Saturday, April 11, 2026
34.1 C
Belagavi

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

advertisement

spot_img

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ₹25 ಕೋಟಿ: ಎಂ ಬಿ ಪಾಟೀಲ

ಬೆಂಗಳೂರು:

ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ 2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ (ಅಕ್ಕ ಕೆಫೆ) ಸರಕಾರವು 25 ಕೋಟಿ ರೂ. ಮಂಜೂರು ಮಾಡಿದೆ. ಇದರಿಂದ ಕಾಫಿ ಉದ್ಯಮದಲ್ಲಿ ಮೌಲ್ಯ ಸರಪಳಿಯ ಬಲವರ್ಧನೆ ಮತ್ತು ಉದ್ಯೋಗ ಸೃಷ್ಟಿಯ ಮೂಲಕ ಆರ್ಥಿಕ ಸಬಲೀಕರಣ ಸಾಧ್ಯವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸ್ಪೆಷಾಲಿಟಿ ಕಾಫಿ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್.ಸಿ.ಎ.ಐ) ಸಂಘಟನೆಯು ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವವನ್ನು ಅವರು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಕಾಫಿ ಬೋರ್ಡ್ ಸಂಸ್ಥೆಯು ರಾಷ್ಟ್ರೀಯ ಜೀವನೋಪಾಯ ಮಿಷನ್-ಕರ್ನಾಟಕದ ಜತೆ ಕೈಜೋಡಿಸಿ, ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ ರಾಜ್ಯದ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಬ್ರೂಯಿಂಗ್, ಕೆಫೆ ನಿರ್ವಹಣೆ ಮತ್ತು ಉದ್ಯಮಶೀಲತೆಗೆ ಸಂಬಂಧಿಸಿದ ತರಬೇತಿ ನೀಡುತ್ತಿದೆ. ಸರಕಾರವು ಕೊಡಗು ಜಿಲ್ಲೆಯಲ್ಲಿ ಕಾಫಿ ತೋಟಗಳು ಮತ್ತು ದೊಡ್ಡ ಪ್ಲಾಂಟೇಷನ್ ಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಉತ್ಸವದಲ್ಲಿ ಕಾಫಿ ಬೆಳೆಗಾರರು ತಮ್ಮ ಬೆಳೆಗಳನ್ನು ತಾವೇ ಬ್ರ್ಯಾಂಡ್ ಮಾಡಿ, ಇಲ್ಲಿ ಪ್ರದರ್ಶಿಸುತ್ತಿರುವುದು ಮೆಚ್ಚಬೇಕಾದ ಸಂಗತಿಯಾಗಿದೆ. ಕೈಗಾರಿಕಾ ಇಲಾಖೆಯು ರಾಜ್ಯದ ಕಾಫಿಗೆ ಜಾಗತಿಕ ಮನ್ನಣೆ ತಂದುಕೊಡುವ ಪ್ರಯತ್ನವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ ತೆರೆದಿದ್ದು, ಅಲ್ಲಿ ವಿಶೇಷ ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಮೂಲಕ ಕಾಫಿ ಸೇರಿದಂತೆ ರಾಜ್ಯದ 45ಕ್ಕೂ ಹೆಚ್ಚು ಜಿಐ ಮಾನ್ಯತೆ ಹೊಂದಿರುವ ವಸ್ತುಗಳನ್ನು ಮಾರಾಟ ಮಾಡುತ್ತಿದೆ ಎಂದು ಅವರು ನುಡಿದಿದ್ದಾರೆ.ರಾಜ್ಯದಲ್ಲಿ 2.2 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಾಫಿ ಬೆಳೆಯಲಾಗುತ್ತಿದ್ದು, ದೇಶದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ. ಭಾರತದಲ್ಲಿ ಬೆಳೆಯಲಾಗುವ ಒಟ್ಟು ಕಾಫಿಯಲ್ಲಿ ಶೇ.75ರಷ್ಟನ್ನು ಕರ್ನಾಟಕದ ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೇ ಬೆಳೆಯಲಾಗುತ್ತಿದೆ. ಬೆಳೆಗಾರರು, ಸಂಸ್ಕರಣೆಗಾರರು, ರಫ್ತುದಾರರು, ರೋಸ್ಟರ್ಸ್, ಕೆಫೆ ಮತ್ತು ಆತಿಥ್ಯೋದಮ ಸೇವೆ ಒದಗಿಸುವವರು, ಸಾಧನ ಸಲಕರಣೆಗಳ ತಯಾರಕರು, ವೃತ್ತಿಪರರು ಮತ್ತು ಗ್ರಾಹಕರನ್ನೆಲ್ಲ ಈ ಉತ್ಸವವು ಒಂದೆಡೆ ತಂದಿರುವುದು ಒಳ್ಳೆಯ ಉಪಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಉತ್ಸವದಲ್ಲಿ ಇರುವ ಹಲವು ಮಳಿಗೆಗಳಿಗೆ ಭೇಟಿ ನೀಡಿ, ಕಾಫಿ ತಳಿ ಇತ್ಯಾದಿಗಳ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡು, ಒಂದಿಷ್ಟನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಫಿ ಬೋರ್ಡ್ ಅಧ್ಯಕ್ಷ ಎಂ ಜೆ ದಿನೇಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಭಾರತೀಯ ಕಾಫಿ ಬೋರ್ಡ್ ಕಾರ್ಯದರ್ಶಿ ಮತ್ತು ಸಿಇಒ ಎಂ.ಕೂರ್ಮಾರಾವ್, ಎಸ್ಸಿಎಐ ಅಧ್ಯಕ್ಷೆ ಹಂಸಿನಿ ಅಪ್ಪಾದೊರೈ, ಕಾರ್ಯದರ್ಶಿ ಶ್ರೀಕಂಠ ರಾವ್, ಮಾಜಿ ಅಧ್ಯಕ್ಷ ಎಂ.,ಪೂರ್ಣೇಶ್ ಉಪಸ್ಥಿತರಿದ್ದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img