ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದ ಬೆಳಗಾವಿ ರಸ್ತೆಯಲ್ಲಿರುವ ಸರ್ಕಾರಿ ಎಂಎಸ್ಐಎಲ್ ಮಧ್ಯದ ಅಂಗಡಿಯನ್ನು ಚಾಲಾಕಿತನದಿಂದ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಅಂಗಡಿಯಲ್ಲಿನ ಸಿ ಸಿ ಕ್ಯಾಮೆರಾ ಗಳನ್ನು ಕಿತ್ತು ಬೀಗ ಮುರಿದು ಕನ್ನ ಹಾಕಿದ್ದಾರೆ. ಘಟನಾ ಸ್ಥಳಕ್ಕೆ ರಾಮದುರ್ಗದ ಪಿಎಸ್ಐ ಶ್ರೀಮತಿ ಸವಿತಾ ಮುನ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.