Friday, July 17, 2026
20.9 C
Belagavi

ಎಲ್ಲರ ಒಮ್ಮತದಿಂದ ಮಹನಿಯರ ಜಯಂತಿ ಆಚರಣೆ:ಸಚಿವ ಕೆ.ಹೆಚ್ ಮುನಿಯಪ್ಪ

advertisement

spot_img

ಎಲ್ಲರ ಒಮ್ಮತದಿಂದ ಮಹನಿಯರ ಜಯಂತಿ ಆಚರಣೆ:ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ:-ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರುಗಳ ಜಯಂತಿಯನ್ನು ಸಮಾಜದ ಮುಖಂಡರ ಎಲ್ಲರ ಒಮ್ಮತದಿಂದ ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿಡಾ. ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು

ದಿನಾಂಕ 05.04.2026 ರಂದು ಡಾ. ಬಾಬು ಜಗಜೀವನ ರಾಂ ಅವರ 119ನೇ ಜಯಂತಿ ಹಾಗೂ ದಿನಾಂಕ 14.04.2026 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ಮಾಡಲಾಗುತ್ತಿದೆ. ಎರಡೂ ಮಹನೀಯರ ಆದರ್ಶಗಳು, ಸಮಾಜಮುಖಿ ಚಿಂತನೆಗಳು ಹಾಗೂ ಸಮಾನತೆಗಾಗಿ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಿ, ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಗೌರವಯುತವಾಗಿ ಆಚರಿಸಬೇಕು.

ಸಮಾಜದ ಮುಖಂಡರೆಲ್ಲರು ಮಹನಿಯರ ಜಯಂತಿಯನ್ನು ಯಾವ ರೀತಿ ಆಚರಣೆ ಮಾಡಬೇಕು ಎಂಬ ಬಗ್ಗೆ ಒಮ್ಮತದ ತೀರ್ಮಾನ ಕೈಗೊಂಡು, ಜಿಲ್ಲಾಡಳಿತಕ್ಕೆ ತಿಳಿಸಿದರೆ ಅದೇ ರೀತಿ ಮಾಡೋಣ ಎಂದರು.ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಶೀಘ್ರದಲ್ಲೇ ಆಗಲಿದೆ. ಮುಖ್ಯಮಂತ್ರಿಗಳಿಂದ ಉದ್ಘಾಟನೆ ಆಗಬೇಕು ಎಂಬ ನಿಮ್ಮ ಬೇಡಿಕೆಯಂತೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಮತ್ತೊಮ್ಮೆ ಚರ್ಚಿಸಿ ದಿನಾಂಕ ನಿಗದಿ ಪಡಿಸಿ ತಿಳಿಸಲಾಗುವುದು. ಏಪ್ರಿಲ್ 14 ರೊಳಗೆ ಪುತ್ಥಳಿ ಲೋಕಾರ್ಪಣೆಗೊಳಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಡಿವೈಎಸ್ಪಿ ಪಾಂಡುರಂಗ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img