4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು!
ಚೀಟಿ ವ್ಯವಹಾರದ ಕೇಸ್‌ನಲ್ಲಿ ಲಂಚ ಪಡೆಯುತ್ತಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚೀಟಿ ವ್ಯವಹಾರದ ಕೇಸ್ ಸೆಟಲ್ ಮಾಡಲು 4 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಪಿ. ಅಗ್ರಹಾರ ಇನ್ಸ್‌ಪೆಕ್ಟರ್ ಗೋವಿಂದರಾಜು ವಿರುದ್ಧ ಸಂತ್ರಸ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ಪೊಲೀಸರು ರೂಪಿಸಿದ ಪ್ಲಾನ್‌ನಂತೆ, ಇಂದು ಸಿರಸಿ ಸರ್ಕಲ್ ಬಳಿಯ CAR ಮೈದಾನದಲ್ಲಿ ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಹೊಂಚು ಹಾಕಿದ್ದ ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಹಣ ಜಪ್ತಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



