ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ
ಸಾಮಾಜಿಕ ನ್ಯಾಯ, ಸಂವಿಧಾನಕ್ಕೆ ಬದ್ಧವಾಗಿರುವ ಪಕ್ಷಕ್ಕೆ ನಿಮ್ಮ ಬೆಂಬಲವಿರಲಿ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಇತಿಹಾಸ ಅರಿಯದವರಿಂದ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ
ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು – ಬಾಬಾ ಸಾಹೇಬರ ಮಾತು ಉಲ್ಲೇಖಿಸಿದ ಮಾಜಿ ಸಿಎಂ
ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಂಡಲ್ ವರದಿ ಜಾರಿಯ 36ನೇ ವಾರ್ಷಿಕೋತ್ಸವದಲ್ಲಿ ಸಿದ್ದರಾಮಯ್ಯನವರ ಮಾತು
ಬೆಂಗಳೂರು, ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.
ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಂಡಲ್ ವರದಿ ಜಾರಿಯ 36ನೇ ವಾರ್ಷಿಕೋತ್ಸವವನ್ನು …


