಯಗಳು ಕೇಂದ್ರದ ದರಪರಿಷ್ಕರಣೆಯಿಂದ ತೊಂದರೆಗೊಳಗಾಗಿದ್ದು, ಇದುವರೆಗೂ ಚೇತರಿಸಿಕೊಂಡಿಲ್ಲ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದ ಈ ಹೊಸ ನೀತಿಯಿಂದ ಸುಮಾರು ರಾಜ್ಯಕ್ಕೆ ಸುಮಾರು ₹10 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ಮುಂದಿನ ವರ್ಷ ₹15,000 ಕೋಟಿಯಷ್ಟು ನಷ್ಟವಾಗಲಿದೆ. ಕೇಂದ್ರ ಸರ್ಕಾರದ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ಆದರೂ ನಮ್ಮ ಬಜೆಟ್ ನಲ್ಲಿ ಹೆಚ್ಚು ವಿತ್ತೀಯ ಶಿಸ್ತಿನ ಉಲ್ಲಂಘನೆಯಾಗಿಲ್ಲ.

ರಾಜ್ಯದ ಜಿಎಸ್‌ಡಿಪಿಯು 2025-26 ರಲ್ಲಿ 8.1% ಬೆಳವಣಿಗೆ ದರ ಹೊಂದಿದೆ. ರಾಷ್ಟ್ರದ ಜಿಡಿಪಿ ಬೆಳವಣೆಗೆ 7.4% ರಷ್ಟಿದೆ. ಕೇಂದ್ರಕ್ಕಿಂತ ನಮ್ಮ ರಾಜ್ಯದ ಬೆಳವಣಿಗೆ ಉತ್ತಮವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ₹52,000 ಕೋಟಿ ಕೊಟ್ಟಿದ್ದೇವೆ. ಇಲ್ಲಿಯವರೆಗೆ ಗ್ಯಾರಂಟಿಗಳಿಗೆ ₹1,21,591 ಕೋಟಿ ವೆಚ್ಚ ಮಾಡಲಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ. ಅದರ ಜೊತೆಗೆ ವಿತ್ತಿಯ ಶಿಸ್ತನ್ನೂ ಪಾಲಿಸಲಾಗಿದೆ. 2023-24 ರಿಂದ ಮೂರು ವರ್ಷವೂ ಕೂಡ ಆರ್ಥಿಕ ಶಿಸ್ತು ಕಾಯ್ದೆಯ ಮಾನದಂಡಗಳ ಪಾಲನೆಯಾಗಿದೆ. ಈ ಬಾರಿ ಕೇಂದ್ರದ ಅನುದಾನದಲ್ಲಿ ರಾಜ್ಯಕ್ಕೆ ₹10,000 ಕೋಟಿ ಕೊರತೆ ಆಗಿದೆ.ಜಲಜೀವನ ಮಿಷನ್ ನ ಯೋಜನಾ ವೆಚ್ಚ ಒಟ್ಟು ₹69,488 ಕೋಟಿ ಆಗಿದ್ದು, ಕೇಂದ್ರದ ಪಾಲು ₹30,880 ಕೋಟಿ, ಆದರೆ ಈ ವರೆಗೆ ನಮಗೆ ಕೇಂದ್ರದ ಅನುದಾನ ದೊರೆತಿರುವುದು ಕೇವಲ ₹11,786 ಕೋಟಿ ನೀಡಿದ್ದಾರೆ. ಈ ಯೋಜನೆಗೆ ₹38,600 ರಾಜ್ಯ ಸರ್ಕಾರ ಈಗಾಗಲೇ ವೆಚ್ಚ ಮಾಡಿದೆ. ಜೊತೆಗೆ ₹15,500 ಕೋಟಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ವೆಚ್ಚ ಮಾಡಿದೆ.

ಈ ವರ್ಷ ಕೇಂದ್ರದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕೇಂದ್ರ ಸರ್ಕಾರದ ಸಾಲ 218 ಲಕ್ಷ ಕೋಟಿ ದಾಟಿದೆ. ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಆದರೆ ಸಾಲವು ಮಾನದಂಡಗಳಲ್ಲಿ ತಿಳಿಸಿದ ಮಿತಿಯಲ್ಲಿರಬೇಕು. 2014ರ ಮೊದಲು, 53.11 ಲಕ್ಷ ಕೋಟಿಯಿದ್ದ ದೇಶದ ಸಾಲ ಈಗ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ₹165 ಲಕ್ಷ ಕೋಟಿಯಾಗಿದೆ. ಪ್ರತಿಪಕ್ಷ ನಾಯಕ ಅಶೋಕರವರು ರಾಜ್ಯಸರ್ಕಾರ ಸಾಲ ಮಾಡುತ್ತಿದೆ ಎಂಬ ಟೀಕೆ ಮಾಡಲು ಯಾವುದೇ ನೈತಿಕತೆ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 5,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ.

2005 ರಲ್ಲಿ ಮನರೇಗಾ ಯೋಜನೆಯಡಿ ಪೂರ್ಣ ಅನುದಾನ ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಆದರೆ ಪ್ರಸ್ತುತ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದು, ಕೇಂದ್ರ ಸರ್ಕಾರ ಶೇ. 60 ಮತ್ತು ರಾಜ್ಯ ಶೇ. 40 ರಷ್ಟು ಅನುದಾನವನ್ನು ನೀಡಬೇಕೆಂದು ಸೂಚಿಸಿದ್ದಾರೆ. ಕೇಂದ್ರದ ಈ ಕಾಯ್ದೆಯಿಂದ ರಾಜ್ಯಗಳಿಗೆ ಆಗುವ ಅನಾಹುತಗಳ ಬಗ್ಗೆ ಬಜೆಟ್ ನಲ್ಲಿ ತಿಳಿಸಲಾಗಿದೆ. 12.16 ಕೋಟಿ ದೀನದಲಿತರು, ಬಡ ಕಾರ್ಮಿಕರು, ಮಹಿಳೆಯರಿಗೆ ಉಪಯೋಗವಾಗುತ್ತಿತ್ತು. ಕರ್ನಾಟಕದಲ್ಲಿ ವರ್ಷದ 100 ದಿನಗಳು 77 ಲಕ್ಷ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ಜನರ ಉದ್ಯೋಗದ ಹಕ್ಕನ್ನು ವಿಬಿ ಜಿ ರಾಮ್ ಜಿ ಕಸಿದುಕೊಂಡಿದೆ. ಗ್ರಾಮ ಸಭೆಗಳಿಗೆ ನೀಡಿರುವ ಅಧಿಕಾರವನ್ನು ಮೊಟಕುಗೊಳಿಸಲಾಗಿದ್ದು, ಸಂವಿಧಾನದ 73ನೇ ಕಲಂಗೆ ಚ್ಯುತಿ ಮಾಡಿದಂತಾಗಿದೆ. ಈ ಕಾಯ್ದೆಯನ್ನು ರದ್ದುಗೊಳಿಸಿ, ಮನರೇಗಾ ಯೋಜನೆಯನ್ನು ಮರುಸ್ಥಾಪಿಸಲು ಕೇಂದ್ರವನ್ನು ಒತ್ತಾಯಿಸಲಾಗುತ್ತಿದೆ. ಈ ಕಾಯ್ದೆಯಿಂದ ರಾಜ್ಯ ಸರ್ಕಾರಕ್ಕೆ 3,000 ಕೋಟಿ ರೂ.ಗಳ ಹೆಚ್ಚಿಗೆ ಆರ್ಥಿಕ ಹೊರೆ ಬೀಳಲಿದೆ.

ಈ ಬಾರಿ ಬಜೆಟ್ ನಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುದೆಂದು ತಿಳಿಸಲಾಗಿದೆ. ಕಾರಣಾಂತರಗಳಿಂದ ವಿಳಂಬಗಳಾಗಿದ್ದು, ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ವಿಳಂಬವಾದ ಕಾರಣ, ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ. ರಾಜ್ಯದ ಅಭಿವೃದ್ಧಿ ಮತ್ತು ಪ್ರಾದೇಶೀಕ ಅಸಮತೋಲನ ನಿವಾರಿಸಲು ಪ್ರೊ.ಎಂ.ಗೋವಿಂದರಾವ್ ಸಮಿತಿಯ ಶಿಫಾರಸ್ಸುಗಳನ್ನು ಸಚಿವ ಸಂಪುಟ ಅಂಗೀಕರಿಸಿದ್ದು, ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಈ ಶಿಫಾರಸ್ಸುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದ್ದು, ಈ ವರ್ಷ ₹4,291 ಕೋಟಿ ಅನುದಾನ ಮೀಸಲಿಡಲಾಗಿದೆ.

2026-27 ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ ₹5,000 ಕೋಟಿ ರೂ.ಗಳ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ವರ್ಷ ₹4,000 ಕೋಟಿ ಖರ್ಚಾಗಿದ್ದು, ಉಳಿದ ಅನುದಾನವನ್ನು ಖರ್ಚು ಮಾಡಲಾಗುವುದು.

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸುವ ಸಂಬಂಧ, ಡ್ಯಾಂನ ಎತ್ತರವನ್ನು ಹೆಚ್ಚಿಸಿದಾಗ ಮುಳುಗಡೆಯಾಗುವ ಜಮೀನುಗಳಿಗೆ ಪರಿಹಾರ ನೀಡಲಾಗುವುದು. 1 ಲಕ್ಷ ಎಕರೆ ಮುಳುಗಡೆಯಾಗುತ್ತಿದ್ದು, ಪರಿಹಾರ ನೀಡಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಖುಷ್ಕಿ ಜಮೀನಿಗೆ 30 ಲಕ್ಷ , ನೀರಾವರಿ ಜಮೀನಿಗೆ 40 ಲಕ್ಷ ಪರಿಹಾರ ನೀಡಲು ನಿರ್ಣಯ ಕೈಗೊಂಡಿದ್ದು, 4 ವರ್ಷದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು.

ತುಂಗಭದ್ರಾ ಜಲಾಶಯದಲ್ಲಿ ಎಲ್ಲ ಗೇಟುಗಳು ಶಿಥಿಲವಾಗಿದ್ದು, ಜೂನ್ ತಿಂಗಳೊಳಗೆ ಎಲ್ಲ ಗೇಟುಗಳನ್ನು ಬದಲಾಯಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಹಿಂದಿನ ಬಜೆಟ್ ಗಳಂತೆ ಈ ವರ್ಷದ ಆಯವ್ಯಯದಲ್ಲಿ ಕೂಡ ವಿತ್ತೀಯ ಶಿಸ್ತು ಪಾಲನೆ ಮಾಡಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಮೀಸಲಿಟ್ಟ ಅನುದಾನ ನೀಡಿದ್ದರೆ, ರಾಜ್ಯಕ್ಕೆ ಕೊರತೆಯಾಗುತ್ತಿರಲಿಲ್ಲ.

ಕರಾವಳಿ ಪ್ರವಾಸೋದ್ಯಮಕ್ಕೆ ಬಿಜೆಪಿಯವರು ಅವರ ಅವಧಿಯಲ್ಲಿ ಏನೂ ಮಾಡಲಿಲ್ಲ. ಟೀಕೆ ಮಾಡುವುದು ಸುಲಭ . ಬಿಜೆಪಿಯವರಿಗೆ ನಮ್ಮನ್ನ ಪ್ರಶ್ನಿಸಲು ಯಾವುದೇ ನೈತಿಕತೆ ಇಲ್ಲ.
16 ವರ್ಷದ ಮಕ್ಕಳಿಗೆ ಮೊಬೈಲ್ ಇದ್ದರೂ, ಸೋಷಿಯಲ್ ಮೀಡಿಯಾ ನಿರ್ಬಂಧಿಸಲಾಗಿದೆ. ಇದಕ್ಕೆ ಬೇಕಾದ ನೀತಿ ನಿಯಮಗಳನ್ನು ಸಧ್ಯದಲ್ಲಿಯೇ ರೂಪಿಸಲಾಗುವುದು.

– ಮುಖ್ಯಮಂತ್ರಿ Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img