ಮಾಜಿ. ಮುಖ್ಯಮಂತ್ರಿ ಬೆಳಗಾವಿಯ ಸಂಸದ ಜಗದೀಶ ಶೆಟ್ಟರ
ಬೆಳಗಾವಿಯಲ್ಲಿ ನಿನ್ನೆ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಕೇಂದ್ರ ಸರಕಾರದ Special Assistance to state for Capital Investment Development of Iconic Tourist Destination Scheme (SASCI) ಯೋಜನೆಯಡಿ ಕೈಕೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಮೂಲಭೂತ ಸೌಕರ್ಯಗಳ ಮೂಲಕ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ರೂ :118 ಕೋಟಿ ಅನುದಾನದಲ್ಲಿ ಕೈಕೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಹಾಜರಿದ್ದ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಲ್ಲಿ ವಿಚಾರಿಸಲಾಗಿ, ಯೋಜನೆಗೆ ಈಗಾಗಲೇ ಅನುಮೋದನೆ ದೊರೆತ್ತಿದ್ದು, ವಿವಿಧ ಕಾಮರಿಗಳ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆಗಾಗಿ ಹಾಗೂ ಮುಂದಿನ ಒಪ್ಪಿಗೆಗಾಗಿ ಪ್ರವಾಸೋದ್ಯಮ ಇಲಾಖೆಯ ಮೇಲಾಧಿಕಾರಿಗಳಿಗೆ ಕಳುಹಿಸಿದ ಬಗ್ಗೆ ಅಧಿಕಾರಿಗಳು ತಿಳಿಸಿದ ಹಿನ್ನಲೆಯಲ್ಲಿ ಪ್ರವಾಸೋದ್ಯಮ ಜಂಟಿ ಆಯುಕ್ತರಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರಸ್ತಾಪಿತ ಯೋಜನೆಯ ಕಾಮಗಾರಿಗಳಿಗೆ ಟೆಂಡರ್ ಕರೆಯಲು ಬೇಗನೆ ಅನುಮತಿ ನೀಡಲು ಸೂಚಿಸಿದರು.
ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಹಾಗೂ ದೇವಸ್ಥಾನದ ಅನುದಾನ ಸೇರಿ ರೂ: 215 ಕೋಟಿ ವೆಚ್ಚದಲ್ಲಿ ನಿಗದಿತ ಎಲ್ಲ ಕಾಮಗಾರಿಗಳನ್ನು ಸಮಯಕ್ಕನುಗುಣವಾಗಿ ಅನುಷ್ಠಾನಗೊಳಿಸಿ ಪೂರ್ಣಗೊಳುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀ ಅಶೋಕ ದುಡಗುಂಟೆ, ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿಯ ಆಯುಕ್ತರಾದ ಶ್ರೀಮತಿ ಗೀತಾ ಕೌಲಗಿ, ಬೆಳಗಾವಿಯ ಪ್ರವಾಸೋದ್ಯಮ ಉಪ – ನಿರ್ದೆಶಕರಾದ ಶ್ರೀ ಬಡಿಗೇರ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.



