Friday, July 17, 2026
20.9 C
Belagavi

ಲಸಿಕಾ ಕೇಂದ್ರದ ನೂತನ ಕಟ್ಟಡ ಹಾಗೂ ಜಿಲ್ಲಾ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಉದ್ಘಾಟನೆ

advertisement

spot_img

ಲಸಿಕಾ ಕೇಂದ್ರದ ನೂತನ ಕಟ್ಟಡ ಹಾಗೂ ಜಿಲ್ಲಾ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಉದ್ಘಾಟನೆ

ಧಾರವಾಡ: ಧಾರವಾಡ  ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಸರ್ಕಾರವು ಸುಸಜ್ಜಿತ ಆರೋಗ್ಯ ಕೇಂದ್ರಗಳನ್ನು ಒದಗಿಸುತ್ತಿರುವುದು ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಜನಪರವಾದ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದರು.

ಅವರು ಇಂದು (ಏ.27) ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಲಸಿಕಾ ಕೇಂದ್ರವನ್ನು ಮತ್ತು ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಉದ್ಘಾಟಿಸಿದರು.

ನಂತರ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಾರ್ವಜನಿಕರಿಗೆ ಅಗತ್ಯ ಇರುವ ಔಷಧಿಗಳು ದಾಸ್ತಾನು ಇದ್ದು, ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಉಂಟಾಗದಂತೆ ಕ್ರಮವಹಿಸಿದ್ದು, ಬೇಡಿಕೆ ಬಂದಲ್ಲಿ ತಕ್ಷಣ ಔಷಧಿ ಸರಬರಾಜು ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವದರಿಂದ, ಅಗತ್ಯವಿರುವಲ್ಲಿ ಪಾಳೆಯ (ಶಿಫ್ಟ್‍ಗಳ) ಮುಖಾಂತರ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. 225 ತಜ್ಞ ವೈದ್ಯರು, ವೈದ್ಯರನ್ನು ನೇಮಕ ಮಾಡಿಕೊಳ್ಳಲು ಚಾಲನೆ ನೀಡಿಲಾಗಿದೆ. ಖಾಲಿ ಇರುವ ಹುದ್ದೆಗಳಿಗೂ ಭರ್ತಿ ಮಾಡಿಕೊಳ್ಳಲು ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳಿಸಲಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಮಾತನಾಡಿ, ದೇಶದಲ್ಲಿ ಸಾರ್ವಜನಿಕ ಆರೋಗ್ಯ ಅಭಿವೃದ್ಧಿಪಡಿಸಿಲು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೊಸ ಉಪಕರಣ, ಸಂಶೋಧನೆ ಮತ್ತು ಜನ ಸಾಮಾನ್ಯರಿಗೆ ಅಗತ್ಯವಿರುವ ಔಷಧಿಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಹೆಚ್ಚು ಆದ್ಯತೆ ನೀಡಿದೆ. ಲಸಿಕಾ (ವ್ಯಾಕ್ಸಿನ್) ದಾಸ್ತಾನು ಸೌಲಭ್ಯಗಳ ಕಟ್ಟಡಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಟ್ಟಲಾಗುತ್ತಿದೆ. ಲಸಿಕೆಗಳನ್ನು ಸುಸಜ್ಜಿತ ಕಟ್ಟಡ ಮತ್ತು ಸೌಲಭ್ಯಗಳಿರುವ ದಾಸ್ತಾನುಗಳಲ್ಲಿ ಶೇಖರಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರವು ಪ್ರತಿ ರಾಜ್ಯದಲ್ಲಿ ಸುಸಜ್ಜಿತ ಲಸಿಕಾ ದಾಸ್ತಾನು ಕಟ್ಟಡ ನಿರ್ಮಿಸಲು ರಾಜ್ಯ ಸರ್ಕಾರಗಳಿಗೆ ಅಗತ್ಯ ಅನುದಾನ ನೀಡಿ, ಸಹಭಾಗಿತ್ವದಲ್ಲಿ ನಿರ್ಮಿಸುತ್ತಿದೆ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿ ಆಯುμÁ್ಮನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (PM-ABHIM) ಯೋಜನೆಗೆ ಈಙ 2021-22 ರಿಂದ 2025-26ರ ವರೆಗಿನ ಅವಧಿಗೆ ರೂ. 64,180 ಕೋಟಿ ಒಟ್ಟು ವೆಚ್ಚ ನಿಗದಿಪಡಿಸಲಾಗಿದೆ.ಇದರಡಿ 17,788 ಆಯುμÁ್ಮನ್ ಆರೋಗ್ಯ ಮಂದಿರಗಳು (ಗ್ರಾಮೀಣ), 11,024 ನಗರ ಆರೋಗ್ಯ ಕೇಂದ್ರಗಳು, 3,382 ಬ್ಲಾಕ್ ಪಬ್ಲಿಕ್ ಹೆಲ್ತ್ ಯೂನಿಟ್‍ಗಳು, 744 ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳು ಮತ್ತು 621 ಕ್ರಿಟಿಕಲ್ ಕೇರ್ ಆಸ್ಪತ್ರೆ ಬ್ಲಾಕ್‍ಗಳ ನಿರ್ಮಾಣ, ಸ್ಥಾಪನೆಗೆ ಅನುಮತಿ ನೀಡಲಾಗಿದೆ.

ಕರ್ನಾಟಕಕ್ಕೆ ರಾಜ್ಯ ಸರ್ಕಾರ ಸಲ್ಲಿಸಿದ ಹಣಕಾಸು ನಿರ್ವಹಣಾ ವರದಿ (Financial Management Report) ದಾಖಲೆಗಳ ಪ್ರಕಾರ ಪ್ರಧಾನ ಮಂತ್ರಿ ಆಯುμÁ್ಮನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (PM-ABHIM) – ಕರ್ನಾಟಕ ರಾಜ್ಯದ ಅನುಮೋದಿತ ಯೋಜನೆಗಳ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 2021-22 ರಿಂದ 2025-26 ರವರೆಗಿನ 5 ವರ್ಷಗಳ ಅವಧಿಗೆ ಒಟ್ಟು ರೂ. 1,928.79 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮತ್ತು ಉನ್ನತ ದರ್ಜೆಯಲ್ಲಿ ಚಿಕಿತ್ಸೆ ಹಾಗೂ ಔಷಧಿ ದೊರಕುವಂತೆ ಕ್ರಮವಹಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಆಸ್ಪತ್ರೆಗಳ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮತ್ತು ಅಗತ್ಯವಿರುವಲ್ಲಿ ವಿಸ್ತೀರ್ಣ ಕಟ್ಟಡ, ನೂತನ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದರು.ಜಿಲ್ಲಾ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ದೊರಕುತ್ತಿದ್ದು, ನೂತನ ವೈದ್ಯಕೀಯ ಸೌಲಭ್ಯ ಮತ್ತು ಉಪಕರಣಗಳನ್ನು ಪೂರೈಸಲಾಗಿದೆ. ವೈಧ್ಯರು ಮತ್ತು ಸಿಬ್ಬಂದಿಗಳು ನಿಯಮಿತವಾಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತೆ ಕ್ರಮವಹಿಸಲಾಗಿದೆ ಎಂದು ಸಚಿವ ಸಂತೋಷ ಎಸ್.ಲಾಡ್ ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅರವಿಂದ ಬೆಲ್ಲದ ಅವರು ವಹಿಸಿದ್ದರು. ಶಾಸಕರಾದ ಎನ್.ಎಚ್.ಕೋನರಡ್ಡಿ, ಎಫ್.ಹೆಚ್.ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಂ.ಹೊನಕೇರಿ, ಆರ್.ಸಿ.ಎಚ್.ಓ ಅಧಿಕಾರಿ ಡಾ.ಸುಜಾತ ಹಸುವಿಮಠ, ಧಾರವಾಡ ತಾಲೂಕಾ ವೈದ್ಯಾಧಿಕಾರಿ ಡಾ. ಕೆ.ಎನ್. ತನುಜಾ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲ:ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (IPHL)PHABHIM ಅಡಿಯಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ನಿರ್ಮಿಸಲಾಗಿದ್ದು, ಸುಮಾರು ಒಂದು ಕೋಟಿ ಹನ್ನೊಂದು ಸಾವಿರ ರೂಪಾಯಿ ವೆಚ್ಚ ಮಾಡಲಾಗಿದೆ.

ಈ ಪ್ರಯೋಗಾಲಯದಲ್ಲಿ ಎಲ್ಲಾ ಆರೋಗ್ಯ ಪರೀಕ್ಷೆ ಸೇವೆಗಳನ್ನು ಒಂದೇ ಸೂರಿನಡಿ ರೋಗಿಗಳಿಗೆ ಸಿಗುವಂತೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳು ಪರೀಕ್ಷಾ ಮಾದರಿಗಳನ್ನು ಈ ಪ್ರಯೋಗಾಲಯಕ್ಕೆ ಕಳಿಸಬಹುದು ಮತ್ತು ಪರೀಕ್ಷೆಯನ್ನು ಮಾಡಿಸಬಹುದಾಗಿದೆ. ಜೀವರಸಾಯನಶಾಸ್ತ್ರ, ರೋಗ ನಿರ್ಣಯ ಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಸಿರೋಲಜಿ, ಎಲ್ಲಾ ಸಾಂಕ್ರಾಮಿಕ ಮತ್ತು ಅಸಾಂಕ್ರಮಿಕ ರೋಗಗಳ ಪರೀಕ್ಷೆಗಳನ್ನು ಈ ಪ್ರಯೋಗಾಲಯದಲ್ಲಿ ಮಾಡಲಾಗುತ್ತದೆ. ಎಲ್ಲಾ ವಿಭಾಗಗಳ ಸಿಬ್ಬಂದಿಯನ್ನು ಒಂದೇ ಕಡೆ ನಿಯೋಜನೆ ಮಾಡುವ ಮೂಲಕ ಪರಿಣಾಮಕಾರಿ ಸಿಬ್ಬಂದಿ ನಿರ್ವಹಣೆಯೊಂದಿಗೆ ವೇಗವಾಗಿ ರೋಗಿಗಳಿಗೆ ಫಲಿತಾಂಶಗಳನ್ನು ಒದಗಿಸಲು ಮತ್ತು ಚಿಕಿತ್ಸೆಗೆ ಒಳಪಡಿಸಲು ಸಾಧ್ಯವಾಗುತ್ತದೆ.

ಎಲ್ಲ ಆರೋಗ್ಯ ಪರೀಕ್ಷೆಗಳು ಒಂದೇ ಸ್ಥಳದಲ್ಲಿ ಸಿಗುತ್ತವೆ. ರೋಗಿಗಳು ಒಂದು ಬಾರಿ ಪರೀಕ್ಷಾ ಮಾದರಿ ಕೊಟ್ಟರೆ ಸಾಕು ಅದರಿಂದ ಎಲ್ಲ ಪರೀಕ್ಷೆಗಳನ್ನು ಕೇಂದ್ರೀಕೃತವಾಗಿ ಮಾಡಬಹುದಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ ಅವರು ತಿಳಿಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img