Monday, August 10, 2026
21.2 C
Belagavi

ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

advertisement

spot_img

ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಬಾಗಲಕೋಟೆ: ನೀಟ್-ಯುಜಿ 2026 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಆರೋಪಗಳು ದೇಶದಾದ್ಯಂತ ಆತಂಕ ಸೃಷ್ಟಿಸಿರುವ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೇಂದ್ರ ಸರ್ಕಾರದಿಂದ ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯ ತನಿಖೆಗೆ ಆಗ್ರಹಿಸಿದೆ.
ಎಬಿವಿಪಿ ಜಿಲ್ಲಾ ಸಂಚಾಲಕ ವಿಪುಲ ಪೇಟಕರ ಪ್ರಕಟಣೆಯಲ್ಲಿ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುವಂತಹ ಮಹತ್ವದ ಪರೀಕ್ಷೆಗಳ ಪಾವಿತ್ರ್ಯ ಮತ್ತು ವಿಶ್ವಾಸಾರ್ಹತೆ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಯಾವುದೇ ರೀತಿಯ ಅಕ್ರಮಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರಿಶ್ರಮಕ್ಕೆ ಧಕ್ಕೆಯುಂಟುಮಾಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸಬೇಕು. ಪರೀಕ್ಷಾ ಮಾಫಿಯಾ ಸೇರಿದಂತೆ ಯಾವುದೇ ಹಂತದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.ತನಿಖೆ ಪೂರ್ಣಗೊಳ್ಳುವವರೆಗೆ ಎನ್‌ಟಿಎ ವಿದ್ಯಾರ್ಥಿಗಳು ಮತ್ತು ಪೋಷಕರ ಮುಂದೆ ವಾಸ್ತವಾಂಶಗಳನ್ನು ಸ್ಪಷ್ಟವಾಗಿ ಮಂಡಿಸಿ ಪಾರದರ್ಶಕತೆಯನ್ನು ಕಾಪಾಡಬೇಕು ಎಂದು ಆಗ್ರಹಿಸಲಾಗಿದೆ.ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ, ಪ್ರಶ್ನೆಪತ್ರಿಕೆಯ ಗೌಪ್ಯತೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಎಬಿವಿಪಿ ಅಭಿಪ್ರಾಯಪಟ್ಟಿದೆ.
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಹಾಗೂ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಗಾಗಿ ಎಬಿವಿಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಪುಲ ಪೇಟಕರ ತಿಳಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img