Wednesday, August 12, 2026
20.7 C
Belagavi

Innov8Ability For India ಕಾರ್ಯಕ್ರಮಕ್ಕೆ ಚಾಲನೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಭಿಮತ

advertisement

spot_img

Innov8Ability For India ಕಾರ್ಯಕ್ರಮಕ್ಕೆ ಚಾಲನೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಭಿಮತ
==========================
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ

ಬೆಂಗಳೂರು,  ಸಂತೋಷ್ ಲಾಡ್ ಫೌಂಡೇಶನ್ ನ ಸಂಸ್ಥಾಪಕರಾದ ಸಂತೋಷ್ ಹಾಗೂ ಇಂಡಿಯಾ ರೈಸಿಂಗ್ ಫೌಂಡೇಶನ್ ಸಹಯೋಗದಲ್ಲಿ ನಗರದ ಬಳ್ಳಾರಿ ರಸ್ತೆಯಲ್ಲಿರುವ ಎಂಬೆಸಿ ಒನ್ ನ ಫೋರ್ ಸೀಸನ್ಸ್ ಹೊಟೇಲ್‌ನಲ್ಲಿ ವಿಶೇಷಚೇತನ ಸಂಶೋಧಕರಿಗೆ ದೇಶದ ಮೊದಲ ಬಾರಿಗೆ ಬಹುಶಿಸ್ತೀಯ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಪೂರಕವಾದ ಪರಿಸರ ವ್ಯವಸ್ಥೆ ಕಲ್ಪಿಸುವ ʻಇನ್ನೋವ್8ಎಬಿಲಿಟಿ ಫಾರ್ ಇಂಡಿಯಾ (Innov8Ability For India) ಎಂಬ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಹಾಗೂ ಸಂತೋಷ್‌ ಲಾಡ್‌ ಫೌಂಡೇಶನ್‌ನ ಮುಖ್ಯಸ್ಥರಾದ ಸಂತೋಷ್‌ ಎಸ್‌ ಲಾಡ್‌ ಅವರು, ಒಂದು ಉತ್ತಮ ಕಾರ್ಯಕ್ರಮಕ್ಕೆ ನಮ್ಮ ಸಂತೋಷ್‌ ಲಾಡ್‌ ಫೌಂಡೇಶನ್‌ ಸಹಯೋಗ ಮಾಡಿದೆ. ವಿಶೇಷಚೇತನರೂ ಸೇರಿದಂತೆ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ಮಾದರಿಗಳಿಂದ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.ಈ ನಿಟ್ಟಿನಲ್ಲಿ, ವಿಶೇಷಚೇತನರಿಗೆ ‌ಕರ್ನಾಟಕ ಸರ್ಕಾರವು ತರಲು ಉದ್ದೇಶಿಸಿರುವ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಮಸೂದೆಗೆ ಬೆಂಬಲವಾಗಿ ನಿಲ್ಲುವ ಮೂಲಕ ಇಡೀ ದೇಶಕ್ಕೆ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ಮಾಡಬೇಕೆಂದು ಮನವಿ ಮಾಡಿದರು.

ನಮ್ಮ ಫೌಂಡೇಶನ್‌ ಇಂತಹ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡಲಿದೆ. ಸಮಾಜದ ನಾಗರಿಕರಾಗಿ ನಮಗೆ ಸಾಕಷ್ಟು ಜವಾಬ್ದಾರಿ ಇದೆ. ಈ ದೇಶ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೇರಿಲ್ಲ. ದೇಶ ಎಲ್ಲರದು. ವಿಶ್ವದ ಹಲವು ದೇಶಗಳು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ತಲಾದಾಯದಲ್ಲಿ ಹೆಚ್ಚಿವೆ. ಅಂಗವಿಕಲರಿಗೆ ಅವಕಾಶ ದೊರೆಯುವಂತೆ ಮಾಡಲು ನಾವು ಕೆಲಸ ಮಾಡಬೇಕು ಎಂದರು.ದೇಶದಲ್ಲಿ ಕೋಟ್ಯಂತರ ವಿಶೇಷಚೇತನರು ಇದ್ದಾರೆ. ಅವರಿಗೆ ನಾವು ಒಂದಲ್ಲ ಒಂದು ರೀತಿಯಲ್ಲಿ ನೆರವಾಗಬಹುದು. ನಮ್ಮ ಇಲಾಖೆ ವಿಶೇಷಚೇತನರಿಗೆ ‌ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಲು ಸಾಕಷ್ಟು ಕೆಲಸ ಮಾಡುತ್ತಿದೆ. ವಿವಿಧ ರೀತಿಯ ವಿಶೇಷ ಚೇತನರು ಇದ್ದಾರೆ. ಅವರಿಗೆ ಎಲ್ಲ ರೀತಿಯ ಅವಕಾಶಗಳು ಸಿಗುವಂತಾಗಬೇಕು. ಒಂದು ಹೊಸ ಬದಲಾವಣೆಗೆ ನಾವೆಲ್ಲ ಕೈ ಜೋಡಿಸೋಣ ಎಂದು ಕರೆ ನೀಡಿದರು.

ವಿಶೇಷಚೇತನರ ಬಲವರ್ಧನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, 2047ರ ವೇಳೆಗೆ ಭಾರತವನ್ನು ವಿಶ್ವದ ಅತ್ಯಂತ ಸಮಗ್ರ ಸಂಶೋಧನೆ ಮತ್ತು ಅಭಿವೃದ್ಧಿ ರಾಜಧಾನಿಯನ್ನಾಗಿ ಮಾಡುವ ಗುರಿ ಹೊಂದಿರುವ ಈ ಕಾರ್ಯಕ್ರಮದ ಅಡಿಯಲ್ಲಿ ₹10 ಕೋಟಿ ರೂ. ಆರಂಭಿಕ ನಿಧಿಯೊಂದಿಗೆ ದೇಶಾದ್ಯಂತ 100+ ಮುಕ್ತ ಪ್ರಯೋಗಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ವಿಶೇಷಚೇತನರನ್ನು ಕೇವಲ ವಿವಿಧ ರೀತಿಯ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನಾಗಿ ಪರಿಭಾವಿಸದೆ, ಅವರ ಸಬಲೀಕರಣ, ಒಳಗೊಳ್ಳುವಿಕೆ ಮತ್ತು ಅವರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಅವರನ್ನು ಆರ್ಥಿಕತೆಯ ಪ್ರಮುಖ ಪಾಲುದಾರರಾಗಿ ಗುರುತಿಸುವ ʻಪರ್ಪಲ್ ಎಕಾನಮಿʼಯ ಮಾದರಿಯಿಂದ ಈ ಯೋಜನೆಯನ್ನು ಮುನ್ನೆಡೆಸುವ ಗುರಿಯನ್ನು ಈ ಇನ್ನೋವ್8ಎಬಿಲಿಟಿ ಹೊಂದಿದೆ.

ಇದೇ ಸಂದರ್ಭದಲ್ಲಿ, ಆಹಾರ ಮತ್ತು ಕೃಷಿ, ಇಂಧನ, ನೀರು ಮತ್ತು ಮರು ಉತ್ಪಾದನೆ, ನಿರ್ಮಿತ ಪರಿಸರ ಮತ್ತು ಆವಾಸ ಸ್ಥಾನಗಳು, ಆರೋಗ್ಯ ರಕ್ಷಣೆ ಮತ್ತು ಔಷಧ, ಡೀಪ್‌ ಟೆಕ್‌ ಮತ್ತು ಭವಿಷ್ಯದ‌ ಸ್ಟೆಮ್ ತಂತ್ರಜ್ಞಾನ, ಶಿಕ್ಷಣ ಮತ್ತು ಸಾಹಿತ್ಯ, ಅರ್ಥಶಾಸ್ತ್ರ, ಕಲೆ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆ ಹಾಗೂ ಸ್ಥಳೀಯ ಜ್ಞಾನಶಾಖೆಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ 10 ಮಂದಿಯನ್ನು ಗೌರವಿಸಲಾಯಿತು.

ಸಮರ್ಥನಂ ಟ್ರಸ್ಟ್‌ನ ಸಂಸ್ಥಾಪಕ ಟ್ರಸ್ಟಿ, ಡಾ. ಜಿ ಕೆ ಮಹಾಂತೇಶ್‌, ಶಾಲಿನಿ ಹಿರಿಯ ಕ್ರೀಡಾಪಟು ಶಾಲಿನಿ ಸರಸ್ವತಿ, ಜೆಎಸ್‌ಡಬ್ಲ್ಯೂ ಇಂಡಸ್ಟ್ರೀಸ್‌ನ ಅಧ್ಯಕ್ಷರಾದ ಬಿ ಕೆ ಮುರುಗನ್‌, ಕಿರ್ಲೋಸ್ಕರ್‌ ಮೋಟಾರ್ಸ್‌ನ ಉಪಾಧ್ಯಕ್ಷರಾದ ರಮೇಶ್‌ ರಾವ್‌, ಇಂಡಿಯಾ ರೈಸ್‌ ಫೌಂಡೇಶನ್‌ನ ಸುನಿಲ್‌ ಜೋಸ್‌, ಜಾರ್ಜ್‌ ಕಣ್ಣನ್‌, ಕಾರ್ಪೋರೇಟ್‌ ಉದ್ಯಮಿಗಳು, ಪ್ರಾಯೋಜಕರು ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img