ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 23ರಂದು ನಡೆಯಲಿರುವ ಮಹಿಳಾ ದಸರಾ ಉದ್ಘಾಟನಾ ಸಮಾರಂಭಕ್ಕೆ ಮೈಸೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಆಹ್ವಾನ.ಮಹಿಳಾ ಶಕ್ತಿಯ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸೃಜನಾತ್ಮಕ ಪ್ರತಿಭೆಯನ್ನು ಅನಾವರಣಗೊಳಿಸುವ ಈ ವಿಶೇಷ ದಸರಾ ಕಾರ್ಯಕ್ರಮವು ಮೈಸೂರಿನ ವೈಭವಕ್ಕೆ ಮತ್ತೊಂದು ಹೊಳಪು ನೀಡಲಿ ಎಂದು ಆಶಿಸುತ್ತೇನೆ ಎಂದು ಪ್ರತಿಕ್ರಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸವಿತಾ, ಉಪ ನಿರ್ದೇಶಕರಾದ ಬಸವರಾಜ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.