Wednesday, August 12, 2026
21.6 C
Belagavi

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

advertisement

spot_img

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ಕರ್ನಾಟಕ ಸರಕಾರದಿಂದ ಶಿಷ್ಟಚಾರದ ಆದೇಶ

ಭಕ್ತಿಯ ಅಡಿಪಾಯದ ಮೇಲೆ ದೈವಕೃಪೆಯ ಗೋಪುರ

ಧಮ್ಕಿಗಳಿಗೆ ದ್ವಾರಕನಾಥ್ ಅವರು ಹೆದರಿಲ್ಲ

ಬೆಂಗಳೂರು,

“ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನ ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು.

“ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ಕರ್ನಾಟಕ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿದಂತೆ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರ ಪರವಾಗಿ ಯಾರೇ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.

“ಎಷ್ಟೋ ಮಂದಿ ಶಾಸಕರು, ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದರ್ಶನ ಸಿಗದೇ ವಾಪಸ್ ಬಂದಿದ್ದಾರೆ. ಈಗ ದೇವರ ಮುಂದೆ ನಿಂತು ಆರತಿ ಪಡೆಯಲು ಅವಕಾಶ ನೀಡಲಾಗುವುದು. ಈ ರಾಜ್ಯದ ಸೇವೆ ಮಾಡುವವರಿಗೆ ದೇವರಲ್ಲಿ ಪ್ರಾರ್ಥನೆ ಮಾಡಲು ಈ ಅವಕಾಶ ಒದಗಿಸಲಾಗಿದೆ. ಇದು ನನ್ನ ಕಾಲದಲ್ಲಿ ಆಗಲಿರುವ ಮುಖ್ಯ ಘೋಷಣೆ” ಎಂದರು.

“ನಾನು ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದ ದಿನದಿಂದ ಮನೆದೇವರು ತಿರುಪತಿಗೆ ಹೋಗಿರಲಿಲ್ಲ. ಇತ್ತೀಚೆಗೆ ಭೇಟಿ ನೀಡಿದ್ದ ಸಮಯದಲ್ಲಿ ಈ ಬಗ್ಗೆ ಆಲೋಚನೆ ಮಾಡಿದೆ. ಎಸ್ ಎಂ ಕೃಷ್ಣ ಅವರು ತಿರುಪತಿಯಲ್ಲಿ ಕರ್ನಾಟಕ ಟ್ರಸ್ಟ್ ರಚಿಸಿ, ವೈಭವವಾದ ಕಟ್ಟಡ ಕಟ್ಟುವ ಉದ್ದೇಶದಿಂದ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ್ದರು. ಅಷ್ಟೊತ್ತಿಗೆ ನಮ್ಮ ಸರ್ಕಾರದ ಅವಧಿ ಮುಗಿಯಿತು. ನನ್ನನ್ನ ಮುಂದುವರೆಸದ ಕಾರಣ ಆ ಕೆಲಸ ಮಾಡಲು ಆಗಿರಲಿಲ್ಲ. ಮಹಾರಾಜರ ಕಾಲದಲ್ಲೇ ನೀಡಿದ ಏಳು‌ ಎಕರೆ ಜಾಗ ಅಲ್ಲಿತ್ತು” ಎಂದರು.

ದ್ವಾರಕನಾಥ್ ಅವರ ಒಂದು ಭವಿಷ್ಯದ ಬಗ್ಗೆ ಹೇಳಿದರೆ ದೊಡ್ಡ ಸುದ್ದಿಯಾಗಲಿದೆ

“ದ್ವಾರಕನಾಥ್ ಅವರು ಸುಬ್ರಹ್ಮಣ್ಯ ದೇವಾಲಯ ಕಟ್ಟುವ ವಿಚಾರ ಹೇಳುತ್ತಲೇ ಇದ್ದರು. ನಾನು ಸಂದರ್ಭ ಬರಲಿ ಎಂದು ಹೇಳಿದ್ದೆ. ಈಗ ಸಂದರ್ಭ ಬಂದಿದೆ. ದ್ವಾರಕನಾಥ್ ಅವರು ನನಗೆ ಪೂಜ್ಯ ಗುರು ಸಮಾನರು. ಅವರ ಕುಟುಂಬ ಬಹಳ ಉತ್ತಮವಾಗಿ ಬೆಳೆಯುತ್ತಿದೆ. ದ್ವಾರಕನಾಥ್ ಅವರು ಹಿಂದೆ ಒಂದು ಭವಿಷ್ಯ ನುಡಿದಿದ್ದರು. ಅದನ್ನು ನಾನು ಇಲ್ಲಿ ಹೇಳಿದರೆ ದೊಡ್ಡ ಸುದ್ದಿಯಾಗುತ್ತದೆ” ಎಂದರು.

“ದೇವಾಲಯ ಎಂದರೆ ಭಕ್ತಿ, ಶಕ್ತಿ, ಸಂಸ್ಕಾರ, ಮತ್ತು ಧರ್ಮದ ನೆಲೆ. ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ. ಈ ದೇವಾಲಯದಲ್ಲಿ ಭಕ್ತರು ಬಂದು ಶಾಂತಿ ಪಡೆದುಕೊಳ್ಳಬೇಕು. ನಮ್ಮ ವೀರ ಗಂಗಾಧರ ಅಜ್ಜಯ್ಯ ಅವರು ಮಾನವ ಧರ್ಮಕ್ಕೆ ದೇವ ಆಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಅಂತ ಹೇಳಿ ಅವರು ಘೋಷಣೆಯನ್ನ ಮಾಡಿದ್ದಾರೆ” ಎಂದರು.

“ದ್ವಾರಕಾನಾಥ ಅವರು ಸುಬ್ರಹ್ಮಣ್ಯೇಶ್ವರ ದೇವಾಲಯ ಕಟ್ಟಿದ್ದಾರೆ. ಆಗ ಅವರ ಮನೆ ದೇವರು ಮೈಲಾರೇಶ್ವರ ಅಂತ ಹೇಳಿದರು. ಆದರೆ ಧರ್ಮ ಯಾವುದಾದರೂ ತತ್ವ ಒಂದೇ. ನಾಮ ಯಾವುದಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಯಾವುದಾದರೂ ನಿಷ್ಠೆ ಒಂದೇ. ದೇವರೊಬ್ಬ ನಾಮ ಹಲವು” ಎಂದರು.

“ದೇವರ ರೂಪ ವಿವಿಧ ರೀತಿಯಲ್ಲಿ ಇರುತ್ತದೆ. ಕಲ್ಲು, ಗೋಡೆ, ಮನುಷ್ಯ ಹೀಗೆ ಪಶುಗಳಲ್ಲಿ ದೈವ ಸ್ವೂರಪವಿದೆ. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದಾರೆ. ವಿಧಾನಸೌಧದ ಮೇಲೆ ಸರ್ಕಾರದ ಕೆಲಸ ದೇವರ ಕೆಲಸ ಎಂದು ಬರೆದಿದ್ದಾರೆ” ಎಂದರು.

“ಶಿವನ ಮೂರನೇ ಕಣ್ಣಿನ ತೇಜಸ್ಸಿನಿಂದ ಹುಟ್ಟಿದವನು ಸುಬ್ರಹ್ಮಣ್ಯ. ನಾವು ಯಾವುದೇ ಪೂಜೆ ಮಾಡಿದ್ರು, ಏನೇ ಮಾಡಿದರೂ ಎಷ್ಟೇ ನದಿಗಳು ಹರಿದರೂ ಕೊನೆಗೆ ಸಮುದ್ರಕ್ಕೆ ಸೇರುವುದು. ಅದೇ ರೀತಿ ಯಾವುದೇ ದೇವರಿಗೆ ಪೂಜೆ ಮಾಡಿದರೂ ಕೊನೆಗೆ ಆ ಭಗವಂತನಿಗೆ ಸೇರಲಿದೆ” ಎಂದರು.

“ಆ ಸುಬ್ರಹ್ಮಣ್ಯನ ಕೃಪೆ ಎಲ್ಲರ ಮೇಲಿರಲಿ. ಒಬ್ಬರಿಂದಲೇ ದೇವಸ್ಥಾನ ಕಟ್ಟಲು ಸಾಧ್ಯವಿಲ್ಲ. ಎಲ್ಲರೂ ಕೈ ಜೋಡಿಸಿದರೆ ಮಾತ್ರ ಸಾಧ್ಯ. ಇದು ಜನರ, ನಿಮ್ಮ ದೇವಾಲಯ ಆಗಬೇಕು” ಎಂದರು.

ಭಕ್ತಿಯ ಅಡಿಪಾಯದ ಮೇಲೆ ದೈವ ಕೃಪೆಯ ಗೋಪುರ

“ಭಕ್ತಿಯ ಅಡಿಪಾಯದ ಮೇಲೆ ದೈವ ಕೃಪೆಯ ಗೋಪುರವನ್ನ ಕಟ್ಟಲಿಕ್ಕೆ ನಾವೆಲ್ಲ ಸೇರಿದ್ದೇವೆ. ಧರ್ಮ ಏವ ಹತೋ ಹಂತಿ ಧರ್ಮೋ ರಕ್ಷತಿ ರಕ್ಷಿತಃ/ ತಸ್ಮಾಧರ್ಮೋ ನ ಹಂತವ್ಯೋ ಮಾ ನೋ ಧರ್ಮೋ ಹತೋವಧೀತ್. ಯಾರು ಧರ್ಮವನ್ನ ಕಾಪಾಡುತ್ತಾರೋ ಧರ್ಮವು ಅವರನ್ನ ಕಾಪಾಡುತ್ತದೆ. ಯಾವುದೇ ಜಾತಿಯವರು ಇರಬಹುದು ಹಿಂದೂ, ಕ್ರೈಸ್ತ, ಮುಸಲ್ಮಾನ, ಸಿಖ್, ಜೈನ ಹೀಗೆ ಅವರವರ ಧರ್ಮ, ಪದ್ಧತಿಯನ್ನ ಕಾಪಾಡಿಕೊಳ್ಳಬೇಕು. ನಾವಿದನ್ನೆಲ್ಲಾ ಸೃಷ್ಟಿ ಮಾಡಿದ್ದೇವೆ. ದೇವಸ್ಥಾನ ಮಾಡೋದು ಅವರ ಕೆಲಸ ಅಲ್ಲ. ನಿಮ್ಮ ನಮ್ಮೆಲ್ಲರ ಕೆಲಸ. ಇದನ್ನ ಬೆಳೆಸಿ ಉಳಿಸಿಕೊಳ್ಳೋಣ” ಎಂದು ಹೇಳಿದರು.

“ಇದು ಭಕ್ತಿಯ ಪೂಜೆ. ಇದು ನಮ್ಮ ಭೂಮಿ ಪೂಜೆ. ಇದು ನಮ್ಮ ನಾಡಿನ ಭಕ್ತಿಯ ಸಂಪ್ರದಾಯದ ಪೂಜೆ” ಎಂದರು.

“ನನಗೆ ಸಿ ವಿ ಶಾಸ್ತ್ರೀ ಅವರು ದ್ವಾರಕನಾಥ್ ಅವರನ್ನು ಪರಿಚಯ ಮಾಡಿಕೊಟ್ಟರು. ನನಗೆ ಮೂವತ್ತೈದು ವರ್ಷದಿಂದಲೇ ಮಾರ್ಗದರ್ಶನ ನೀಡುತ್ತಾ ಬಂದವರು. ನನ್ನ ಹಾಗೂ ಅವರ ನಡುವೆ ನಡೆದ ವ್ಯವಹಾರಗಳು, ಚಟುವಟಿಕೆಗಳು, ಅವರು ಕೊಟ್ಟಂತ ಮಾರ್ಗದರ್ಶನ ಹೀಗೆ ಎಲ್ಲಾ ಸನ್ನಿವೇಶಗಳನ್ನು ಹೇಳಿದರೆ ಒಂದು ದೊಡ್ಡ ಚರಿತ್ರೆಯ ಪುಸ್ತಕವನ್ನೇ ಬರೆಯಬಹುದು” ಎಂದರು.

ಧಮ್ಕಿಗಳಿಗೆ ದ್ವಾರಕನಾಥ್ ಅವರು ಹೆದರಿಲ್ಲ

“ದ್ವಾರಕನಾಥ್ ಅವರೂ ಟೀಕೆಗೆ ಒಳಗಾಗಿದ್ದಾರೆ. ಅವರ ಮೇಲೆ ಮಾಧ್ಯಮದವರೂ ದಾಳಿ ಮಾಡಿದ್ದಾರೆ. ಡಿ ಕೆ ಶಿವಕುಮಾರ್ ಪರವಾಗಿ ಮಾತನಾಡುತ್ತಿದ್ದೀರಿ ಎಂದು ಕೇಳಿದ್ದಾರೆ. ಇಪ್ಪತ್ತೈದು ವರ್ಷದಿಂದ ಬೇಕಾದಷ್ಟು ಅವರಿಗೆ ಧಮ್ಕಿಗಳನ್ನ ಹಾಕ್ತಿದ್ದಾರೆ. ಆ ಧಮ್ಕಿಗಳಿಗೆ ಅವರು ಯಾವತ್ತೂ ಹೆದರಿಕೊಂಡಿಲ್ಲ. ದೇವರಾಜ ಅರಸು ಅವರು, ಎಸ್ ಎಂ ಕೃಷ್ಣ ಅವರು, ಧರ್ಮಸಿಂಗ್ ಅವರು ಅನೇಕ ಮುಖ್ಯಮಂತ್ರಿಗಳು ಅವರ ಸಲಹೆ ಪಡೆದಿದ್ದಾರೆ” ಎಂದರು.

“ಮಾಜಿ ಸಂಸದರ ಮಗ ನನ್ನ ಸ್ನೇಹಿತರಾದ ಸುಬ್ರಹ್ಮಣ್ಯ ಅವರ ಪತ್ನಿಗೆ ಕ್ಯಾನ್ಸರ್ ಆಗಿತ್ತು. 1993-94 ರ ಕಾಲ ಅಂದು ನಾನು ನನ್ನ ಪತ್ನಿ ಅವರನ್ನು ನೋಡಲು ಹೋಗಿದ್ದೆವು. ಅಂದು ಅಷ್ಟೊಂದು ವೈದ್ಯಕೀಯ ಸವಲತ್ತು ಇರಲಿಲ್ಲ. ಅವರು ಉಳಿಯುವ ಸ್ಥಿತಿಯಲ್ಲೂ ಇರಲಿಲ್ಲ. ನಾನು ಅವರ ಆಪ್ತರಿಂದ ಹೆಣ್ಣುಮಗಳ ಹಾಗೂ ಮಕ್ಕಳ ಜಾತಕ ತರಲು ಹೇಳಿದೆ. ಅದನ್ನು ಗುರುಗಳಾದ ದ್ವಾರಕನಾಥ್ ಅವರಿಗೆ ನೀಡಿದೆ. ಅವರು ಅದನ್ನು ನೋಡಿ ಈ ಮಕ್ಕಳ ಜಾತಕದಲ್ಲಿ ತಾಯಿಯನ್ನು ಕಳೆದುಕೊಳ್ಳುವುದಿಲ್ಲ ಎಂದಿದೆ ಎಂದರು. ನಂತರ ಹೊಸದುರ್ಗದ ಬಳಿ ಇರುವ ಆಂಜನೇಯನ ದೇವಸ್ಥಾನಕ್ಕೆ ತೆರಳಿ ಪೂಜೆ ಹೋಮ ಮಾಡಿ ಸಾಕು ಎಂದರು. ಆ ಹೆಣ್ಣು ಮಗಳು ಇನ್ನೂ ಆರೋಗ್ಯವಾಗಿ ಇದ್ದಾರೆ” ಎಂದರು.

“ಭಕ್ತಿಯ ಮೂಲಕ ಆಧ್ಯಾತ್ಮದ ದೊಡ್ಡ ಬೀಜವನ್ನ ಬಿತ್ತುವ ಕೆಲಸ ಮಾಡಲಾಗಿದೆ. ನಿಮ್ಮೆಲ್ಲರಿಗೂ ಕೂಡ ಮಂಗಳವಾಗಲಿ, ಶುಭವಾಗಲಿ, ಆರೋಗ್ಯ, ಜ್ಞಾನ, ನೆಮ್ಮದಿ ದೊರೆಯಲಿ. ಭಾರತೀ ತೀರ್ಥ ಮಹಾಸ್ವಾಮಿಗಳು ಹಾಗೂ ವಿಧುಶೇಖರ ಭಾರತೀ ತೀರ್ಥ ಸ್ವಾಮೀಗಳು ನನಗೆ ಆಶೀರ್ವಾದ ಮಾಡಿಕೊಂಡು ಬಂದಿದ್ದಾರೆ. ಈ ಪವಿತ್ರವಾದ ಸ್ಥಳದಲ್ಲಿ ಶಾಂತಿ, ನೆಮ್ಮದಿ ಜನರಿಗೆ

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img