Thursday, July 16, 2026
20.7 C
Belagavi

ಕುಂದಗೋಳ: ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮ ಜನರ ಅಹವಾಲುಗಳಿಗೆ ಸ್ಪಂದಿಸಿದ ಸಚಿವ ಸಂತೋಷ ಲಾಡ್

advertisement

spot_img

ಕುಂದಗೋಳ: ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮ
====================
ಸಾರ್ವಜನಿಕರಿಂದ 151 ಅಹವಾಲುಗಳು ಸಲ್ಲಿಕೆ
==================
ಜನರ ಅಹವಾಲುಗಳಿಗೆ ಸ್ಪಂದಿಸಿದ ಸಚಿವ ಸಂತೋಷ ಲಾಡ್

ಹುಬ್ಬಳ್ಳಿ, ಏ.28: ಕುಂದಗೋಳ ತಾಲೂಕಿನ ಬೆನಕನಹಳ್ಳಿ, ಸಂಶಿ, ಕಮಡೊಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಪಿಂಚಣಿ, ನಮ್ಮ ಹೊಲ ನಮ್ಮ ರಸ್ತೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಜನರ ಅಹವಾಲುಗಳಿಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಸ್ಪಂದಿಸಿದರು.

ಕುಂದಗೋಳ ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಅರ್ಜಿಗಳ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಮತ್ತು ಆಡಳಿತವನ್ನು ಜನರಿಗೆ ಇನ್ನಷ್ಟು ಹತ್ತಿರ ತರುವ ಉದ್ದೇಶದಿಂದ ಇಂದು ತಾಲೂಕು ಕೇಂದ್ರದಲ್ಲಿ ಜನ ಸಂಪರ್ಕ ಸಭೆ ಯಶಸ್ವಿಯಾಗಿ ಏರ್ಪಡಿಸಲಾಗಿತ್ತು. ಈ ಜನ ಸಂಪರ್ಕ ಸಭೆಯಲ್ಲಿ ವಿವಿಧ ಗ್ರಾಮಗಳಿಂದ ಬಂದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ಸಲಹೆಗಳನ್ನು ನೇರವಾಗಿ ಸಚಿವರಿಗೆ ತಿಳಿಸಿದರು.

ಸಾರ್ವಜನಿಕರು ಕುಡಿಯುವ ನೀರಿನ ಕೊರತೆ, ರಸ್ತೆ ದುರಸ್ತಿ, ಒಳಚರಂಡಿ ವ್ಯವಸ್ಥೆ, ವಿದ್ಯುತ್ ವ್ಯತ್ಯಯ, ಆರೋಗ್ಯ ಸೇವೆಗಳ ಅಭಾವ, ಶಾಲಾ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಕೆಲವು ತುರ್ತು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಯಿತು. ಕೆಲವು ಸಮಸ್ಯೆಗಳನ್ನು ದಾಖಲಿಸಿ, ಅವುಗಳನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಿ ನಿಗದಿತ ಅವಧಿಯಲ್ಲಿ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಾರ್ವಜನಿಕರಿಂದ 151 ಅಹವಾಲು ಸಲ್ಲಿಕೆ
=====================
ಇಂದು ನಡೆದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಒಟ್ಟಾರೆಯಾಗಿ 151 ಅಹವಾಲುಗಳು ಜನರಿಂದ ಸಲ್ಲಿಕೆಯಾಗಿದ್ದವು. ಪ್ರಮುಖವಾಗಿ ಕಂದಾಯ ಇಲಾಖೆಯಲ್ಲಿ ಅತಿ ಹೆಚ್ಚು 48 ಪ್ರಕರಣಗಳು ದಾಖಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 33 ಪ್ರಕರಣಗಳು ದಾಖಲಾಗಿದ್ದು, ನಗರಾಭಿವೃದ್ಧಿ ಇಲಾಖೆಯಲ್ಲಿ 12 ಪ್ರಕರಣಗಳು ದಾಖಲಾಗಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 10 ಪ್ರಕರಣಗಳು ಹಾಗೂ ಇಂಧನ ಇಲಾಖೆಯಲ್ಲಿ 6 ಪ್ರಕರಣಗಳು ದಾಖಲಾಗಿವೆ.ವಿಕಲಚೇತನರ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಧನ ಸಹಾಯಕಾರ್ಯಕ್ರಮದಲ್ಲಿ ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮುಂದಾದಾಗ ಸಚಿವರು ಅವರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ‌ ಸೂಚಿಸಿದರು. ಅಲ್ಲದೇ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಧನ ಸಹಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅರ್ಜಿ ಸ್ವೀಕರಿಸುವ ಸುಮಾರು 11 ಕೌಂಟರ್ ಗಳನ್ನು ತೆರಯಲಾಗಿತ್ತು. ಅಲ್ಲದೇ ಆರೋಗ್ಯ ಇಲಾಖೆ ಸಿಬ್ಬಂದಿ ಜನರ ಆರೋಗ್ಯ ತಪಾಸಣೆ ಮಾಡಿದರು. ಶಾಸಕರಾದ ಎಂ.ಆರ್.ಪಾಟೀಲ, ಧಾರವಾಡ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಸ್. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ, ಕುಂದಗೋಳ ತಹಶೀಲ್ದಾರ ರಾಜು ಮಾವರಕರ, ಕುಂದಗೋಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸತೀಶ, ಮಾಜಿ ಶಾಸಕ ಎಂ.ಎಸ್.ಅಕ್ಕಿ, ಮುಖಂಡರಾದ ಚಂದ್ರಶೇಖರ ಜುಟ್ಟಲ, ಪ್ರೇಮನಾಥ ಚಿಕ್ಕತುಂಬಳ ಸೇರಿದಂತೆ , ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಕುಂದಗೋಳ ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img