Wednesday, August 12, 2026
20.7 C
Belagavi

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ

advertisement

spot_img

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ
ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ
ಬೆಂಗಳೂರು: 16.06.2026

ಅಪರಾಧ ತನಿಖಾ ಇಲಾಖೆಯ (ಸಿಐಡಿ) ಪ್ರಸ್ತುತ ಕಾರ್ಯವೈಖರಿ ಹಾಗೂ ಇಲಾಖೆಯ ಮುಂದಿರುವ ಹೊಸ ಸವಾಲುಗಳ ಕುರಿತು ಮಾನ್ಯ ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಸಿಐಡಿ ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಪರಾಮರ್ಶನಾ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರು, ಸಿಐಡಿ ಇಲಾಖೆಯು ನಿರ್ವಹಿಸುತ್ತಿರುವ ಅಪರಾಧ ತನಿಖೆಗಳು, ಆರ್ಥಿಕ ಅಪರಾಧಗಳು, ಸೈಬರ್ ಅಪರಾಧ, ಮಾದಕ ದ್ರವ್ಯ (ನಾರ್ಕೋಟಿಕ್ಸ್) ತಡೆ, ಹಣಕಾಸು ವಂಚನೆ ಹಾಗೂ ಇಂಟೆಲಿಜೆನ್ಸ್ ಆಧಾರಿತ ಪೊಲೀಸಿಂಗ್ ಸೇರಿದಂತೆ ಹತ್ತು ಹಲವು ಪ್ರಮುಖ ಜವಾಬ್ದಾರಿಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು.

ದಿನೇ ದಿನೇ ಬದಲಾಗುತ್ತಿರುವ ಮತ್ತು ಅತ್ಯಾಧುನಿಕವಾಗುತ್ತಿರುವ ಅಪರಾಧ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ತನಿಖಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವುದು, ವಿವಿಧ ವಿಭಾಗಗಳ ನಡುವೆ ಪರಸ್ಪರ ಸಮನ್ವಯತೆಯನ್ನು ಉತ್ತಮಪಡಿಸುವುದು ಹಾಗೂ ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಇಲಾಖೆಯ ಒಟ್ಟಾರೆ ಕಾರ್ಯವೈಖರಿ ಮತ್ತು ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆ, ಆರ್ಥಿಕ ವಂಚನೆ ಮತ್ತು ಸೈಬರ್ ಅಪರಾಧಗಳನ್ನು ತಡೆಯಲು ತಾಂತ್ರಿಕ ಸಜ್ಜುಗೊಳಿಸುವಿಕೆ ಹಾಗೂ ಇಂಟೆಲಿಜೆನ್ಸ್ ಆಧಾರಿತ ತನಿಖಾ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವುದು ಸೇರಿದಂತೆ ಕ್ರಮ ಕುರಿತಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಿಐಡಿ ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಪ್ರಣಬ್ ಮೊಹಂತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img