ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಭಾಗಗಳ ಕಬ್ಬು ಬೆಳೆಯುವ ರೈತರು ನ್ಯಾಯಯುತ ಬೆಲೆಗೆ ಆಗ್ರಹಿಸಿ ಅಹೋರಾತ್ರಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಪಾಲ್ಗೊಂಡು ರೈತರೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್, ವಿಜಯಪುರ ಜಿಲ್ಲಾಧ್ಯಕ್ಷರಾದ ಶ್ರೀ ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕರಾದ ಶ್ರೀ ವಿಶ್ವನಾಥ್ ಪಾಟೀಲ್, ರೈತ ಹೋರಾಟಗಾರರು, ವಿವಿಧ ರೈತಪರ ಸಂಘಟನೆಗಳ ಪ್ರಮುಖರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



