Monday, August 10, 2026
21.2 C
Belagavi

ಪೊಲೀಸ್ ಕೆಲಸಕ್ಕಿಂತ ಎಗ್ ರೈಸ್ ಮಾರಾಟವೇ ಒಳಿತು ವಾಟ್ಸಾಪ್ ಸ್ಟೇಟಸ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಕೊಪ್ಪಳದ ಪೇದೆ

advertisement

spot_img

ಪೊಲೀಸ್ ಕೆಲಸಕ್ಕಿಂತ ಎಗ್ ರೈಸ್ ಮಾರಾಟವೇ ಒಳಿತು

ವಾಟ್ಸಾಪ್ ಸ್ಟೇಟಸ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಕೊಪ್ಪಳದ ಪೇದೆ

ಕೊಪ್ಪಳ 
ವರ್ಷಪೂರ್ತಿ ರಜೆ ಇಲ್ಲದೆ ನಿರಂತರ ಕರ್ತವ್ಯ, ಹಬ್ಬ–ಹರಿದಿನಗಳಲ್ಲೂ ವಿಶ್ರಾಂತಿಯಿಲ್ಲದ ಪೊಲೀಸ್ ಸಿಬ್ಬಂದಿಯ ಸ್ಥಿತಿಗೆ ಕನ್ನಡಿ ಹಿಡಿದಂತಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ವಾಟ್ಸಾಪ್ ಸ್ಟೇಟಸ್ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಈ ವಿಚಾರ ಇದೀಗ ರಾಜ್ಯಾದ್ಯಂತ ಗಮನ ಸೆಳೆದಿದೆ.

ಕುಷ್ಟಗಿ ತಾಲೂಕಿನ ಹನಮಸಾಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಬ್ರಹ್ಮಾನಂದ ಅವರು ಈ ವಿವಾದದ ಕೇಂದ್ರಬಿಂದು. ‘ವರ್ಷದ 365 ದಿನವೂ ಕೆಲಸ. ಒಂದು ದಿನವೂ ರಜೆ ಇಲ್ಲ. ಹಬ್ಬ–ಹರಿದಿನಗಳಿಲ್ಲದ ಈ ಸೇವೆಯಿಗಿಂತ ರಸ್ತೆ ಬದಿಯಲ್ಲಿ ನಿಂತು ಎಗ್ ರೈಸ್ ಮಾರಿಕೊಂಡು ಬದುಕುವುದು ಹೆಚ್ಚು ಸುಖಕರ’ ಎಂದು ಅವರು ತಮ್ಮ ವಾಟ್ಸಾಪ್ ಸ್ಟೇಟಸ್ನಲ್ಲಿ ಬರೆದುಕೊಂಡಿದ್ದಾರೆ.ಈ ಸ್ಟೇಟಸ್ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಿಪ್ರವಾಗಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯ ಕೆಳ ಹಂತದ ಸಿಬ್ಬಂದಿ ಎದುರಿಸುತ್ತಿರುವ ಕೆಲಸದ ಒತ್ತಡ, ರಜೆ ಕೊರತೆ ಮತ್ತು ಮಾನಸಿಕ ಒತ್ತಡ ಕುರಿತ ಚರ್ಚೆಗೆ ವೇದಿಕೆ ಕಲ್ಪಿಸಿದೆ. ಪೊಲೀಸ್ ಸೇವೆಗೆ ಸೇರುವ ಮುನ್ನ ಯುವಕರು ನೂರು ಬಾರಿ ಯೋಚಿಸಬೇಕು ಎಂಬ ಎಚ್ಚರಿಕೆಯ ಧಾಟಿಯಲ್ಲಿಯೂ ಈ ಸ್ಟೇಟಸ್ ಸಾರ್ವಜನಿಕರ ಗಮನ ಸೆಳೆದಿದೆ.

ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG–IGP) ಡಾ. ಎಂ.ಎ. ಸಲೀಂ ಅವರು ರಾಜ್ಯದಲ್ಲಿ ಖಾಲಿ ಇರುವ 8,300 ಪೊಲೀಸ್ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಯಲಿದೆ ಎಂದು ಘೋಷಿಸಿದ್ದ ಹಿನ್ನೆಲೆಯಲ್ಲಿ, ಅದರ ಪ್ರತಿಕ್ರಿಯೆಯ ರೂಪದಲ್ಲೇ ಈ ಸ್ಟೇಟಸ್ ಪ್ರಕಟವಾಗಿದೆ ಎನ್ನಲಾಗುತ್ತಿದೆ.

ಆದರೆ ಪೊಲೀಸ್ ಇಲಾಖೆ ಶಿಸ್ತುಬದ್ಧ ಪಡೆ ಆಗಿರುವುದರಿಂದ, ಒಳಗಿನ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ವ್ಯಕ್ತಪಡಿಸುವುದು ಶಿಸ್ತು ಉಲ್ಲಂಘನೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಸಮವಸ್ತ್ರಧಾರಿಯಾಗಿ ಸೇವೆ ಸಲ್ಲಿಸುವ ಸಿಬ್ಬಂದಿಯಿಂದ ಇಂತಹ ನಡೆ ಯೋಗ್ಯವಲ್ಲ ಎಂದು ಕೆಲ ಹಿರಿಯ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ವಾಟ್ಸಾಪ್ ಸ್ಟೇಟಸ್ ವೈರಲ್ ಆದ ಬೆನ್ನಲ್ಲೇ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶ ನೀಡಿದ್ದಾರೆ. ತನಿಖಾ ವರದಿ ಆಧರಿಸಿ ಪೇದೆ ಬ್ರಹ್ಮಾನಂದ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಈ ಘಟನೆ ಪೊಲೀಸ್ ಸಿಬ್ಬಂದಿಯ ಕೆಲಸದ ಒತ್ತಡ, ರಜೆ ವ್ಯವಸ್ಥೆ ಮತ್ತು ಮಾನಸಿಕ ಆರೋಗ್ಯ ಕುರಿತು ಮತ್ತೊಮ್ಮೆ ರಾಜ್ಯ ಮಟ್ಟದ ಚರ್ಚೆಗೆ ಕಾರಣವಾಗಿದ್ದು, ವ್ಯವಸ್ಥಾತ್ಮಕ ಸುಧಾರಣೆ ಅಗತ್ಯವಿದೆ ಎಂಬ ಕೂಗು ಮತ್ತಷ್ಟು ಬಲಪಡಿಸಿದೆ.
ಹಬ್ಬ ಹರಿದಿನಗಳಿಗೆ ರಜೆ ಘೋಷಿಸಿದ್ದ ಇಲಾಖೆ
ಹಬ್ಬ–ಹರಿದಿನಗಳನ್ನೂ ಲೆಕ್ಕಿಸದೆ ದಿನದ 24 ಗಂಟೆಯೂ ಸಾರ್ವಜನಿಕರ ರಕ್ಷಣೆಗೆ ದುಡಿಯುವ ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ರಾಜ್ಯ ಪೊಲೀಸ್ ಇಲಾಖೆ ಇತ್ತೀಚೆಗಷ್ಠ ಮಹತ್ವದ ಸಿಹಿಸುದ್ದಿ ನೀಡಿತ್ತು. ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನ ಕಡ್ಡಾಯ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ (DG & IGP) ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದರು.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ತಮ್ಮ ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವದಂದು ಕುಟುಂಬದವರ ಜೊತೆ ಸಮಯ ಕಳೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು. ನಿರಂತರ ಒತ್ತಡದ ಕೆಲಸ, ಮಾನಸಿಕ ದಣಿವು ಹಾಗೂ ವೈಯಕ್ತಿಕ ಜೀವನದ ಸಮತೋಲನ ಕಾಪಾಡುವಲ್ಲಿ ಈ ಸಾಂದರ್ಭಿಕ ರಜೆ ಮಹತ್ವದ ಪಾತ್ರ ವಹಿಸಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ರಾಜ್ಯ ಒಳಾಡಳಿತ ಇಲಾಖೆ ಪೊಲೀಸ್ ಸಿಬ್ಬಂದಿಗೆ ಸಾಂದರ್ಭಿಕ ರಜೆ ನೀಡುವ ಕುರಿತು ಪೊಲೀಸ್ ಮಹಾನಿರ್ದೇಶಕರಿಗೆ ಅಧಿಕೃತ ಪತ್ರ ಬರೆದಿತ್ತು. ಆ ಪತ್ರವನ್ನು ಪರಿಶೀಲಿಸಿದ ನಂತರ ಡಿಜಿ ಡಾ. ಎಂ.ಎ. ಸಲೀಂ ಅವರು ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನ ಕಡ್ಡಾಯ ರಜೆ ನೀಡುವಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶವು ರಾಜ್ಯದ ಎಲ್ಲಾ ಘಟಕಗಳಿಗೆ ಅನ್ವಯವಾಗಲಿದ್ದು, ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆಗೆ ತೊಂದರೆ ಆಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪೊಲೀಸ್ ಇಲಾಖೆ ಶಿಸ್ತುಬದ್ಧ ಹಾಗೂ ಒತ್ತಡದ ಕೆಲಸದ ಸಂಸ್ಥೆಯಾಗಿರುವುದರಿಂದ, ಸಿಬ್ಬಂದಿಯ ಮಾನಸಿಕ ಆರೋಗ್ಯ ಮತ್ತು ಕುಟುಂಬ ಜೀವನಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ಈ ನಿರ್ಧಾರವನ್ನು ಸ್ವಾಗತಿಸಬೇಕು ಎಂದು ಪೊಲೀಸ್ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಕ್ರಮದಿಂದ ಸಿಬ್ಬಂದಿಯಲ್ಲಿ ಆತ್ಮಸ್ಥೈರ್ಯ ಹೆಚ್ಚಾಗಿ, ಸೇವಾ ಮನೋಭಾವ ಮತ್ತಷ್ಟು ಬಲವಾಗಲಿದೆ ಎನ್ನಲಾಗಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img