Tuesday, February 10, 2026
22.1 C
Belagavi

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಯೂ ಮುಖ್ಯ: ಸಚಿವ ಮಧು ಬಂಗಾರಪ್ಪ

advertisement

spot_img

ಬೆಂಗಳೂರು: “ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ,” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಎದುರು, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “2026ರ ಸಾಲಿನ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಹಾಗೂ ಬೃಹತ್ ಚಿತ್ರಕಲಾ ಪ್ರದರ್ಶನ”ವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು, “ಕರ್ನಾಟಕ ರಾಜ್ಯಕ್ಕೆ ಕಲೆಯ ವಿಷಯದಲ್ಲಿ ಬಹಳ ದೊಡ್ಡ ಮಟ್ಟದ ಮೌಲ್ಯ ಹಾಗೂ ಇತಿಹಾಸವಿದೆ. ನಮ್ಮ ಈ ಪರಂಪರೆ ಮುಂದಿನ ಪೀಳಿಗೆಗೆ ತಲುಪಬೇಕಾದರೆ, ಶಾಲೆಗಳಲ್ಲಿ ಕಲೆಯನ್ನು ಹೇಳಿಕೊಡುವ ಶಿಕ್ಷಕರು ಬೇಕು. ನಮಗೆ ಸಾಮಾನ್ಯ ಶಿಕ್ಷಕರು, ದೈಹಿಕ ಶಿಕ್ಷಕರ ಜೊತೆಗೆ ಕಲಾ ಶಿಕ್ಷಕರೂ ಬೇಕಾಗಿದ್ದಾರೆ. ಆದ್ಯತೆಯ ಮೇರೆಗೆ ಆದಷ್ಟು ಬೇಗ ಶಿಕ್ಷಕರ ನೇಮಕಾತಿ ಮಾಡಲು ಮತ್ತು ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ,” ಎಂದು ಹೇಳಿದರು.

ಗದಗ ಜಿಲ್ಲೆಯ ಶಿಕ್ಷಕರು ಸಂಘಟಿತರಾಗಿ ರಾಜಧಾನಿಯ ಶಕ್ತಿಕೇಂದ್ರದ ಬಳಿ ಇಂತಹ ಕಲಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದನ್ನು ಸಚಿವರು ಶ್ಲಾಘಿಸಿದರು.“ನಿಮ್ಮಲ್ಲಿರುವ ಪ್ರತಿಭೆಯಿಂದ ನೀವು ಮುಂದುವರಿದ್ದೀರಿ, ಆದರೆ ಅದು ಮುಂದಿನ ಪೀಳಿಗೆಗೆ ಹೋಗಬೇಕಾದರೆ ನಿಮ್ಮಂತಹ ಗುರುಗಳು ಶಾಲೆಗಳಲ್ಲಿರಬೇಕು. ಇಂತಹ ಸೃಜನಶೀಲ ಪ್ರಯತ್ನಗಳು ಕೇವಲ ಒಂದು ಜಿಲ್ಲೆಗೆ ಸೀಮಿತವಾಗದೆ ರಾಜ್ಯದಾದ್ಯಂತ ವಿಸ್ತರಿಸಲಿ,” ಎಂದು ಆಶಿಸಿದರು.

ಪ್ರದರ್ಶನದಲ್ಲಿ ಶಿಕ್ಷಕರು ರಚಿಸಿದ ಕಲಾಕೃತಿಗಳು ನೋಡುಗರ ಮನ ಸೆಳೆದವು. ಪ್ರಕೃತಿ ಸೌಂದರ್ಯದ ಅನಾವರಣದ ಜೊತೆಗೆ, ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಸಂದೇಶ ಸಾರುವ ಅನೇಕ ಅರ್ಥಪೂರ್ಣ ಚಿತ್ರಗಳು ಪ್ರದರ್ಶನಗೊಂಡಿದ್ದವು.ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕರಾದ ಶ್ರೀ ಎಸ್.ವಿ. ಸಂಕನೂರ, ಶ್ರೀ ಶಶಿಲ್ ಜಿ. ನಮೋಶಿ, ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ್ ಹಾಗೂ ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಕಲಾವಿದರು ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img