ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ವತಿಯಿಂದ ಮಹಿಳಾ ಸ್ನೇಹಿ ನೀರೆ ಗ್ರಾಮ ಪಂಚಾಯತ್ ನ ನೂತನ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಲೋಕಾರ್ಪಣೆಗೊಳಿಸಿದರು.ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಮಾತಿದೆ. ಹೀಗಾಗಿ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡುವುದೇ ನಮ್ಮ ಸರ್ಕಾರದ ಉದ್ದೇಶ. ನೂತನವಾಗಿ ನಿರ್ಮಿಸಿರುವ ಹೈಟೆಕ್ ಕಟ್ಟಡ ಇಡೀ ರಾಜ್ಯಕ್ಕೆ ಮಾದರಿಯಾಗಿದೆ.
ಈ ವೇಳೆ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲಕುಮಾರ್, ನೀರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಚ್ಚಿದಾನಂದ ಎಸ್.ಪ್ರಭು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ, ಮುಖಂಡರಾದ ಉದಯಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕಾರ್ಕಳ ತಹಶಿಲ್ದಾರರಾದ ಪ್ರದೀಪ್ ಆರ್, ತಾಲೂಕು ಪಂಚಾಯತ್ ಇಒ ಪ್ರಶಾಂತ್ ರಾವ್ ಸೇರಿದಂತೆ ನೀರೆ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.