Friday, July 17, 2026
26.5 C
Belagavi

ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು: ಸಿಎಂ ಸಿದ್ದರಾಮಯ್ಯ

advertisement

spot_img

ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು :
ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂತ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ ಮಲ್ಲತ್ತಹಳ್ಳಿಯಲ್ಲಿ ಆಯೋಜಿಸಿದ್ದ ಕನಕದಾಸರ ಸಮಗ್ರ ಸಾಹಿತ್ಯ ಅನುವಾದ ಸಂಪುಟಗಳ 40 ಕೃತಿಗಳ ಬಿಡುಗಡೆ ಮಾಡಿ ಮತ್ತು ಕನಕ ಶಿಲ್ಪವನ ಲೋಕಾರ್ಪಣೆ ಮಾಡಿ ಮಾತನಾಡಿದರು.

ಕನಕದಾಸರು ಸಮಾಜ ಸುಧಾರಕರು*

ಕನಕದಾಸರು ಭಕ್ತಿ ಪಂಥದ ಕವಿ, ಭಕ್ತರಲ್ಲದೆ ಸಮಾಜದ ಅಂಕುಡೊಂಡುಗಳನ್ನು ತಿದ್ದುವ, ಮೂಡನಂಬಿಕೆಗಳ ವಿರುದ್ಧ ಕೆಲಸ ಮಾಡಿದ ಸಮಾಜ ಸುಧಾರಕರೂ ಹೌದು ಎಂದರು.

ಕನಕದಾಸರ ಬಗ್ಗೆ ಇಂದಿನ ಪೀಳಿಗೆ ಅರಿತುಕೊಳ್ಳಬೇಕು
ಇಂದಿಗೂ ಕನಕದಾಸರು ಹಾಗೂ ಬಸವಣ್ಣ ಬಯಸಿದ ಸಮಾಜ ನಿರ್ಮಾಣ ಆಗಿಲ್ಲ. ಸಮಸಮಾಜದ ಕನಸು ಕಂಡ ಇವರ ಬಗ್ಗೆ ಇಂದಿನ ಪೀಳಿಗೆ ಅರಿತುಕೊಳ್ಳುವುದು ಅವಶ್ಯ ಎಂದರು.ದಾಸ ಸಾಹಿತ್ಯ ಮತ್ತು
ವಚನ ಸಾಹಿತ್ಯ ಅನೇಕ ಭಾಷೆಗಳಿಗೆ ತರ್ಜಮೆಯಾಗಿದ್ದು ದಾಸ ಸಾಹಿತ್ಯವು ಅನೇಕ ಭಾಷೆಗಳಲ್ಲಿ ಪ್ರಚಾರವಾಗುತ್ತಿರುವುದು ಶ್ಲಾಘನೀಯ. ಕನಕದಾಸರ ಸಾಹಿತ್ಯ ಬೇರೆ ರಾಜ್ಯಗಳಿಗೂ ತಲುಪುತ್ತಿರುವುದು ಸಂತಸದ ಸಂಗತಿ ಎಂದರು.

ಇತಿಹಾಸವನ್ನು ಅರಿಯದೆ ಹೋದರೆ ಸಮಾಜದ ಅಂಕುಡೊಂಕುಗಳನ್ನು ಅರಿಯಲು ಸಾಧ್ಯವಿಲ್ಲ ಎಂದರು.

ಕನಕದಾಸರು ಬಹುಮುಖ ಪ್ರತಿಭೆಯಾಗಿದ್ದರು

ಕನಕದಾಸರು ಬಹು ಮುಖ ಪ್ರತಿಭೆಯಾಗಿದ್ದರು. ಕನಕದಾಸರ ಸಾಹಿತ್ಯ ಸೃಷ್ಠಿ ಅದ್ಭುತವಾಗಿದ್ದು, 350 ಕ್ಕೂ ಹೆಚ್ಚು ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಕೃತಿಗಳನ್ನು ಬೇರೆ ಭಾಷೆಗೆ ತರ್ಜುಮೆ ಮಾಡಿದ ಹಲವು ಭಾಷಾಂತರಕಾರರಿಗೆ ಸರ್ಕಾರದ ಪರವಾಗಿ ಅಭಿನಂದಿಸಲಾಗಿದೆ ಎಂದರು.

ಕನಕದಾಸರ ಅನುವಾದಿತ ಕೃತಿಗಳು ದೇಶವಿದೇಶಗಳಿಗೆ ತಲುಪಲು ಸಹಕಾರಿ

ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ ಅವರ ನೇತೃತ್ವದಲ್ಲಿ ಕನಕದಾಸರ ಕೃತಿಗಳು 14 ಭಾಷೆಗೆ ಭಾಷಾಂತರಗೊಂಡಿದೆ. ಕನಕರ ಕೃತಿಗಳು ದೇಶ ವಿದೇಶಗಳಿಗೆ ತಲುಪಲು ಇದು ಸಹಕಾರಿಯಾಗಿದೆ. ಈ ಪ್ರತಿಗಳ ಹೆಚ್ಚಿನ ಮುದ್ರಣಕ್ಕೆ ಸರ್ಕಾರ ಇನ್ನೂ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದರು.

ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು

ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನಕದಾಸರ ಬಗ್ಗೆ ತಿಳಿಯುವುದು ಮುಖ್ಯ. ನಾನು ಶಾಸಕನಾದ ಸಂದರ್ಭದಿಂದಲೂ ಕನಕದಾಸ ಜಯಂತಿ ಆಚರಣೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಮುನಿರತ್ನ, ಸಂತ ಕವಿ ಕನಕದಾಸ ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ. ತ ಚಿಕ್ಕಣ್ಣ, ಸಾಹಿತಿ ಬಂಜಗೆರೆ ಜಯಪ್ರಕಾಶ್ ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img