Wednesday, August 12, 2026
20.7 C
Belagavi

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ

ದೂರು ನೀಡಲಾಗಿದ್ದು, ತನಿಖೆ ನಡೆಯಲಿದೆ

ಬೆಂಗಳೂರು, 

“ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

“ಒಡಿಸ್ಸಾದಿಂದ ಬಂದಿರುವ ನಾಲ್ಕು ಜನರು ಸ್ಥಳೀಯ ಬ್ಯಾಟರಾಯನಪುರ ನಿವಾಸಿ ಸುರೇಶ್ ಎಂಬಾತನ ಸಹಾಯ ಪಡೆದು ರೂಮ್ ಬುಕ್ ಮಾಡಿಸಿದ್ದಾರೆ. ನಂತರ ನಮ್ಮ ಶಾಸಕರಿಗೆ ಆಮಿಷ ಒಡ್ಡಿದಾಗ ನಮ್ಮ ಪಕ್ಷದ ಎಂಎಲ್ ಎಗಳು ಈ ವಿಚಾರವನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಆಮಿಷ ಒಡ್ಡಿದ ನಾಲ್ವರ ಪೈಕಿ ಇಬ್ಬರು ತಪ್ಪಿಸಿಕೊಂಡಿದ್ದು ಮತ್ತಿಬ್ಬರನ್ನು ಹಿಡಿಯಲಾಗಿದೆ. ಅವರು ಇದೇ ಕೆಲಸಕ್ಕೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಖಾಲಿ ಚೆಕ್ ತಂದಿದ್ದಾರೆ. ಆ ಮೂಲಕ ಆಪರೇಷನ್ ಕಮಲ ಮಾಡಲಾಗುತ್ತಿದೆ. ಎಐಸಿಸಿ ಕಾರ್ಯದರ್ಶಿಯವರು ಹಾಗೂ ಮಿಕ್ಕ ನಾಯಕರು ಇತರೇ ವಿಚಾರ ತಿಳಿಸಲಿದ್ದಾರೆ” ಎಂದರು.ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಬಗ್ಗೆ ಕೇಳಿದಾಗ, “ಪಕ್ಷದ ಎಂಎಲ್ ಎಗಳು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡದೆ ಬಿಜೆಪಿ ಅಧ್ಯಕ್ಷರನ್ನು ಭೇಟಿ ಮಾಡಲು ಆಗುತ್ತದೆಯೇ? ನಮ್ಮ ಪಕ್ಷದ ಶಾಸಕರು ತಮ್ಮ ಆಸೆಯಂತೆ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದು, ಅವರ ಆಶೀರ್ವಾದ ಪಡೆದಿದ್ದಾರೆ. ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ ಅವರು ಒಡಿಸ್ಸಾಗೆ ಪ್ರಯಾಣ ಬೆಳೆಸಲಿದ್ದಾರೆ” ಎಂದರು‌.

ದೂರು ನೀಡಲಾಗಿದ್ದು, ತನಿಖೆ ನಡೆಯಲಿದೆ

ರೆಸಾರ್ಟ್ ನಲ್ಲಿ ಅವರಿಗೆ ಆಮಿಷ ಒಡ್ಡಿರುವ ಘಟನೆ ಬಗ್ಗೆ ಮನವರಿಕೆ ಮಾಡಿದ್ದಾರಾ ಎಂದು ಕೇಳಿದಾಗ, “ಅವರಿಗೆ ಆಪರೇಷನ್ ಕಮಲದ ಪ್ರಯತ್ನದ ಬಗ್ಗೆ ವಿವರಿಸಿದ್ದಾರೆ. ಅವರಿಗೆ ಆಮಿಷ ಒಡ್ಡಲು ನೀಡಲಾಗಿದ್ದ ಚೆಕ್ ಅನ್ನು ಪೋಲೀಸರು ವಶಪಡಿಸಿಕೊಂಡಿದ್ದು, ಮಹಜರ್ ಮಾಡಲಿದ್ದಾರೆ” ಎಂದು ತಿಳಿಸಿದರು.

ಆಮಿಷ ಒಡ್ಡಿದವರ ವಿರುದ್ಧ ದೂರು ನೀಡಲಾಗುವುದೇ ಎಂದು ಕೇಳಿದಾಗ, “ಖಂಡಿತ, ಈಗಾಗಲೇ ದೂರು ನೀಡಲಾಗಿದ್ದು, ನಾಲ್ವರಲ್ಲಿ ಇಬ್ಬರನ್ನು ಬಂಧಿಸಿದ್ದು, ಪರಾರಿಯಾಗಿರುವ ಮತ್ತಿಬ್ಬರನ್ನು ಹುಡುಕುತ್ತಿದ್ದಾರೆ. ಪೋಲೀಸರು ತನಿಖೆ ಮಾಡಲಿದ್ದಾರೆ. ಕಾನೂನು ಮುಂದಿನದನ್ನು ನೋಡಿಕೊಳ್ಳಲಿದೆ” ಎಂದು ತಿಳಿಸಿದರು.

ಪಕ್ಷಕ್ಕೆ ಎದುರಾದ ಟ್ರಬಲ್ ಅನ್ನು ನೀವು ಮತ್ತೊಮ್ಮೆ ಯಶಸ್ವಿಯಾಗಿ ನಿಭಾಯಿಸಿದ್ದೀರಿ, ನಿಮ್ಮ ಮೊಗದಲ್ಲಿ ವಿಜಯದ ಮಂದಹಾಸ ಮೂಡಿದೆ ಎಂದು ಕೇಳಿದಾಗ, “ಯಾವ ಟ್ರಬಲ್ಲೂ ಇಲ್ಲ. ನಾವು ಇಂತಹ ಪರಿಸ್ಥಿತಿ ಎದುರಿಸುತ್ತಲೇ ಇರುತ್ತೇವೆ. ನಾನು ಸದಾ ಮಂದಹಾಸದಲ್ಲೇ ಇರುತ್ತೇನೆ. ನಾನು ನನ್ನ ಆತ್ಮಸಾಕ್ಷಿಯನ್ನು ನಂಬಿದ್ದೇನೆ” ಎಂದು ತಿಳಿಸಿದರು.

ದಾವಣಗೆರೆ ಟಿಕೆಟ್ ಹಂಚಿಕೆ ಗೊಂದಲ ಬಗೆಹರಿದಿದೆಯೇ ಎಂದಾಗ, “ಎಲ್ಲಿದೆ ಗೊಂದಲ. ಯಾವ ಗೊಂದಲವೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಒಪ್ಪಿಕೊಳ್ಳುವುದಾಗಿ ಎಲ್ಲಾ ನಾಯಕರು ಹೇಳಿದ್ದಾರೆ” ಎಂದರು.

ನಿರ್ಮಲಾನಂದ ಶ್ರೀಗಳ ಹೆಜ್ಜೆ ತಪ್ಪುತ್ತಿದೆ ಎಂಬ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಈ ಬಗ್ಗೆ ನಾನು ಮಾತನಾಡುವುದಿಲ್ಲ” ಎಂದು ತಿಳಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img