ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು! 🌾
ಸವದತ್ತಿ ತಾಲೂಕಿನ ಕಟಮಳ್ಳಿ ಗ್ರಾಮದ ರೈತರ ಬಹುದಿನಗಳ ಬೇಡಿಕೆಯಾಗಿದ್ದ ಚೆಕ್ ಡ್ಯಾಂ ನಿರ್ಮಾಣಕ್ಕೆ ಇಂದು ಚಾಲನೆ
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಚೆಕ್ ಡ್ಯಾಂ (ಕಿರು ಆಣೆಕಟ್ಟು) ನಿರ್ಮಾಣ ಕಾಮಗಾರಿಗೆ ಇಂದು ಕಟಮಳ್ಳಿ ಗ್ರಾಮದ ಹತ್ತಿರ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ .
ಈ ಯೋಜನೆಯಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಾಗುವುದಲ್ಲದೆ, ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗಲಿ ಎಂಬುದು ನಮ್ಮ ಆಶಯ.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಗ್ರಾಮದ ಹಿರಿಯರು, ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು


