Monday, August 10, 2026
20.5 C
Belagavi

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

advertisement

spot_img

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ, ಸಮುದಾಯದ ಯುವಜನರು ಉದ್ಯಮ ವಲಯಕ್ಕೆ ಧುಮುಕಿ ಬೆಳವಣಿಗೆ ಹೊಂದಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ‌ ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ವೀರಶೈವ ಲಿಂಗಾಯತ ಗ್ಲೋಬಲ್ ಬಿಝಿನೆಸ್ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅವರು ಗುರುವಾರ ಮಾತನಾಡಿದರು.ಸಮುದಾಯದಲ್ಲಿ ಗುಬ್ಬಿ ತೋಟದಪ್ಪ, ಸರ್ ಪುಟ್ಟಣ್ಣ ಶೆಟ್ಟಿ ಅವರಂತಹ ಮಹಾಮಹಿಮರು ಉದ್ಯಮಶೀಲರಾಗಿ ಸಾಧನೆಗಳನ್ನು ಮಾಡಿ, ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. 1906ರಷ್ಟು ಹಿಂದೆಯೇ ಶಿರಸಂಗಿಯ ದೇಸಾಯಿ ಅವರಿಂದ ಇದಕ್ಕೆ ಭದ್ರ ಬುನಾದಿ ಬಿದ್ದಿದೆ. ಜತೆಗೆ ವೀರಶೈವ ಮಹಾಸಭಾ ಕೂಡ ಇದರಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಇದರಿಂದಾಗಿ ವೀರಶೈವ ಲಿಂಗಾಯತ ಸಮುದಾಯವು ವ್ಯಾಪಾರ ವಹಿವಾಟು ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಯಶಸ್ಸು ಕಾಣುವುದು ಸಾಧ್ಯವಾಗಿದೆ ಎಂದು ಅವರು ನೆನಪಿಸಿ ಕೊಂಡಿದ್ದಾರೆ.

ನಾವು ಕೈಗಾರಿಕೆ, ವ್ಯಾಪಾರ ಇತ್ಯಾದಿಗಳನ್ನು ಉದಾಸೀನ ಮಾಡಬಾರದು. ಇವು ಕೃಷಿಗೆ ಪೂರಕವಾಗಿ ನಮ್ಮ ಸಮುದಾಯದ ಆರ್ಥಿಕ ಬೆಳವಣಿಗೆಗೆ ಆಧುನಿಕ ಕಾಲದಲ್ಲಿ ನಿರ್ಣಾಯಕವಾಗಿವೆ. ಸರಕಾರದ ನೀತಿಗಳು ಕೂಡ ಉಪಯುಕ್ತವಾಗಿವೆ. ರಾಜ್ಯದಲ್ಲಿ ಯಾವುದೇ ಭಾಗದಲ್ಲಾದರೂ ಕೈಗಾರಿಕಾ ಬೆಳವಣಿಗೆಗೆ ಸೂಕ್ತ ಕಾರ್ಯ ಪರಿಸರ ಇದೆ. ಸಮುದಾಯದ ಪ್ರತಿಭಾವಂತರು ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ರೀತಿಯ ಸಮಾವೇಶಗಳನ್ನು ಸರಕಾರವೂ ಪ್ರೋತ್ಸಾಹಿಸುತ್ತದೆ. ಇದರಿಂದ ಅಸ್ಮಿತೆ, ನೆಟ್ವರ್ಕಿಂಗ್ ಮತ್ತು ಹೂಡಿಕೆಗೆ ಇರುವ ಅವಕಾಶಗಳು ಗೊತ್ತಾಗುತ್ತವೆ. ರಾಜ್ಯದಲ್ಲಿ ನಾವೀನ್ಯತೆ, ಸಂಶೋಧನೆ, ತಯಾರಿಕೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತಿತರ ವಲಯಗಳಲ್ಲಿ ಉಜ್ವಲ ಅವಕಾಶಗಳಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಈಶ್ವರ ಖಂಡ್ರೆ, ಶಾಸಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ನವೀನ್, ಫೋರಂನ ಬೆಂಗಳೂರು ಘಟಕದ ಅಧ್ಯಕ್ಷ ಸಂತೋಷ್ ಕೆಂಚಾಂಬ, ಮಾಜಿ ಶಾಸಕ ರುದ್ರಗೌಡ ಮುಂತಾದವರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img