Wednesday, August 12, 2026
20.7 C
Belagavi

ಜಗದೀಶ ಶೆಟ್ಟರ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ ನಾಯ್ಡು ಭೇಟಿ

advertisement

spot_img

ಮಾಜಿ ಮುಖ್ಯಮಂತ್ರಿಗಳು ಬೆಳಗಾವಿಯ ಸಂಸದರು ಆದ ಜಗದೀಶ ಶೆಟ್ಟರ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ ನಾಯ್ಡು ಇವರನ್ನು ಭೇಟಿಯಾಗಿ, ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಹಾಗೂ ಪ್ರಮುಖ ನಗರಗಳಿಗೆ ಇಂಡಿಗೋ ಮತ್ತು ಏ‌ರ್ ಇಂಡಿಯಾ ಎಕ್ಸಪ್ರೆಸ್ ಸಂಸ್ಥೆಯ ವತಿಯಿಂದ ವಿಮಾನಯಾನ ಸೇವೆಯನ್ನು ಒದಗಿಸುವ ಬಗ್ಗೆ ಚರ್ಚಿಸಿ, ಮನವಿ ಸಲ್ಲಿಸಿದರು.

ಬೆಳಗಾವಿ ನಗರವು ಎಲ್ಲ ರಂಗದಲ್ಲಿ, ವಿಶೇಷವಾಗಿ ಉದ್ಯಮಿಕರಣ ಕ್ಷೇತ್ರದಲ್ಲಿ ಬಹುವೇಗವಾಗಿ ಬೆಳೆಯುತ್ತಿರುವ ನಗರ. ಬೆಳಗಾವಿ ವಿಮಾನ ನಿಲ್ದಾಣವು ಕೇಂದ್ರ ಸರಕಾರದ ಉಡಾನ ಯೋಜನೆಯಲ್ಲಿ ಆಯ್ಕೆಯಾಗಿ, ತದನಂತರ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಅನೇಕ ನಗರಗಳಿಗೆ ಈ ಮೊದಲು ಒದಗಿಸಲಾಗುತ್ತಿದ್ದ ವಿಮಾನಯಾನ ಸೇವೆಯನ್ನು ಸಂಬಂಧಿತ ಸಂಸ್ಥೆಗಳು ರದ್ದು ಪಡಿಸಿದ್ದು, ಇದರಿಂದಾಗಿ ಉದ್ಯಮದಾರರಿಗೆ ಹಾಗೂ ಇಲ್ಲಿನ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗಿದೆ.

ಈ ನಿಟ್ಟಿನಲ್ಲಿ ಪ್ರಮುಖ ನಗರಗಳಾದ ಮುಂಬೈ, ಚನೈ, ಸುರತ್, ಪುಣೆ ಹೀಗೆ ಹಲವು ನಗರಗಳಿಗೆ ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಯಿಂದ ಈ ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸುವ ಬಗ್ಗೆ ಆಯಾ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಕೋರಲಾಯಿತು.

ಅದೆ ರೀತಿಯಾಗಿ 1) ಬೆಳಗಾವಿ, 2) ಹುಬ್ಬಳ್ಳಿ, 3) ಶಿವಮೊಗ್ಗ ಹಾಗೂ 4) ವಿಜಯಪುರ, ವಿಮಾನ ನಿಲ್ದಾಣಗಳನ್ನು ಅನುಕ್ರಮವಾಗಿ 1)ಕಿತ್ತೂರ ರಾಣಿ ಚನ್ನಮ್ಮ ಏರಪೋರ್ಟ, 2)ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಏರಪೋರ್ಟ, 3) ರಾಷ್ಟ್ರಕವಿ ಡಾ: ಕೆ.ವಿ ಪುಟ್ಟಪ್ಪ (ಕುವೆಂಪು) ಏರಪೋರ್ಟ ಹಾಗೂ 4) ಜಗಜ್ಯೋತಿ ಬಸವೇಶ್ವರ ಏರಪೋರ್ಟ ಎಂದು ಮರು ನಾಮಕರಣ ಮಾಡುವ ಕುರಿತಾದ ಪ್ರಸ್ತಾವನೆಯನ್ನು ರಾಜ್ಯ ಸರಕಾರದಿಂದ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದ್ದು, ಶೀಘ್ರ ಅನುಮೋದನೆ ನೀಡುವಂತೆ ನೋಡಿಕೊಳ್ಳುವಂತೆಯೂ ಸಹ ವಿಮಾನಯಾನ ಸಚಿವರಲ್ಲಿ ಕೋರಲಾಯಿತು.

ಪ್ರಸ್ತಾಪಿತ ವಿಷಯವಾಗಿ ಆದಷ್ಟು ಶೀಘ್ರ ಕ್ರಮ ಕೈಕೊಳ್ಳುವುದಾಗಿ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ ನಾಯ್ಡು ಇವರು ಭರವಸೆಯನ್ನು ನೀಡಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img